ಜೈಲಲ್ಲಿರುವ ಕೈದಿಗಳನ್ನು ಜಾತಿಯಾಧಾರಿತವಾಗಿ ವರ್ಗೀಕರಣ ಮಾಡಲಾಗುತ್ತಿತ್ತು. ಜಾತಿಯಾಧಾರಿತವಾಗಿ ಕೊಠಡಿಗಳನ್ನು ಹಂಚಿಕೆ ಮಾಡಲಾಗುತ್ತಿತ್ತು. ಜಾತಿಯ ಮಾನದಂಡವನ್ನು ಆಧರಿಸಿಯೆ ಕೆಲಸಗಳ ಹಂಚಿಕೆಯೂ ನಡೆಯುತ್ತಿತ್ತು. ಮೇಲ್ಜಾತಿ ಮೇಲ್ವರ್ಗದಿಂದ ಬಂದ ಕೈದಿಗಳಿಗೆ ಅಡುಗೆಗೆ ಸಂಬಂಧಿಸಿದ ಕೆಲಸಗಳನ್ನು ಕೊಡುವುದು ಹಾಗೂ ಕೆಳಜಾತಿವರ್ಗದಿಂದ ಬಂದ ಖೈದಿಗಳಿಗೆ ಟೈಲೆಟ್ ಬಾತ್ರೂಂ ಸ್ವಚ್ಚತೆಗೆ ನೇಮಿಸುವುದು ಜೈಲುಗಳಲ್ಲಿ ಸರ್ವೇಸಾಮಾನ್ಯ ಪ್ರಕ್ರಿಯೆಯಾಗಿದೆ.
ಪ್ರೀತಿ ಮಾಡಬಾರದು, ಮಾಡಿದರೆ ಜಗಕ್ಕೆ ಹೆದರಬಾರದು ಅಂತ ಹಂಸಲೇಖ ಹಾಡನ್ನ ಬರೆದ್ರು.. ಹಾಗೇಯೇ ಇಲ್ಲೊಂದು ಲವ್ಬರ್ಡ್ಸ್ ಸ್ವತಂತ್ರ್ಯವಾಗಿ ಹಾರಾಡಲು ಬಿಡಿ ಎಂದು ತಮ್ಮ ಪೋಷಕರ ಬಳಿ ಗೋಗೆರೆದಿದ್ರು. ಹಾಗಾದ್ರೆ ಅಂತರ್ಜಾತಿ ಪ್ರೇಮ ವಿವಾಹಕ್ಕೆ ಮುಂದೇನಾಯ್ತು..? ಇಲ್ಲಿದೆ ನೋಡಿ..
ಎಲ್ಲೆ ಇದ್ದರೂ ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕೆ ಕೈ ಮುಗಿದು ಮುಂದಿನ ಕೆಲಸ ಆರಂಭಿಸುತ್ತೇನೆ. ಈ ಕ್ಷೇತ್ರಕ್ಕೆ ಒಳ್ಳೆಯ ಕೆಲಸ ತರುವುದೇ ನನ್ನ ಉದ್ದೇಶ. ಮೊದಲ ಬಾರಿಗೆ ಈ ಕ್ಷೇತ್ರದಿಂದ ಮಂತ್ರಿಯಾದಗಿದ್ದೇನೆ. ಈ ಸೌಭಾಗ್ಯಕ್ಕಾಗಿ ನಾನು ಎಲ್ಲರಿಗೂ ಕೃತಜ್ಞಳಾಗಿದ್ದೇನೆ ಎಂದು ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ನಾನು ಕೊನೆಯವರೆಗೂ ಸಾಮಾಜಿಕ ನ್ಯಾಯ ಮತ್ತು ಸ್ವಾಭಿಮಾನದ ರಾಜಕಾರಣ ಮಾಡ್ತೀನಿ. ನಾವು ರೂಪಿಸುವ ಕಾರ್ಯಕ್ರಮಗಳೂ ಬಡವರ ಪರವಾಗಿ ಇರುತ್ತವೆ. ನಮ್ಮ ಕಾರ್ಯಕ್ರಮಗಳು ಮನೆ ಮನೆ ತಲುಪಿವೆ. ಬಿಜೆಪಿಯವರ ಟೀಕೆಗೆ ಜನ ಬೆಲೆ ಕೊಡಲ್ಲ. ನಾನೂ ಕೊಡಲ್ಲ. ನಾಡಿನ ಜನ ನಮ್ಮ ಜತೆಗಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಪರಿವಾರ ಸಮುದಾಯವನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸಿರುವ ಕುರಿತು ಇರುವ ಗೊಂದಲ ನಿವಾರಣೆಗೆ ಸಂಬಂಧಿಸಿದಂತೆ ಶಾಸಕ ಅನಿಲ್ ಚಿಕ್ಕಮಾದು ನೇತೃತ್ವದ ಸಮುದಾಯದ ಮುಖಂಡರ ನಿಯೋಗ ಹಾಗೂ ಸರ್ಕಾರದ ಹಿರಿಯ ಅಧಿಕಾರಿಗಳೊಂದಿಗೆ ಸುದೀರ್ಘ ಚರ್ಚಿಸಿದರು.
