ತಳಮಟ್ಟದ ದುಡಿಯುವ ವರ್ಗದವರ ಆರೋಗ್ಯ ಸರ್ಕಾರಕ್ಕೆ ಬಹಳ ಮುಖ್ಯ. ಮುಂದಿನ ದಿನಗಳಲ್ಲಿ ವಿಜ್ಞಾನಿ ಬಳಗದ ಸಂಶೋಧನೆಗಳಿಂದ ಅತ್ಯಂತ ಕಡಿಮೆ ದರದಲ್ಲಿ ಔಷದೋಪಚಾರಗಳು ದೊರಕುವಂತಾಗಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಂದಿನ ದಿನಗಳಲ್ಲಿ ನಂಜನಗೂಡು ಕ್ಷೇತ್ರ ಧಾರ್ಮಿಕ ಹಾಗೂ ಪ್ರವಾಸಿ ಕೇಂದ್ರವಾಗಿ ಅಭಿವೃದ್ಧಿಗೊಳಿಸಲು ಯೋಜನೆಗಳನ್ನು ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕರ್ನಾಟಕದ ಯಾವುದೇ ಪ್ರದೇಶ ಮಹಾರಾಷ್ಟ್ರಕ್ಕೆ ಹೋಗಲ್ಲ. ಈ ಬಗ್ಗೆ 2004 ರಲ್ಲಿ ಮಹಾರಾಷ್ಟ್ರ ದಾವೆ ಹೂಡಿದೆ. ಇದಕ್ಕೆ ಮೆಂಟೇನ್ ಎಬಿಲಿಟಿ ಇಲ್ಲ. ಅದಕ್ಕಾಗಿ ಮುಕುಲ್ ರೋಹ್ಟಗಿ ಯಂತ ಸೀನಿಯರ್ ಅಡ್ವೋಕೇಟ್ ಗಳನ್ನು ನೇಮಿಸಿದ್ದೇವೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ - ಮಹಾರಾಷ್ಟ್ರ ಗಡಿ ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೀಸಲಾತಿಗಾಗಿ ಡಿಸೆಂಬರ್ 12ಕ್ಕೆ ವಿಧಾನಸೌಧ ಮುತ್ತಿಗೆಗೆ ನಿರ್ಧಾರ ಮಾಡಲಾಗಿತ್ತು. ಆದ್ರೆ ಈ ನಿರ್ಧಾರ ಕೈಬಿಡಲಾಗಿದೆ. ಅಧಿವೇಶನದೊಳಗೆ ಮೀಸಲಾತಿ ನೀಡದೇ ಇದ್ರೆ ಸುವರ್ಣಸೌಧಕ್ಕೆ ಮುತ್ತಿಗೆ ಹಾಕೋದಾಗಿ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ
CM Basavaraj Bommai : ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯದಲ್ಲಿ ಕರ್ನಾಟಕದ ವಾದವನ್ನು ಮಂಡಿಸಲು ಎಲ್ಲ ರೀತಿಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ನಮ್ಮ ವಾದಕ್ಕೆ ಗಟ್ಟಿಯಾದ ಆಧಾರವೂ ಇದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮುಂದಿನ ವರ್ಷದೊಳಗೆ ರಾಜ್ಯದ 4 ಕೋಟಿ ಜನರಿಗೆ ಆರೋಗ್ಯ ಕಾರ್ಡ್ ನೀಡಲಾಗುವುದು. ಆರೋಗ್ಯ, ಶಿಕ್ಷಣ, ಉದ್ಯೋಗ, ಕೃಷಿ, ನೀರಾವರಿ ಕ್ಷೇತ್ರದ ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಇಂದು ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಜನ ಸಂಕಲ್ಪ ಯಾತ್ರೆಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಉದ್ಘಾಟಿಸಿದರು.
