2018-19ರ ಕೊನೆಯ ಬಜೆಟ್ನಲ್ಲಿ ಈ ಎರಡೂ ವಿಮಾನಗಳಿಗೆ ಹಣಕಾಸು ಸಚಿವಾಲಯ ಹಣ ಬಿಡುಗಡೆ ಮಾಡಿತ್ತು. ಅಲ್ಲದೆ, ಕಳೆದ ಬಜೆಟ್ ನಲ್ಲಿ ಈ ವಿಮಾನಗಳ ನಿರ್ವಹಣೆಗಾಗಿ ಕೇಂದ್ರ ಸರ್ಕಾರ ಒಟ್ಟು 4,669 ಕೋಟಿ ರೂ. ವೆಚ್ಚ ಮಾಡಿತ್ತು.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ಹಲವಾರು ಹೊಸ ಯೋಜನೆಗಳನ್ನು ಘೋಷಿಸಿದರು. 'ಒಂದು ರಾಷ್ಟ್ರ, ಒಂದು ಗ್ರಿಡ್' ಎಂಬ ಯೋಜನೆ ಕೂಡ ಒಂದು ಪ್ರಮುಖ ಘೋಷಣೆಯಾಗಿದೆ.
ನಮ್ಮ ಸರ್ಕಾರ ಯಾವುದೇ ಕಾರ್ಯವನ್ನು ಕೈಗೊಂಡರೂ ಅದರಲ್ಲಿ ಗ್ರಾಮೀಣ ಜನತೆ, ಬಡವರು ಮತ್ತು ರೈತರನ್ನು ಹೆಚ್ಚು ಕೆಂದ್ರೀಕರಿಸಲಾಗುತ್ತದೆ ಎಂದು ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಮ್ಮ ಮೊದಲ ಬಜೆಟ್ ಭಾಷಣದಲ್ಲಿ ರಾಷ್ಟ್ರೀಯ ಸಾರಿಗೆ ಕಾರ್ಡ್ (ಎನ್ಟಿಸಿ) ಘೋಷಿಸಿದರು. ರೈಲು ಮತ್ತು ಬಸ್ನಲ್ಲಿ ಪ್ರಯಾಣಿಸಲು ಈ ಕಾರ್ಡ್ ಅನ್ನು ಬಳಸಲಾಗುತ್ತದೆ.
ನಮ್ಮ ಉದ್ದೇಶ ಬಲಿಷ್ಠ ರಾಷ್ಟ್ರಕ್ಕಾಗಿ, ಬಲಿಷ್ಠ ನಾಗರಿಕರಿಗಾಗಿ ಆಗಿದೆ. ಹಾಗಾಗಿ ದೃಢ ನಿಶ್ಚಯದ ಮಾನವ ಪ್ರಯತ್ನದಿಂದ ಸರ್ವಕಾರ್ಯವೂ ಖಂಡಿತವಾಗಿ ಪೂರ್ಣಗೊಳ್ಳುತ್ತದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದರು.
ಇಂದು ದೇಶದಲ್ಲಿ ಎಲ್ಲರ ಚಿತ್ತ ಕೇಂದ್ರ ಬಜೆಟ್ ನತ್ತ ನೆಟ್ಟಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೋದಿ ಸರ್ಕಾರದ ಎರಡನೇ ಅವಧಿಯ ಮೊದಲ ಪೂರ್ಣ ಬಜೆಟ್ ಮಂಡಿಸಲಿದ್ದಾರೆ. ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಇದೇ ಮೊದಲ ಬಾರಿಗೆ ಬಜೆಟ್ ಮಂಡಿಸಲಿದ್ದಾರೆ. ತೆರಿಗೆದಾರರಿಗೆ ಈ ಬಾರಿ ಬಜೆಟ್ನಿಂದ ದೊಡ್ಡ ಪರಿಹಾರ ಪಡೆಯುವ ನಿರೀಕ್ಷೆಯಿದೆ.
ಬಜೆಟ್ಗೆ ಒಂದು ದಿನ ಮೊದಲು ಗುರುವಾರ ಆರ್ಥಿಕ ಸಮೀಕ್ಷೆಯನ್ನು ಸಂಸತ್ತಿನಲ್ಲಿ ಪರಿಚಯಿಸಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮೇಲ್ಮನೆ ರಾಜ್ಯಸಭೆಯಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಿದರು.
ಬಜೆಟ್ 2019, ಮುಖ್ಯ ಆರ್ಥಿಕ ಸಲಹೆಗಾರ ಕೆ.ವಿ.ಸುಬ್ರಮಣ್ಯಂ ಅವರು ಗುರುವಾರ ಬಜೆಟ್ಗೂ ಮೊದಲು ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದಾರೆ. ಆರ್ಥಿಕ ಸಮೀಕ್ಷೆಯ ನಂತರ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು 2019 ರ ಬಜೆಟ್ (ಬಜೆಟ್ 2019) ಅನ್ನು ಶುಕ್ರವಾರ ಮಂಡಿಸಲಿದ್ದಾರೆ.
ಲೋಕಸಭಾ ಚುನಾವಣೆಯನ್ನು ಮುಂದಿಟ್ಟುಕೊಂಡು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಮಧ್ಯಂತರ ಬಜೆಟ್ ಮಂಡಿಸುತ್ತಿದ್ದು, ಜನಪ್ರಿಯ ಯೋಜನೆಗಳನ್ನು ಘೋಷಣೆ ಮಾಡುತ್ತಿದೆ ಎಂದು ಖರ್ಗೆ ಟೀಕಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.