ಬಿಜೆಪಿಯ ತತ್ವ ಸಿದ್ಧಾಂತ ಈ ದೇಶಕ್ಕೆ ಮಾರಕ. ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಸಮಾನತೆ ಪ್ರತಿಪಾದಿಸಿದ್ದಾರೆ. ಆದರೆ ಬಿಜೆಪಿ ಒಡೆದು ಆಳುವ ಕೆಲಸ ಮಾಡುತ್ತಿದೆ. ಜಾತಿ ಧರ್ಮ ಒಡೆಯುವ ಪಕ್ಷ ನಮಗೆ ಬೇಡ ಎಂದರು.
ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಕಾಂಗ್ರೆಸ್-ಜೆಡಿಎಸ್ ನಾಯಕರು ಇದೀಗ ಉಪಚುನಾವಣೆಯಲ್ಲಿ ಬಿಜೆಪಿಯಿಂದ ಚುನಾವಣೆ ಎದುರಿಸುತ್ತಿದ್ದಾರೆ. ಆದರೆ ಚುನಾವಣಾ ಪ್ರಚಾರದ ವೇಳೆ ಹಲವೆಡೆ ಮತದಾರರು ಕೇಳುವ ಪ್ರಶ್ನೆಗೆ ಉತ್ತರಿಸಲಾಗದೆ ಅನರ್ಹ ಶಾಸಕರು ಪೇಚಿಗೆ ಸಿಲುಕಿದ್ದಾರೆ.
ಸ್ವಾರ್ಥಕ್ಕಾಗಿ ನಂಬಿದವರ ಬೆನ್ನಿಗೆ ಚೂರಿ ಹಾಕುವವರಿಗೆ ಮತ ನೀಡಿದರೆ ಅಂಥವರು ಜನರ ಪರವಾಗಿ ಕೆಲಸ ಮಾಡುವರೇ? ರಾಜಕೀಯ ಪಕ್ಷಗಳು ಉಳಿದಿರುವುದು ಜನರಿಂದ, ಕಾರ್ಯಕರ್ತರಿಂದಲೇ ಹೊರತು ನಾಯಕರುಗಳಿಂದ ಅಲ್ಲ. ಸಾವಿರ ಪಕ್ಷಗಳನ್ನು ಉಳಿಸುವ, ಬೆಳೆಸುವ ಶಕ್ತಿ ಇರುವುದು ಮತದಾರರಲ್ಲಿ ಮಾತ್ರ ಎಂಬುದನ್ನು ಮರೆಯಬಾರದು- ಹೊಸಕೋಟಿ ಚುನಾವಣಾ ಪ್ರಚಾರದ ವೇಳೆ ಮಾಜಿ ಸಿಎಂ ಸಿದ್ದರಾಮಯ್ಯ
ಬಿಜೆಪಿ ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಮತ್ತು ಜನತಾದಳ-ಸೆಕ್ಯುಲರ್ (ಜೆಡಿ-ಎಸ್) ಎಲ್ಲಾ 15 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರತ್ಯೇಕವಾಗಿ ಸ್ಪರ್ಧಿಸುತ್ತಿದ್ದು ತ್ರಿಕೋನ ಸ್ಪರ್ಧೆ ಏರ್ಪಡುವ ಸಾಧ್ಯತೆಯಿದೆ.
ದಿಢೀರ್ ಎಂದು ಬಂದಿದ್ದ ಉಪ ಚುನಾವಣೆಯಿಂದ ಪ್ರಮುಖವಾಗಿ ಅನರ್ಹರು ಮತ್ತು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳು ಪತರುಗುಟ್ಟಿ ಹೋಗಿದ್ದವು. ಚುನಾವಣೆಗೆ ಹುರಿಯಾಳುಗಳನ್ನು ಅಣಿಗೊಳಿಸಲು ನಿರತವಾಗಿದ್ದವು. ಇದಾದ ಬಳಿಕ ಸೆಪ್ಟೆಂಬರ್ 26ರಂದು ಸುಪ್ರೀಂ ಕೋರ್ಟ್ ಉಪ ಚುನಾವಣೆಗೆ ತಡೆ ನೀಡಿ ಎಲ್ಲರಲ್ಲೂ ನಿರಾಳ ಉಂಟುಮಾಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.