CM Basavaraj Bommai : ಹಲವಾರು ವರ್ಷ ಬರಗಾಲವಿದ್ದ ಸಂದರ್ಭದಲ್ಲಿ ಬಂದಿರುವ ಆನೆಗಳು ವಾಪಸ್ ಹೋಗಿಲ್ಲ. ಕೆಲವು ಸಂದರ್ಭಗಳಲ್ಲಿ ಮನುಷ್ಯರೂ ಕೂಡ ಕಾಡಿಗೆ ಹೋಗುವುದು, ಹವಾಮಾನ ಬದಲಾವಣೆ ಮುಂತಾದ ಕಾರಣಗಳಿಂದ ಸಮಸ್ಯೆ ಉಂಟಾಗಿದೆ. ಕಾಡಾನೆ ಹಾವಳಿ ಬಗ್ಗೆ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
Basavaraj Bommai Clarification: ಅವರು ಇಂದು ಮುರುಘಾ ಮಠದ ಆವರಣದ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದರು. ಪ್ರತಿ ಮನೆಗೆ 10 ಸಾವಿರ ಲೀಟರ್ ಉಚಿತವಾಗಿ ನೀರು ಕೊಡುವ ಬಗ್ಗೆ ಸರ್ಕಾರದ ಆಲೋಚನೆ ಬಗ್ಗೆ ಸುದ್ದಿಗಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
CM Basavaraj Bommai : ಬಿಬಿಎಂಪಿ ಹಾಗೂ ಬಿಡಿಎಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಾಂಗ್ರೆಸ್ ಪಕ್ಷ ತಳಸಮುದಾಯಗಳಿಗೆ ರಕ್ಷಣೆ ನೀಡದೇ, ಕೇವಲ ಸುಳ್ಳು ಭರವಸೆಗಳು ನೀಡಿದ್ದಾರೆ. ಇನ್ನು ಮುಂದೆ ಅವರ ಮತಬ್ಯಾಂಕ್ ರಾಜಕಾರಣ ನಡೆಯುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಮಂಗಳೂರಿನಲ್ಲಿ ನಡೆದ ಬಾಂಬ್ ಸ್ಪೋಟ ಪ್ರಕರಣ ಇದೊಂದು ಭಯೋತ್ಪಾದಕ ಕೃತ್ಯ ಇರಬಹುದು ಎಂಬು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಈ ಕುರಿತು ಉಗ್ರರ ಜಾಲವನ್ನು ಸರ್ಕಾರ ಬೇಧಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಕಲಬುರಗಿ ಜಿಲ್ಲೆಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಿದ್ದು, ವಿವೇಕ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದಾರೆ... ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದರಿಂದ ಅಪಸ್ವರ ಕೇಳಿ ಬರ್ತಿದೆ.. ಇನ್ನೂ ಮುಂದೆಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಅಂತಾ ಬಸವರಾಜ್ ಬೊಮ್ಮಾಯಿ ಹೇಳಿದರು.
ಸಿಎಂ ಬೊಮ್ಮಾಯಿ ಅವರು ನಂದಿನ ಹಾಲು ಹಾಗೂ ಮೊಸರಿನ ದರ ಹೆಚ್ಚಳವನ್ನು ತಡೆದಿದ್ದು, ಸಿಎಂ ಸೂಚನೆ ನಂತರ ದರ ಏರಿಕೆ ಆದೇಶವನ್ನು ಕೆಎಂಎಫ್ ಹಿಂಪಡೆದಿದೆ. ಕೆಎಂಎಫ್ ಇಂದಿನಿಂದಲೇ ಜಾರಿಗೆ ಬರುವಂತೆ ನಂದಿನ ಹಾಲು ಹಾಗೂ ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ, ಹಾಲಿನ ದರ ಏರಿಕೆ ಬಗ್ಗೆ ನವೆಂಬರ್ 20 ರಂದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಅಲ್ಲದೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು.
Jana Sankalpa Yatre : ಇಂದು ಚಿಕ್ಕಮಗಳೂರಿನಲ್ಲಿ ಕಡೂರಿನ ಪೊಲೀಸ್ ತರಬೇತಿ ಕೇಂದ್ರ ಹೆಲಿಪ್ಯಾಡ್ ಗೆ ಬಂದಿಳಿದು ಮಾಧ್ಯಮದವರೊಂದಿಗೆ ಸಿಎಂ ಮಾತನಾಡಿದರು. ಸಿದ್ದರಾಮಯ್ಯನವರು ಸಹಾನುಭೂತಿ ಪಡೆದು ಮತಯಾಚನೆ ಮಾಡಿದ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದರು.
Kempegowda statue inauguration program : ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆ ಲೋಕಾರ್ಪಣೆ ಸಮಾರಂಭಕ್ಕೆ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರನ್ನು ಸ್ವತಃ ಮುಖ್ಯಮಂತ್ರಿಗಳೇ ಕರೆ ಮಾಡಿ ಮತ್ತು ಪತ್ರ ಬರೆದು ಆಹ್ವಾನಿಸಿದ್ದರು ಎಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಉಪಾಧ್ಯಕ್ಷರೂ ಆದ ಸಚಿವ ಡಾ. ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಮಾಡಿ ಏಳನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ, ಸಿಎಂ ಬೊಮ್ಮಾಯಿ, ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.