Pakistan Former Prime Minister Nawaz Sharif : ಭಾರತದ ಸಾಧನೆಯನ್ನು ಪಾಕಿಸ್ತಾನ ಏಕೆ ಸಾಧಿಸಲು ಸಾಧ್ಯವಾಗಲಿಲ್ಲ ಎಂದು ಮಾಜಿ ಪ್ರಧಾನಿ ನವಾಜ್ ಷರೀಫ್ ಪ್ರಶ್ನಿಸಿದ್ದಾರೆ. ಭಾರತದ ಆರ್ಥಿಕ ಬೆಳವಣಿಗೆ ಉತ್ತಮವಾಗಿದ್ದರೆ, ಪಾಕಿಸ್ತಾನವು ತನ್ನ ಸಾಲವನ್ನು ಮರುಪಾವತಿಸುವ ಸ್ಥಿತಿಯಲ್ಲಿದೆ ಎಂದು ಅವರು ಹೇಳಿದರು.
ಚಂದ್ರಯಾನ 3 ಯಶಸ್ವಿಯಾಗಲಿ ಎಂದು ರಾಜ್ಯದ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ಸಲ್ಲಿಸಲಾಗುತ್ತಿದ್ದು, ಚರ್ಚ್ ಹಾಗೂ ಮಸೀದಿಗಳಲ್ಲಿ ಪ್ರಾರ್ಥನೆಗಳನ್ನು ಸಲ್ಲಿಸಿದರೇ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಕಲಾವಿದರೊಬ್ಬರು ರಂಗೋಲಿ ಚಂದ್ರಯಾನ -3 ಅನ್ನು ಚಿತ್ರಿಸಿದ್ದಾರೆ.
ವಿಕ್ರಮ್ ಲ್ಯಾಂಡರ್ ಅನ್ನು ಚಂದ್ರನ ಮೇಲ್ಮೈಗೆ ಕಠಿಣವಾಗಿ ಇಳಿಸಿದ ನಂತರ ಇಸ್ರೋ ಅದರೊಂದಿಗೆ ಸಂಪರ್ಕ ಸ್ಥಾಪಿಸಲು ಕನಿಷ್ಠ 14 ದಿನಗಳು ಬೇಕು ಎಂದು ತಿಳಿಸಿತ್ತು . ಈ 14 ದಿನಗಳಲ್ಲಿ, ಥರ್ಮಲ್ ಆಪ್ಟಿಕಲ್ ಛಾಯಾಚಿತ್ರಗಳ ಸಹಾಯದಿಂದ ಇಸ್ರೋ ವಿಕ್ರಮ್ ಲ್ಯಾಂಡರ್ ಗುರಿಯನ್ನು ಸಾಧಿಸಿದೆ ಎನ್ನಲಾಗಿದೆ.
ಒಂದು ಕಡೆ ಇಸ್ರೋ ಚಂದ್ರಯಾನ 2 ರ ವಿಕ್ರಂ ಲ್ಯಾಂಡರ್ನೊಂದಿಗೆ ಸಂಪರ್ಕವನ್ನು ಕಲ್ಪಿಸುವ ಪ್ರಯತ್ನಗಳನ್ನು ಮುಂದುವರೆಸಿದ್ದರೆ, ಇತ್ತ ಕಡೆ ಈಗ ನಾಗಪುರ್ ಸಿಟಿ ಪೋಲಿಸ್ ಟ್ವೀಟ್ ಜನರ ಮನಗೆದ್ದಿದೆ.
ಜೀವನದಲ್ಲಿ ಏರಿಳಿತಗಳು ಇದ್ದದ್ದೇ. ಸಂಪರ್ಕ ಕಡಿದುಕೊಂಡಾಗ ಎಲ್ಲರಿಗೂ ಬೇಸರವಾಗಿರುವುದನ್ನು ನಾನು ನೋಡಿದೆ. ಇದು ಕಡಿಮೆ ಸಾಧನೆಯಲ್ಲ. ದೇಶವು ನಿಮ್ಮ ಬಗ್ಗೆ ಹೆಮ್ಮೆಪಡುತ್ತದೆ- ಇಸ್ರೋ ವಿಜ್ಞಾನಿಗಳಿಗೆ ಟ್ವೀಟ್ ಮೂಲಕ ಪ್ರಧಾನಮಂತ್ರಿ ನರೇಂದ್ರ ಮೋದಿ ಸಾಂತ್ವನ.
