Karnataka Assembly Elections 2023: ಬಿಎಸ್ವೈ ಪುತ್ರ ಬಿ.ವೈ. ವಿಜಯೇಂದ್ರ ಅವರು 2019 ರ ಉಪಚುನಾವಣೆಯಲ್ಲಿ ಕೆ ಆರ್ ಪೇಟೆಯನ್ನ ಗೆಲ್ಲಲೇಬೇಕೆಂಬ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಿದ್ದರು. ಈ ಸಂದರ್ಭದಲ್ಲಿ ಒಂದು ತಿಂಗಳಿಗೂ ಹೆಚ್ಚು ಕಾಲ ಕೆ. ಆರ್. ಪೇಟೆಯಲ್ಲೇ ನೆಲೆಸಿ ಚುನಾವಣ ತಂತ್ರ ರೂಪಿಸಿ ಗೆಲುವು ಸಾಧಿಸೊ ಮೂಲಕ ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಿಜೆಪಿಯನ್ನ ಗೆಲ್ಲಿಸಿದ ಕೀರ್ತಿ ಪಡೆದುಕೊಂಡಿದ್ದರು.
ಜನರಿಗೆ ವಿದ್ಯುತ್, ಅಕ್ಕಿ ಉಚಿತವಾಗಿ ನೀಡುತ್ತೇನೆಂದು ಕಾಂಗ್ರೆಸ್ ನಾಯಕರು ಹೇಳುತ್ತಾರೆ. ಇಷ್ಟು ದಿನ ಏನು ಮಾಡುತಿದ್ದರು? ಜನರ ಕಣ್ಣಿಗೆ ಮಣ್ಣು ಎರಚುವ ಕಾರ್ಯವನ್ನು ಕಾಂಗ್ರೆಸ್ ಮಾಡುತ್ತಿದೆ ಎಂದು ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ರಾಜ್ಯದಲ್ಲಿ ಇನ್ನು ಕೆಲವೇ ತಿಂಗಳಲ್ಲಿ ಚುನಾವಣೆ ನಡೆಯುವ ಹಿನ್ನಲೆಯಲ್ಲಿ ಬಿಜೆಪಿ ತಯಾರಿ ಮಾಡ್ಕೊಳ್ಳುತ್ತಿದ್ದು, ರಾಜ್ಯದ ನಾಲ್ಕು ದಿಕ್ಕಿನಿಂದ ರಥ ಯಾತ್ರೆ ಮಾಡುವ ಸಂಕಲ್ಪ ಮಾಡಿದೆ. ಫೆಬ್ರವರಿ ಅಂತ್ಯದೊಳಗೆ ಆರಂಭ ಆಗಲಿರುವ ಈ ಯಾತ್ರೆಗೆ ಸಿಎಂ ಬಸವರಾಜ ಬೊಮ್ಮಾಯಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ನೇತೃತ್ವ ವಹಿಸಲಾಗಿದೆ.
ಬಿಜೆಪಿ ಜನಸ್ಪಂದನಾ ಸಮಾವೇಶ ಯಶಸ್ಸು ನೋಡಿ ಕಾಂಗ್ರೆಸ್ಗೆ ಗಾಬರಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿಕೆ ನೀಡಿದ್ದಾರೆ.. ಬಹಳ ಆತುರದಲ್ಲಿ ಅಧಿಕಾರಕ್ಕೆ ಬರಬೇಕಿದ್ದ ಅವರಿಗೆ ನೋವು. ಇದೆಲ್ಲದಕ್ಕೂ ಮುಂಬರುವ ದಿನದಲ್ಲಿ ಜನ ಉತ್ತರ ಕೊಡ್ತಾರೆ ಎಂದಿದ್ದಾರೆ.
ಕಾಂಗ್ರೆಸ್ನಲ್ಲಿ ಸಿಎಂ ಅಭ್ಯರ್ಥಿ ವಿಚಾರ ನಡೀತಿರೋ ಪೈಪೋಟಿ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಕೊಪ್ಪಳದ ಗವಿಮಠದಲ್ಲಿ ಮಾತನಾಡಿದ ವಿಜಯೇಂದ್ರ, ಕಾಂಗ್ರೆಸ್ನ ಕಿತ್ತಾಟ ಬಿಜೆಪಿಗೆ ಒಳ್ಳೆಯದೇ. ಈ ಕಿತ್ತಾಟದ ಲಾಭ ಮಾಡಿಕೊಳ್ಳಲು ಬಿಜೆಪಿ ಇಷ್ಟ ಪಡುವುದಿಲ್ಲ. ನಾವು ಪಕ್ಷದ ಸಿದ್ಧಾಂತ, ಅಭಿವೃದ್ಧಿ ಮೂಲಕ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂದು ಹೇಳಿದ್ದಾರೆ.
PSI ಅಕ್ರಮ ನೇಮಕಾತಿ ಹಗರಣದಲ್ಲಿ ಅಶೋಕ್, ಆರಗ ಜ್ಞಾನೇಂದ್ರ, ವಿಜಯೇಂದ್ರ ಹೆಸರು ಕೇಳಿ ಬರ್ತಿದೆ. ಹೀಗಾಗಿ ನ್ಯಾಯಾಂಗ ತನಿಖೆಯಾಗಲಿ ಎಂದು ನಾನು ಹೇಳಿದ್ದೇನೆ. ನನಗೆ ಇರೋ ಮಾಹಿತಿ ಮೇಲೆ ಕೇಳಿದ್ದೇನೆ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ..
ಕಾಂಗ್ರೆಸ್ ತಿರುಕನ ಕನಸು ಕಾಣ್ತಿದೆ ಎಂಬ ಯಡಿಯೂರಪ್ಪ ಹೇಳಿಕೆ ಅಂತರಾಳದಿಂದ ಹೇಳೋ ಮಾತಲ್ಲ ಅದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರನ್ನು ಸಿಎಂ ಸ್ಥಾನದಿಂದ ತೆಗೆದಿದ್ದಾರೆ. ಆ ಬಗ್ಗೆ ಅವರಿಗೆ ನೋವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ..
ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುತ್ತೆ ಅಂತಾ ಅದರ ಅರ್ಥ ಎಂದು ಕಾಂಗ್ರೆಸ್ ತಿರುಕನ ಕನಸು ಕಾಣ್ತಿದೆ ಎಂಬ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.