CM Basavaraj Bommai : ಬಿಬಿಎಂಪಿ ಹಾಗೂ ಬಿಡಿಎಗಳ ಆಸ್ತಿಗಳು ಜನರ ಸೇವೆಗೆ ಬಳಕೆಯಾಗಬೇಕು. ಸರ್ಕಾರದ ಆಸ್ತಿಗಳಾದ ವಾಣಿಜ್ಯ ಸಂಕೀರ್ಣಗಳು ಕೇವಲ ವಾಣಿಜ್ಯ ಚಟುವಟಿಕೆಗಳಿಗೆ ಮೀಸಲಿರಿಸದೇ, ಸರ್ಕಾರಿ ಕಚೇರಿಗಳು ಹಾಗೂ ಸಾರ್ವಜನಿಕರ ಸೇವೆಗೆ ಮೀಸಲಿಡುವುದು ಬಹಳ ಮುಖ್ಯ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
CM Basavaraj Bommai : ಚುನಾವಣೆಯ ನಾಮಪತ್ರ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂಬ ಕಾಂಗ್ರೆಸ್ ನ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ರಮಣಶ್ರೀ ಪ್ರತಿಷ್ಠಾನ, ಬೆಂಗಳೂರು ಇಲ್ಲಿ ಕಾರ್ಯಕ್ರಮದ ನಂತರ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.
ಕಲಬುರಗಿ ಜಿಲ್ಲೆಯಲ್ಲಿಂದು ಸಿಎಂ ಬಸವರಾಜ್ ಬೊಮ್ಮಾಯಿ ಭರ್ಜರಿ ಪ್ರವಾಸ ಕೈಗೊಂಡಿದ್ದಾರೆ. ವಿವಿಧ ಸರ್ಕಾರಿ ಕಾರ್ಯಕ್ರಮಗಳಲ್ಲಿ ಸಿಎಂ ಭಾಗಿಯಾಗಿದ್ದು, ವಿವೇಕ ಯೋಜನೆಯಡಿ ಶಾಲಾ ಕೊಠಡಿಗಳ ನಿರ್ಮಾಣಕ್ಕೆ ಚಾಲನೆ ನೀಡಲಾಗಿದ್ದಾರೆ... ಶಾಲಾ ಕೊಠಡಿಗಳಿಗೆ ಕೇಸರಿ ಬಣ್ಣ ಬಳಿಯುತ್ತಿರುವುದರಿಂದ ಅಪಸ್ವರ ಕೇಳಿ ಬರ್ತಿದೆ.. ಇನ್ನೂ ಮುಂದೆಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬರಲಿದೆ ಅಂತಾ ಬಸವರಾಜ್ ಬೊಮ್ಮಾಯಿ ಹೇಳಿದರು.
ಸಿಎಂ ಬೊಮ್ಮಾಯಿ ಅವರು ನಂದಿನ ಹಾಲು ಹಾಗೂ ಮೊಸರಿನ ದರ ಹೆಚ್ಚಳವನ್ನು ತಡೆದಿದ್ದು, ಸಿಎಂ ಸೂಚನೆ ನಂತರ ದರ ಏರಿಕೆ ಆದೇಶವನ್ನು ಕೆಎಂಎಫ್ ಹಿಂಪಡೆದಿದೆ. ಕೆಎಂಎಫ್ ಇಂದಿನಿಂದಲೇ ಜಾರಿಗೆ ಬರುವಂತೆ ನಂದಿನ ಹಾಲು ಹಾಗೂ ಮೊಸರಿನ ದರವನ್ನು ಪ್ರತಿ ಲೀಟರ್ ಗೆ 3 ರೂಪಾಯಿ ಹೆಚ್ಚಳ ಮಾಡಿ ಆದೇಶ ಹೊರಡಿಸಿತ್ತು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಿಎಂ ಬೊಮ್ಮಾಯಿ, ಹಾಲಿನ ದರ ಏರಿಕೆ ಬಗ್ಗೆ ನವೆಂಬರ್ 20 ರಂದು ಚರ್ಚಿಸಿ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದ್ದರು. ಅಲ್ಲದೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರೊಂದಿಗೆ ದೂರವಾಣಿ ಮೂಲಕ ಚರ್ಚಿಸಿದರು.
ಸರ್ಕಾರಿ ನೌಕರರ ವೇತನ ಪರಿಷ್ಕರಣೆಗೆ ಮಾಡಿ ಏಳನೇ ವೇತನ ಆಯೋಗ ರಚನೆ ಮಾಡಿರುವುದಕ್ಕೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರ ನೇತೃತ್ವದಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಅಧ್ಯಕ್ಷರುಗಳ ನಿಯೋಗವು ಇಂದು ಮುಖ್ಯ ಮಂತ್ರಿ ಬಸವರಾಜ್ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ, ಸಿಎಂ ಬೊಮ್ಮಾಯಿ, ಎಲ್ಲರೂ ಒಂದಾಗಿ ಸುಭಿಕ್ಷ ನಾಡನ್ನು ಕಟ್ಟೋಣ. ಪ್ರಾಮಾಣಿಕತೆ, ನಿಷ್ಠೆ ಹಾಗು ಕರ್ತವ್ಯ ಪ್ರಜ್ಞೆಯಿಂದ ಕೆಲಸ ಮಾಡಿ. ಬಡವರಿಗೆ, ಜನಪರವಾದ ಕೆಲಸ ಮಾಡಿದರೆ ಕರ್ನಾಟಕ ಅಭಿವೃದ್ಧಿಯಾಗುತ್ತದೆ. ನವ ಕರ್ನಾಟಕದಿಂದ ನವ ಭಾರತ ನಿರ್ಮಿಸೋಣ. ದೇಶದ 5 ಟ್ರಿಲಿಯನ್ ಡಾಲರ್ ಆರ್ಥಿಕತೆ ಕನಸಿಗೆ ಕರ್ನಾಟಕ ಒಂದು ಟ್ರಿಲಿಯನ್ ಡಾಲರ್ ಕೊಡುಗೆ ನೀಡಬೇಕು ಎಂದರು.
