ಕಾಂಗ್ರೆಸ್ನಿಂದಲೇ ಕೈ ಶಾಸಕರಿಗೆ ಹಣದ ಬೇಡಿಕೆ ಎಂದ ವಿಜಯೇಂದ್ರ
ವಿಜಯೇಂದ್ರ ಹೇಳಿಕೆಗೆ ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು
ವಿಜಯೇಂದ್ರ ತಮ್ಮ ಲೋಪ ಮುಚ್ಚಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ
ಯತ್ನಾಳ್ ಆರೋಪದ ಬಗ್ಗೆ ವಿಜಯೇಂದ್ರ ಏನು ಮಾತನಾಡಿಲ್ಲ
ಸರ್ಕಾರ ಕೆಡವಿ ಸಿಎಂ ಆಗಲು ಸಾವಿರ ಕೋಟಿ ಸಿದ್ಧ ಎಂದಿದ್ದಾರೆ
ವಿಜಯೇಂದ್ರ ಈ ಬಗ್ಗೆ ಇಡಿ, ಸಿಬಿಐನಿಂದ ತನಿಖೆ ಮಾಡಿಸಲಿ
ಇದೆಲ್ಲವನ್ನು ಮುಚ್ಚಿಕೊಳ್ಳಲು ವಿಜಯೇಂದ್ರ ಈ ರೀತಿ ಹೇಳುತ್ತಿದ್ದಾರೆ
BPL Card: ಹಿಂದಿನ ಕೇಂದ್ರ ಸಚಿವರಾಗಿದ್ದ ಮುರಳಿ ಮನೋಹರ ಜೋಶಿಯವರು ಆಹಾರ ಭದ್ರತೆ ಕಾಯ್ದೆಯನ್ನು ವಿರೋಧಿಸಿದ್ದರು. ಈಗ ಅನ್ಯಾಯ ಅನ್ಯಾಯ ಅಂತ ಸುಳ್ ಸುಳ್ಳೇ ಹೇಳಿ ಬಿಜೆಪಿ ನಾಯಕರು ರಾಜ್ಯದ ಜನರ ದಿಕ್ಕು ತಪ್ಪಿಸುತ್ತಿದ್ದಾರೆ - ಸಿಎಂ ಸಿದ್ದರಾಮಯ್ಯ
ʼಭಂಡ ಹಾಗೂ ಭ್ರಷ್ಟ ಮತ್ತು ವಲಸಿಗ ಕಾಂಗ್ರೆಸ್ಸಿಗ ಸಿದ್ದರಾಮಯ್ಯ ಅವರೇ, ನೀವು ನಿಮ್ಮ ಹಿಂದಿನ ಅವಧಿಯಲ್ಲಿ ಬಲಿಷ್ಠ ಲೋಕಾಯುಕ್ತ ಸಂಸ್ಥೆಗೆ ಬೀಗ ಜಡಿದು ದುರ್ಬಲ ಎಸಿಬಿ ಸ್ಥಾಪಿಸಿದ್ದು ನೀವು ಪರಪ್ಪನ ಅಗ್ರಹಾರದ ಖಾಯಂ ನಿವಾಸಿಯಾಗುವುದನ್ನು ತಪ್ಪಿಸಿಕೊಳ್ಳಲು ಎಂಬುದು ಎಲ್ಲರಿಗೂ ತಿಳಿದಿರುವ ವಿಷಯʼವೆಂದು ಬಿಜೆಪಿ ಟ್ವೀಟ್ ಮಾಡಿದೆ.
ಬಿಜೆಪಿ ನಿಲುವು ಅತ್ಯಂತ ಸ್ಪಷ್ಟವಾಗಿದೆ. ವಕ್ಫ್ ಕಾಯಿದೆ ಹೆಸರು ಹೇಳಿಕೊಂಡು ರೈತರು ಬೀದಿಪಾಲಾಗಬಾರದು. ಆ ನಿಟ್ಟಿನಲ್ಲಿ ಸರಕಾರ ಎಚ್ಚರಿಕೆ ವಹಿಸಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದರು.
ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಬಿ.ವೈ.ವಿಜಯೇಂದ್ರ
ಶಿಕಾರಿಪುರದ ಹಲವು ಮುಖಂಡರೊಡನೆ ಸತೀಶ್ ಜಾರಕಿಹೊಳಿ ಭೇಟಿ
ಶಿಕಾರಿಪುರದ ಕುಟ್ರಳ್ಳಿ ಟೋಲ್ನಿಂದ ಆಗ್ತಿರೋ ಸಮಸ್ಯೆ ಬಗ್ಗೆ ಚರ್ಚೆ
ಟೋಲ್ನಿಂದ ಸಾಕಷ್ಟು ಸಮಸ್ಯೆ ಅನುಭವಿಸುತ್ತಿರೋ ಜನರು
ಸಿಎಂ ಲೋಕಾಯುಕ್ತಕ್ಕೆ ಬೀಗ ಹಾಕಿ ಎಸಿಬಿ ಮಾಡಿದ್ರು. ತಮ್ಮ ಮೇಲೆ ಬಂದಿದ್ದ ಆರೋಪ ಮುಚ್ಚಿಕೊಳ್ಳಲು ಎಸಿಬಿ ಮಾಡಿದ್ರು. ತಮಗೆ ಬೇಕಾದ ಅಧಿಕಾರಿಗಳ ನೇಮಕ ಮಾಡಿಕೊಂಡರು. ಬಳಿಕ ಕೆಂಪಣ್ಣ ಆಯೋಗ ನೀಡಿದ ವರದಿ ಹಾಗೆ ಮುಚ್ಚಿಟ್ಟರು.
'ರಾಜೀನಾಮೆಯೊಂದೇ ನಿಮಗೆ ಉಳಿದಿರುವ ದಾರಿ'
'ಕೆಟ್ಟ ಮೇಲೆ ಬುದ್ಧಿ ಬಂತು'ಎಂಬ ಗಾದೆ ಮಾತು ಸಿಎಂಗೆ ಅನ್ವಯಿಸುತ್ತಿದೆ
CBI-ED ತನಿಖೆಗಳ ನಿರೀಕ್ಷೆಯಿಂದ ಸಿಎಂ ಬೆದರಿದ್ದಾರೆ
ಸಿಎಂ ಸಿದ್ದು ವಿರುದ್ಧ ಬಿ.ವೈ.ವಿಜಯೇಂದ್ರ ವಾಗ್ದಾಳಿ
ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ
ಬಿಜೆಪಿ ನಾಯಕರ ವಿರುದ್ಧ ಅತೃಪ್ತರು ಅಸಮಾಧಾನ ಮುಂದುವರೆದಿದೆ. ಈ ಹಿಂದೆ ಬೆಳಗಾವಿಯಲ್ಲಿ ಸಭೆ ನಡೆಸಿದ್ದ ರೆಬಲ್ ನಾಯಕರು, ದಾವಣಗೆರೆಯಲ್ಲಿ ಬಸನಗೌಡ ಯತ್ನಾಳ್ ನೇತೃತ್ವದಲ್ಲಿ ಮೀಟಿಂಗ್ ನಡೆಸಿದ್ರು. ಕೇಸರಿ ಬಂಡಾಯ ನಾಯಕರ ಸಭೆಯಲ್ಲಿ ಯಾರೆಲ್ಲ ಭಾಗಿಯಾಗಿದ್ರು, ಏನು ಚರ್ಚೆ ಮಾಡಿದ್ರು. ಅನ್ನೋದ್ರ ಬಗ್ಗೆ ಒಂದು ರಿಪೋರ್ಟ್ ಇಲ್ಲಿದೆ.. ನೋಡಿ..
ನ್ಯಾಯಯುತ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸುವ ಸಲುವಾಗಿ ಮುಖ್ಯಮಂತ್ರಿಗಳು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಅಲ್ಲದೆ ಅದಕ್ಕೂ ಮುನ್ನ ಅವರು ಈ ತನಿಖೆಯನ್ನು ಸ್ವತಂತ್ರ ತನಿಖಾ ಸಂಸ್ಥೆ, ಸಿಬಿಐಗೆ ವಹಿಸಬೇಕು. ಆಗ ಸಿದ್ದರಾಮಯ್ಯನವರು ಗೌರವ ಹೆಚ್ಚಾಗುತ್ತದೆ ಎಂದು ಬಿ.ವೈ. ವಿಜಯೇಂದ್ರ ಹೇಳಿದರು.