K S Ishwarappa : " ಶಿವಮೊಗ್ಗದ ಮುಸಲ್ಮಾನರು ಗಲಾಟೆ ಮಾಡೋರಲ್ಲ ನನಗೆ ನೂರಕ್ಕೆ ನೂರು ಗೊತ್ತು. ಹಿಂದೂಗಳಲ್ಲಿಯು ಕೆಲ ತಲೆಹರಟೆಗಳಿದ್ದಾರೆ. ನಾನು ಇಲ್ಲ ಅನ್ನಲ್ಲ. ಮುಸ್ಲಿಮರಲ್ಲಿಯು ತಲೆಹರಟೆಗಳಿದ್ದಾರೆ. ಅವರೊಂದು ನಾಲ್ಕು ಜನ ಇವರೊಂದು ನಾಲ್ಕು ಜನ ಸೇರ್ಕೊಂಡು ತಲೆಹರಟೆ ಕೆಲಸಮಾಡಿದಾಗ ಗಲಾಟೆ ಶುರುವಾಗುತ್ತದೆ " ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿರುವ ವಿಡಿಯೋವೊಂದು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ.
K. S. Ishwarappa : ಚುನಾವಣೆ ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಪ್ರಚಾರದ ಅಬ್ಬರವನ್ನೇ ನಡೆಸಿದೆ. ಈ ಮದ್ಯೆ ಕಾಂಗ್ರೇಸ್ ಹಾಗೂ ಬಿಜೆಪಿ ನಡುವೆ ವಿವಾದಗಳು ಪ್ರತ್ಯಾರೋಪಗಳು ಕೇಳಿಬರುತ್ತಿದ್ದು, ಇದೀಗ ಮಾಜಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ವಿವಾದಾತ್ಮಕ ಹೇಳಿಕೆ ಸಾಕಷ್ಟು ಚರ್ಚೆಗೆ ಎಡೆಮಾಡಿಕೊಟ್ಟಿದೆ. ಭಾನುವಾರ ನಡೆದ ಮಂಗಳೂರು ಉತ್ತರ ವಿಧಾನ ಸಭಾ ಕ್ಷೇತ್ರದ ವಿಜಯ ಸಂಕಲ್ಪ ಯಾತ್ರೆಯಲ್ಲಿ ಮಾಜಿ ಸಚಿವ ಈಶ್ವರಪ್ಪ ಭಾಷಣ ಸಂದರ್ಭದಲ್ಲಿ ಮಸೀದಿಯ ಅಝಾನ್ ಗೆ ಕೋಪಗೊಂಡ ಘಟನೆ ನಡೆದಿದೆ
Rakshith Shetty : ಕರಾವಳಿ ಭಾಗದ ಕಾಂಗ್ರೇಸ್ ನಾಯಕ ಮಿಥುನ್ ರೈ ನೀಡಿದ ಹೇಳಿಕೆ ಮೂರ್ನಾಲ್ಕು ದಿನಗಳಿಂದ ಭಾರಿ ಚರ್ಚೆಗೆ ಒಳಗಾಗಿತ್ತು. ಉಡುಪಿ ಶ್ರೀ ಕೃಷ್ಣ ಮಠಕ್ಕೆ ಭಿಮಿ ಕೊಟ್ಟವರು ಮುಸ್ಲಿಂ ರಾಜರು ಎನ್ನುವ ಮಿಥುನ್ ರೈ ಹೇಳಿಕೆಯಿಂದ ವಿರೋಧ ಪಕ್ಷದ ನಾಯಕರನ್ನು ಒಳಗೊಂಡಂತೆ ರಾಜ್ಯಾದ್ಯಂತ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ. ಇದೀಗ ಈ ವಿಚಾರವಾಗಿ ಕನ್ನಡ ಸ್ಟಾರ್ ನಟ ರಕ್ಷಿತ್ ಶೆಟ್ಟಿ ಕೂಡ ಸೋಷಿಯಲ್ ಮೀಡಿಯಾದಲ್ಲಿ ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.