ಚಂದ್ರಯಾನ್ -2 ರ ವಿಕ್ರಮ್ ಲ್ಯಾಂಡರ್ ಜೊತೆಗಿನ ಸಂಪರ್ಕವನ್ನು ಇಸ್ರೋ ಕಳೆದುಕೊಂಡ ನಂತರ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶನಿವಾರ ಬೆಳಿಗ್ಗೆ 8 ಗಂಟೆಗೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ನಿಯಂತ್ರಣ ಕೇಂದ್ರದಿಂದ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದರು.
ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ(ಇಸ್ರೋ) ಕೈಗೊಂಡಿದ್ದ ಚಂದ್ರಯಾನ 2 ಕೊನೆ ಕ್ಷಣದಲ್ಲಿ ಸಂಪರ್ಕ ಕಡಿದುಕೊಂಡಿದೆ. ಇಸ್ರೋ ಮುಖ್ಯಸ್ಥ ಕೆ.ಶಿವನ್ ಹೊರಡಿಸಿದ ಹೇಳಿಕೆಯಲ್ಲಿ ಚಂದ್ರಯಾನ -2 ಚಂದ್ರನ ಮೇಲ್ಮೈಯಿಂದ 2.1 ಕಿ.ಮೀ ದೂರದಲ್ಲಿ ಸಂಪರ್ಕವನ್ನು ಕಳೆದುಕೊಂಡಿದೆ.
ಬಾಹ್ಯಾಕಾಶ ಜಗತ್ತಿನಲ್ಲಿ, ಚಂದ್ರಯಾನ -2 ಎಂಬ ಬಾಹ್ಯಾಕಾಶ ನೌಕೆ ಮಂಗಳವಾರ ಬೆಳಿಗ್ಗೆ ಚಂದ್ರನ ಕಕ್ಷೆಗೆ ಯಶಸ್ವಿಯಾಗಿ ಪ್ರವೇಶಿಸುವುದರ ಜೊತೆಗೆ ಭಾರತ ಮತ್ತೊಂದು ಮೈಲಿಗಲ್ಲು ಸಾಧಿಸಿದೆ.
ಭಾರತದ ಬಹುನಿರೀಕ್ಷಿತ ಯೋಜನೆಯಾದ ಚಂದ್ರಯಾನ-2, ಇಂದು ಸರಿ ಸುಮಾರು ಮಧ್ಯಾಹ್ನ 2.43 ಗಂಟೆಗೆ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಯಶಸ್ವಿಯಾಗಿ ಉಡಾವಣೆಯಾಗಿದೆ. ಆ ಮೂಲಕ ಈ ಸಾಧನೆ ಮಾಡಿದ ನಾಲ್ಕನೇ ದೇಶ ಎನ್ನುವ ಖ್ಯಾತಿಯನ್ನು ಪಡೆದಿದೆ. ಚಂದ್ರಯಾನ ತನ್ನ ಗುರಿಯನ್ನು ಸಾಧಿಸಲು 54 ದಿನಗಳನ್ನು ತೆಗೆದುಕೊಳ್ಳಲಿದೆ ಎನ್ನಲಾಗಿದೆ.
ಇಸ್ರೋದ ಬಹುನಿರೀಕ್ಷಿತ ಯೋಜನೆಯಾದ ಚಂದ್ರಯಾನ--2 ಉಡಾವಣೆ ಸೋಮವಾರ 2.43ಕ್ಕೆ ಯಶಸ್ವಿಯಾಯಿತು. ಆ ಮೂಲಕ ಈ ಸಾಧನೆ ಮಾಡಿದ ವಿಶ್ವದ ನಾಲ್ಕನೇ ರಾಷ್ಟ್ರ ಎನ್ನುವ ಶ್ರೆಯವನ್ನು ಭಾರತ ಪಡೆಯಿತು.
2008ರಲ್ಲಿ ಪ್ರಾರಂಭವಾದ ಇಸ್ರೋದ ಚಂದ್ರಯಾನ್-1 ರ ಅನುಸರಣೆಯಾದ ಚಂದ್ರಯಾನ್-2 ಚಂದ್ರನ ಮೂಲ ಮತ್ತು ವಿಕಾಸವನ್ನು ಅರ್ಥಮಾಡಿಕೊಳ್ಳುವ ಬಗ್ಗೆ ವಿವರವಾದ ಅಧ್ಯಯನವನ್ನು ಕೈಗೊಳ್ಳುವ ಗುರಿ ಹೊಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.