ಬಿಜೆಪಿ ಭಿನ್ನಮತ ಶಮನ ಸಭೆಯಲ್ಲಿ ಒಂದೊಂದೇ ಗುಟ್ಟುರಟ್ಟು
ಅಪ್ಪ-ಮಕ್ಕಳು ಸೇರಿ ನಮ್ಮ ಮೇಲೆ ಸವಾರಿ ಮಾಡುತ್ತಿದ್ದಾರೆ
ಬಿಜೆಪಿ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರೊಬ್ಬರು ಗುಡುಗು
ಆರ್ಎಸ್ಎಸ್ ಸಮ್ಮುಖದಲ್ಲೇ ಬಿಎಸ್ವೈ ಕುಟುಂಬದ ವಿರುದ್ಧ ಆಕ್ರೋಶ
ಬಿಎಸ್ವೈ, ವಿಜಯೇಂದ್ರ ವಿರುದ್ಧ ತೊಡೆ ತಟ್ಟಿರುವ ಭಿನ್ನರು
ಬಿಜೆಪಿ ಗುಪ್ತ ಸಭೆಯಲ್ಲಿ ವಿಸ್ಫೋಟಗೊಂಡ ಅಸಮಾಧಾನಿತರು
ವಿಜಯೇಂದ್ರ ಪರ ಮಾತಾಡದ ಯಾವುದೇ ಕಮಲ ನಾಯಕರು
ಎಲ್ಲರ ಅಹವಾಲು ಆಲಿಸಿದ ರಾಧಾಮೋಹನ್ ದಾಸ್ ಅಗರ್ವಾಲ್
ಪರಿವಾರ ರಾಜಕಾರಣ ವಿರುದ್ಧ ರೆಬೆಲ್ ನಾಯಕರ ಅಸಮಾಧಾನ
ದೆಹಲಿಯಲ್ಲಿ ಇಂದು ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು, ಸಚಿವರಿಗೆ ವಿಶ್ವಾಸ ಇಲ್ಲ; ವಿಧಾನಸೌಧಕ್ಕೂ ಸಚಿವರು ಹೋಗುತ್ತಿಲ್ಲ. ಯಾವಾಗ ಮುಖ್ಯಮಂತ್ರಿ ರಾಜೀನಾಮೆ ಕೊಡುತ್ತಾರೋ, ಯಾವಾಗ ಸಿದ್ದರಾಮಯ್ಯರ ಪರವಾಗಿ ಬ್ಯಾಟಿಂಗ್ ಮಾಡಲು ದೆಹಲಿಗೆ ಹೋಗಬೇಕೋ ಎಂಬ ಆತಂಕ ಅವರಲ್ಲಿದೆ ಎಂದು ವಿಶ್ಲೇಷಿಸಿದರು
ಭ್ರಷ್ಟ ಮುಖ್ಯಮಂತ್ರಿ ಸಿದ್ದರಾಮಯ್ಯನವರು ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ. "ಜನಸಾಮಾನ್ಯರ ಹಣ ಲೂಟಿ ಮಾಡಿದ ಕಾಂಗ್ರೆಸ್ ತೊಲಗಿಸಲು ಮೈಸೂರು ಚಲೋ" ಹಮ್ಮಿಕೊಂಡಿರುವ ಅವರು ಕಾಂಗ್ರೆಸ್ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು..
ಬಿಜೆಪಿ ಹಾಗೂ ಜೆಡಿಎಸ್ ನವರು ಪಾದಯಾತ್ರೆ ಮೂಲಕ ಇಲ್ಲಿಗೆ ಬರುತ್ತಿದ್ದಾರೆ. ಕುಮಾರಣ್ಣ, ಅಶೋಕಣ್ಣಾ, ವಿಜಯೇಂದ್ರ, ಅಶ್ವತ್ಥ್ ನಾರಾಯಣ, ಸಿ.ಟಿ ರವಿ ನೀವುಗಳು ನಮ್ಮ ಈ ಪ್ರಶ್ನೆಗಳಿಗೆ ಪಾದಯಾತ್ರೆ ವೇಳೆ ಉತ್ತರ ನೀಡಬೇಕು ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
ಸಾಮೂಹಿಕ ನಾಯಕತ್ವದಲ್ಲಿ ಪಾದಯಾತ್ರೆ ನಡೆಸುತ್ತೇವೆ
ಮುಡಾ ಹಗರಣದ ವಿರುದ್ಧ ನಾವು ಹೋರಾಟ ಮಾಡುತ್ತೇವೆ
ಅಪ್ಪ-ಮಕ್ಕಳ ಕಪಿಮುಷ್ಠಿಯಿಂದ ಪಕ್ಷ ಹೊರ ಬರಬೇಕು
ಬಿಎಸ್ವೈ, ವಿಜಯೆಂದ್ರ ವಿರುದ್ದ ರಮೇಶ್ ಜಾರಕಿಹೋಳಿ ಕಿಡಿ
ಇಂದು ನಗರದಲ್ಲಿ ನಡೆದ ಬಿಜೆಪಿ-ಜೆಡಿಎಸ್ ಪಕ್ಷಗಳ ಮುಖಂಡರ ಸಭೆಯಲ್ಲಿ ಈ ಕುರಿತು ಚರ್ಚಿಸಿ ನಿರ್ಧರಿಸಲಾಗಿದೆ. ಬೆಂಗಳೂರಿನಿಂದ ಮೈಸೂರಿಗೆ ಪಾದಯಾತ್ರೆಯಲ್ಲಿ ತೆರಳಲು 7 ದಿನ ಬೇಕಾಗಲಿದೆ. ಹಿರಿಯ ನಾಯಕ ಬಿ.ಎಸ್.ಯಡಿಯೂರಪ್ಪ, ಎಚ್.ಡಿ.ಕುಮಾರಸ್ವಾಮಿ ಅವರು ಕೂಡ ಪಾದಯಾತ್ರೆಯಲ್ಲಿ ಭಾಗವಹಿಸುತ್ತಾರೆ. ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.