ಕಾವೇರಿ ನೀರು ಹಂಚಿಕೆ ವಿವಾದ ಕುರಿತು ಪ್ರಧಾನಿ ಮೋದಿ ಅವರಿಗೆ ಮಾಜಿ ಪ್ರಧಾನಿ ದೇವೇಗೌಡ ಅವರು ಸುದೀರ್ಘ ಪತ್ರ ಬರೆದಿದ್ದಾರೆ. ಎರಡು ರಾಜ್ಯಗಳಿಗೆ ಸಂಬಂಧವಿಲ್ಲದ, ತಟಸ್ಥವಾದ ಒಂದು ಸಮಿತಿಯನ್ನು ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳಿಗೆ ಕಳಿಸಿ ವಸ್ತುನಿಷ್ಠ ಮಾಹಿತಿ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ದಾರೆ.
ಕಾವೆರಿ ವಿಚಾರದಲ್ಲಿ ಈ ಸರ್ಕಾರ ತೀವ್ರವಾದ ಗಂಡಾಂತರ ತಂದಿದೆ. ಮೊದಲಿಂದಲೂ ಎಡವಟ್ಟು ಮಾಡಿಕೊಂಡು ಬಂದಿದೆ. ಸುಪ್ರೀಂಕೋರ್ಟ್ ನಲ್ಲಿ ಸರಿಯಾಗಿ ವಾದ ಮಾಡದೇ ಮತ್ತೆ 7.5 ಟಿಎಂಸಿ ನಿರು ಬಿಡುವ ಪರಿಸ್ಥಿತಿಗೆ ತಂದಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆರೋಪಿಸಿದರು.
ನೀರಾವರಿ ಬಗ್ಗೆ ಕನಿಷ್ಠ ಜ್ಞಾನ, ತಿಳಿವಳಿಕೆ ಇಲ್ಲದವರು ಅಧಿಕಾರದಲ್ಲಿದ್ದರೆ ಏನಾಗುತ್ತದೆ ಎನ್ನುವುದಕ್ಕೆ ಕಾವೇರಿ ಬಿಕ್ಕಟ್ಟು ಸ್ಪಷ್ಟ ಉದಾಹರಣೆ. ಸುಪ್ರೀಂಕೋರ್ಟ್ ಆದೇಶ ನಿಜಕ್ಕೂ ದುರದೃಷ್ಟಕರ.ಆದರೆ, ಇಲ್ಲಿ ನ್ಯಾಯಾಲಯವನ್ನು ದೂರುವಂತಿಲ್ಲ ಎಂದು ಎಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದಾರೆ.
ಕುಡಿಯುವ ನೀರಿಗಾದರು ಉಳಿಸಿಕೊಳ್ಳಲು ರಾಜ್ಯ ಸರ್ಕಾರ ಹೋರಾಟ ಮಾಡಬೇಕು. ಇದರಲ್ಲಿ ನಮಗೆ ರಾಜಕಾರಣ ಮಾಡಲು ಇಷ್ಟ ಇಲ್ಲ. ಈಗಾಗಲೇ ರೈತರ ಬೆಳೆ ಒಣಗಿ ಹೋಗುತ್ತಿದೆ. ರಾಜ್ಯ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ಇಲ್ಲಿ ನಾವು ಅಣೆಕಟ್ಟು ಕಟ್ಟಿದ್ದೇವೆ. ನಮ್ಮ ಜನರ ಹಣದಲ್ಲಿ ಅಣೆಕಟ್ಟು ನಿರ್ಮಾಣ ಮಾಡಿದ್ದೇವೆ. ಕೇಂದ್ರ ಸರಕಾರವೇನೂ ನಮಗೇನೂ ಇದಕ್ಕೆ ಹಣ ಕೊಟ್ಟಿಲ್ಲ. ಅದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಅಣೆಕಟ್ಟು ಇರುವುದು ನಮ್ಮಲ್ಲಿ, ಅದನ್ನು ಕಟ್ಟಿದ್ದು ನಾವು. 200 ವರ್ಷಗಳಿಂದ ಅವರ ದಬ್ಬಾಳಿಕೆ ಸಹಿಸಿಕೊಂದಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕಿಡಿಕಾರಿದರು.
ಕಾವೇರಿ ನದಿ ನೀರು ವಿವಾದ ಸೇರಿದಂತೆ ರಾಜ್ಯದ ಹಲವಾರು ಸಮಸ್ಯೆಗಳ ಕುರಿತು ಚರ್ಚಿಸಲು ನಾಳೆ ನವದೆಹಲಿಯಲ್ಲಿ ಮಹತ್ವದ ಸಭೆ ಕರೆಯಲಾಗಿದೆ. ಈ ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರುಗಳು, ಲೋಕಸಭಾ ಸದಸ್ಯರು ಹಾಗೂ ರಾಜ್ಯ ಸಭಾ ಸದಸ್ಯರುಗಳು ಭಾಗಿಯಾಗಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.