Gruhalakshmi scheme: MLC ದಿನೇಶ್ ಗೂಳಿಗೌಡರ ಪತ್ರಕ್ಕೆ ತಕ್ಷಣವೇ ಸ್ಪಂದಿಸಿರುವ ಡಿಸಿಎಂ ಡಿಕೆ ಶಿವಕುಮಾರ್ ಅವರು, ಪ್ರತಿ ತಿಂಗಳು ನಾಡದೇವತೆ ತಾಯಿ ಚಾಮುಂಡೇಶ್ವರಿ ದೇಗುಲಕ್ಕೆ 2 ಸಾವಿರ ರೂ. ಅರ್ಪಿಸಲು ಕ್ರಮ ವಹಿಸುವಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸೂಚನೆ ನೀಡಿದ್ದಾರೆ.
Prem & Bollywood Sanjay Dutt: ಕೆಜಿಎಫ್ 2' ಬಳಿಕ ಬಾಲಿವುಡ್ ನಟ ಸಂಜಯ್ ದತ್ ಗೆ ದಕ್ಷಿಣ ಭಾರತದ ಸಿನಿಮಾಗಳಲ್ಲಿ ಹೆಚ್ಚು ಬೇಡಿಕೆ ಕೇಳಿ ಬರುತ್ತಿದೆ. ಇದೀಗ ಸ್ಯಾಂಡಲ್ವುಡ್ ನಟ ನಿರ್ದಶಕ ಪ್ರೇಮ್ ಹಾಗೂ ಸಂಜಯ್ ದತ್ ಸನ್ನಿಧಿಯೊಂದಕ್ಕೆ ಇಬ್ಬರು ಒಟ್ಟಿಗೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದ್ದಾರೆ.
ಸಾಂಸ್ಕೃತಿಕ ನಗರಿ ಮೈಸೂರು ಇಂದು ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಯಿತು. ವಿಶ್ವವಿಖ್ಯಾತವಾಗಿರುವ ನಾಡಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಬೆಳ್ಳಿ ಪಲ್ಲಕ್ಕಿಯಲ್ಲಿ ಪವಡಿಸಿರುವ ನಾಡದೇವಿ ತಾಯಿ ಶ್ರೀ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಆರತಿ ಬೆಳಗಿ, ಪುಷ್ಪಾರ್ಚನೆಗೈದು ನಮಿಸಿ, ದೀಪ ಬೆಳಗುವ ಮೂಲಕ ವಿಧ್ಯುಕ್ತ ಚಾಲನೆ ನೀಡಿದರು.
ಆಷಾಢ ಮಾಸದಲ್ಲಿ ಚಾಮುಂಡಿ ತಾಯಿಗೆ ಕೋಟಿ ಕೋಟಿ ಹಣ ಹರಿದು ಬಂದಿದೆ. ಕಾಣಿಕೆ ರೂಪದಲ್ಲಿ 2,33,51,270 ರೂಪಾಯಿ ಬಂದಿದೆ. ಇದರ ಜೊತೆಗೆ 270 ಗ್ರಾಂ ಚಿನ್ನ, 1 ಕೆಜಿ ಬೆಳ್ಳಿಯನ್ನು ಕೂಡ ಭಕ್ತರು ತಾಯಿಗೆ ಅರ್ಪಿಸಿದ್ದಾರೆ.
ಆಷಾಢ ಶುಕ್ರವಾರಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ತಾಣ ಮದುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ... ಆಷಾಢ ಮಾಸದ ಪೂಜೆಗೆಂದು ಚಾಮುಂಡಿಬೆಟ್ಟ ಸಿದ್ಧವಾಗುತ್ತಿದೆ. ಇದಕ್ಕಾಗಿ ಚಾಮುಂಡಿಬೆಟ್ಟದ ಅಲಂಕಾರಿಕ ಕಾರ್ಯಗಳು ಶುರುವಾಗಿದೆ. ಆಷಾಢ ಶುಕ್ರವಾರದ ಸಂಭ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಜುಲೈ 1 ರಂದು ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಸರ್ವ ರೀತಿಯ ತಯಾರಿ ನಡೆಯುತ್ತಿದೆ..
ಆಷಾಢ ಶುಕ್ರವಾರಕ್ಕೆ ನಾಡ ಅಧಿದೇವತೆ ಚಾಮುಂಡಿ ತಾಯಿಯ ತಾಣ ಮಧುವಣಗಿತ್ತಿಯಂತೆ ಸಿಂಗಾರಗೊಳ್ಳುತ್ತಿದೆ... ಆಷಾಢ ಮಾಸದ ಪೂಜೆಗೆಂದು ಚಾಮುಂಡಿ ಬೆಟ್ಟ ಸಿದ್ಧವಾಗುತ್ತಿದೆ. ಇದಕ್ಕಾಗಿ ಚಾಮುಂಡಿ ಬೆಟ್ಟದ ಅಲಂಕಾರಿಕ ಕಾರ್ಯಗಳು ಶುರುವಾಗಿದೆ. ಆಷಾಢ ಶುಕ್ರವಾರದ ಸಂಭ್ರಮಕ್ಕೆ ಚಾಮುಂಡಿ ಬೆಟ್ಟದಲ್ಲಿ ಸಿದ್ಧತೆ ಭರದಿಂದ ಸಾಗಿದೆ. ಜುಲೈ 1 ರಂದು ಮೊದಲ ಆಷಾಢ ಶುಕ್ರವಾರ ಹಿನ್ನೆಲೆಯಲ್ಲಿ ಸರ್ವ ರೀತಿಯ ತಯಾರಿ ನಡೆಯುತ್ತಿದೆ.
ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆಗಳ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು, ಆಷಾಢ ಶುಕ್ರವಾರದಂದು ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದ್ದು ಸರ್ಕಾರಿ ಬಸ್ ಗಳಿಂದ ಉಚಿತ ಪ್ರಯಾಣದ ವ್ಯವಸ್ಥೆ ಮಾಡಲಾಗಿದೆ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.