Training for PUC-CET/NEET Exams: ಆಸಕ್ತರು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಆವರಣದಲ್ಲಿರುವ ʼಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರ'ದ ಕಚೇರಿಯಲ್ಲಿ ಬೆಳಗ್ಗೆ 10ಗಂಟೆಯಿಂದ ಸಂಜೆ 4ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು.
ನಾಳೆ ರಾಜ್ಯಾದ್ಯಂತ ಸಿಇಟಿ ಪರೀಕ್ಷೆಗಳು ನಡೆಯುತ್ತವೆ. ಬೆಂಗಳೂರಿನಲ್ಲಿ ಅತಿ ಹೆಚ್ಚು ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ನಿಯೋಜಿತ ಮುಖ್ಯಮಂತ್ರಿ ಹಾಗೂ ಉಪಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಅವರೇ ನಿಮ್ಮ ಪ್ರಮಾಣ ವಚನ ಸ್ವೀಕರಿಸುವ ದಿನವನ್ನು ಮುಂದೂಡಬಹುದಲ್ಲವೇ..? ಎಂದು ಬಿಜೆಪಿ ಪ್ರಶ್ನೆ ಮಾಡಿದೆ.
CM-DCM swearing Ceremony: ಮೇ 20ರಂದು ಮೊದಲ ದಿನ ಗಣಿತ ಮತ್ತು ಜೀವಶಾಸ್ತ್ರದ ಪರೀಕ್ಷೆ ಇದ್ದು, ಬೆಳಗ್ಗೆ 10.30ಕ್ಕೆ ಸಿಟಿಇ ಪರೀಕ್ಷೆಗಳು ಆರಂಭವಾಗಲಿವೆ. ಇದೇ ದಿನ ಮಧ್ಯಾಹ್ನ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿರುವ ಸಮಾರಂಭಕ್ಕೆ ಬೆಳಗ್ಗೆಯಿಂದಲೇ ಬೆಂಗಳೂರು ಮಾತ್ರವಲ್ಲದೆ ರಾಜ್ಯದ ಮೂಲೆ ಮೂಲೆಗಳಿಂದ ಪಕ್ಷದ ಕಾರ್ಯಕರ್ತರು, ಜನರು ಸಹಸ್ರಾರು ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆಯಲ್ಲಿ ತುಮಕೂರು ರಸ್ತೆ, ಮೈಸೂರು ರಸ್ತೆ, ಬಳ್ಳಾರಿ ರಸ್ತೆ ಸೇರಿದಂತೆ ನಗರದ ಬಹುತೇಕ ಎಲ್ಲ ಭಾಗಗಳ ಪ್ರಮುಖ ರಸ್ತೆಗಳಲ್ಲಿ ವಾಹನ ದಟ್ಟಣೆ ಹೆಚ್ಚಾಗಿ ಸುಗಮ ಸಂಚಾರಕ್ಕೆ ಸಮಸ್ಯೆಯಾಗುವ ಸಾಧ್ಯತೆ ಇದೆ.
CET Exam 2022: ಸಿಇಟಿ-2022ಕ್ಕೆ ಒಟ್ಟು 2,16,525 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದು, ರಾಜ್ಯಾದ್ಯಂತ 486 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಉದ್ದೇಶಿಸಲಾಗಿದೆ. ಈ ಪೈಕಿ 87 ಪರೀಕ್ಷಾ ಕೇಂದ್ರಗಳು ಬೆಂಗಳೂರಿನಲ್ಲಿದ್ದು, 399 ಕೇಂದ್ರಗಳು ರಾಜ್ಯದ ಉಳಿದ ಭಾಗಗಳಲ್ಲಿವೆ ಎಂದು ಕರ್ನಾಟಕ ಉನ್ನತ ಶಿಕ್ಷಣ ಸಚಿವರು ತಿಳಿಸಿದ್ದಾರೆ.
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ತೆಗೆದುಕೊಳ್ಳಲು ಹಿಜಾಬ್ ಧರಿಸಿರುವ ವಿದ್ಯಾರ್ಥಿಗಳು ಪರೀಕ್ಷಾ ಹಾಲ್ಗೆ ಪ್ರವೇಶಿಸಲು ಅನುಮತಿಸಲಾಗುವುದಿಲ್ಲ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಶುಕ್ರವಾರ ಪ್ರಕಟಿಸಿದೆ.
ಕಳೆದ ವರ್ಷ ಕೋವಿಡ್ ಕಾರಣಕ್ಕೆ ಕೇವಲ ಪರೀಕ್ಷೆಯಲ್ಲಿನ ಸಿಇಟಿ ಅಂಕಗಳನ್ನು ಮಾತ್ರ ಪರಿಗಣಿಸಲಾಗಿತ್ತು. ಆದರೆ, ಈ ಬಾರಿ ಸಿಇಟಿಯಲ್ಲಿ ಪಡೆಯುವ ಅಂಕಗಳು (ಶೇ. 50) ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯ ಅಂಕಗಳು (ಶೇ.50) ಸೇರಿ ಎರಡನ್ನು ಪರಿಗಣಿಸಿ ಮೆರಿಟ್ ಲಿಸ್ಟ್ ರೂಪಿಸಲಾಗುವುದು ಎಂದು ತಿಳಿಸಿದೆ.
CET Exam: ಈ ಬಗ್ಗೆ ಸೋಮವಾರ ಮಾಧ್ಯಮ ಮಿತ್ರರೊಂದಿಗೆ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಅವರು, ಬೇರೆಬೇರೆ ರಾಜ್ಯಗಳಲ್ಲಿ ಇಂತಹ ಪರೀಕ್ಷೆಗೆ ಗೊತ್ತುಪಡಿಸಿಕೊಂಡಿರುವ ಸಂಭವನೀಯ ದಿನಾಂಕಗಳ ಬಗ್ಗೆ ತಿಳಿದುಕೊಂಡು ಈ ತೀರ್ಮಾನ ಕೈಗೊಳ್ಳಲಾಗಿದೆ ಎಂದರು.
ರಾಜ್ಯಾದ್ಯಂತ ಒಟ್ಟು 430 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದ್ದು, 1,98, 639 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ತೆಗೆದುಕೊಳ್ಳಲಿದ್ದು, 1,00,071 ಪುರುಷ ಮತ್ತು 98,568 ಮಹಿಳಾ ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.