ಸಮಾಜದಲ್ಲಿ ಸಂಪತ್ತು ಸ್ರಷ್ಠಿಸುವ ಕಾರ್ಮಿಕ ವರ್ಗ ಮಾತ್ರವೇ ದೇಶದ ಆರ್ಥಿಕ ವ್ಯವಸ್ಥೆಯನ್ನು ಮುಂದಕ್ಕೊಯ್ಯುವಲ್ಲಿ ಪ್ರಧಾನ ಪಾತ್ರ ವಹಿಸುತ್ತಿದೆ ಎಂದು CITU ಕರ್ನಾಟಕ ರಾಜ್ಯಾಧ್ಯಕ್ಷರಾದ ಎಸ್ ವರಲಕ್ಷ್ಮಿ ಹೇಳಿದರು.
ಕೇಂದ್ರ ಸರಕಾರ ಜಾರಿಮಾಡಲು ಹೊರಟಿರುವ ರೈತ ಮತ್ತು ಕಾರ್ಮಿಕ ಕಾನೂನುಗಳಿಂದ ಭಾರತದ ಭವಿಷ್ಯ ಕರಾಳವಾಗಲಿದೆ ಹೀಗಾಗಿ ಈ ರೈತ ಹಾಗೂ ಕಾರ್ಮಿಕ ನೀತಿಗಳನ್ನು ಹಿಮ್ಮೆಟ್ಟಿಸುವುದು ಇವತ್ತಿನ ತುರ್ತಾಗಿದೆ ಎಂದು ಸಿ.ಐ.ಟಿ.ಯು ಸಂಘಟನೆಯ ರಾಜ್ಯ ಕಾರ್ಯದರ್ಶಿ ಕೆ.ಮಹಾಂತೇಶ ಅಭಿಪ್ರಾಯಪಟ್ಟರು.
ಜನವರಿ 8, 9ರಂದು ಕೇಂದ್ರ ಸರ್ಕಾರದ ನೀತಿಯನ್ನು ವಿರೋಧಿಸಿ ದೇಶಾದ್ಯಂತ ಹಲವು ಕಾರ್ಮಿಕ ಸಂಘಟನೆಗಳು ಎರಡು ದಿನಗಳ ಕಾಲ ಭಾರತ ಬಂದ್ ಗೆ ಕರೆ ನೀಡಿವೆ.ಈ ಹಿನ್ನಲೆಯಲ್ಲಿ ಎರಡು ದಿನಗಳ ಕಾಲ ದೇಶಾದ್ಯಂತ ಜನ ಜೀವನ ಅಸ್ತವ್ಯಸ್ಥಗೊಳ್ಳಲಿದೆ ಎನ್ನಲಾಗಿದೆ.10 ಪ್ರಮುಖ ಕಾರ್ಮಿಕ ಸಂಘಟನೆಗಳು ಈ ಬಂದ್ ಗೆ ಕರೆ ನೀಡಿವೆ. ಅದರಲ್ಲಿ ಇಂಟಕ್, ಎಐಟಿಯುಸಿ, ಸಿಐಟಿಯು, ಎಐಯುಟಿಯುಸಿ, ಎಲ್ಪಿಎಫ್, ಸೇವಾ ಪ್ರಮುಖ ಸಂಘಟನೆಗಳು ಇದರಲ್ಲಿ ಭಾಗವಹಿಸಲಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.