'ಮಾತು ಆಡಿದ್ರೆ ಹೋಯ್ತು.. ಮುತ್ತು ಒಡೆದರೆ ಹೋಯ್ತು' ಎಂದು ಸಿಎಂ ಬಸವರಾಜ ಬೊಮ್ಮಾಯಿ, ತಮಗೆ ಪತ್ರ ಬರೆದು ಸತೀಶ್ ಜಾರಕಿಹೊಳಿ ಹೇಳಿಕೆ ಹಿಂಪಡೆದ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.
Jana Sankalpa Yatra : ಜನ ಸಂಕಲ್ಪ ಯಾತ್ರೆಗೆ ರಾಯಬಾಗ ಪಟ್ಟಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಹಲವು ಸಚಿವರ ನೇತೃತ್ವದಲ್ಲಿ ಚಾಲನೆ ನೀಡಲಾಯಿತು. ರಾಯಬಾಗ ಪಟ್ಟಣದಲ್ಲಿ ಸಿಎಂ ತೆರೆದ ವಾಹನದಲ್ಲಿ ರೋಡ್ ಶೋ ನಡೆಸಿದರು. ನಂತರ ಬೃಹತ್ ವೇದಿಕೆಯಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಕುರಿತು ಜನರಿಗೆ ತಿಳಿಸಿದರು.
ಮುರುಘಾ ಮಠಕ್ಕೆ ಆಡಳಿತಾಧಿಕಾರಿ ನೇಮಿಸಿ ಎಂದು ಅರ್ಜಿ ಬಂದಿದ್ದು, ನೇಮಿಸುವ ಪೂರ್ವದಲ್ಲಿ ಏನು ನಡೆದಿದೆ ಎನ್ನುವುದರ ಬಗ್ಗೆ ನ್ಯಾಯ ಸಮ್ಮತ ಪ್ರಕ್ರಿಯೆ ನಡೆಯುತ್ತಿದ್ದು, ಕಂದಾಯ ಇಲಾಖೆಯಿಂದ ಸ್ಥಿತಿಗತಿಗಳ ಬಗ್ಗೆ ವರದಿ ಕೇಳಿದ್ದು, ವರದಿ ಬಂದ ನಂತರ ನಿರ್ಧರಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಜಾಗತಿಕ ಉದ್ದಿಮೆಗಳಿಗೆ ಬೆಂಗಳೂರೇ ಗಮ್ಯವಾಗಿದೆ. ಎಲ್ಲಾ ಜಾಗತಿಕ ಉದ್ದಿಮೆಗಳ ಹಾದಿಗಳು ಬೆಂಗಳೂರಿಗೆ ಬಂದು ಸೇರುತ್ತಿವೆ. ನಾಳೆಯಿಂದ ಪ್ರಾರಂಭವಾಗುವ ಮೂರು ದಿನಗಳ ಇನ್ವೆಸ್ಟ್ ಕರ್ನಾಟಕ ಸಮ್ಮೇಳನ ಅತ್ಯಂತ ಯಶಸ್ವಿಯಾಗಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಶ್ವಾಸ ವ್ಯಕ್ತಪಡಿಸಿದರು.
ತಮ್ಮ ನಿವಾಸದ ಬಳಿ ಇಂದು ಭೇಟಿ ಮಾಡಿದ ಆಸಿಡ್ ದಾಳಿಗೊಳಗಾದ ಮಹಿಳೆಗೆ ಕೂಡಲೇ ಅನುಕಂಪದ ಆಧಾರದ ಮೇಲೆ ಸರ್ಕಾರಿ ಕೆಲಸ ನೀಡಬೇಕು ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯ ಮಂತ್ರಿಗಳು ಮಾಧ್ಯಮದವರಿಗೆ ತಿಳಿಸಿದರು.
Solar scam investigation : ಕಾಂಗ್ರೆಸ್ ಸರ್ಕಾರದಲ್ಲಿ ಸೋಲಾರ್ ಹಗರಣ ಆಗಿದೆ ಎಂಬ ಆರೋಪ ಸಂಬಂಧ ಈ ಬಗ್ಗೆ ತನಿಖೆ ಆಗಬೇಕು ಎಂಬ ಒತ್ತಾಯ ಕುರಿತು ಪ್ರಶ್ನೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿ ಕಾದು ನೋಡಿ ಎಂದರು.
ತಂತ್ರಜ್ಞಾನಾಧಾರಿತ ಕಲಿಕೆ ಮತ್ತು ಸಾಂಪ್ರದಾಯಿಕ ಬೋಧನೆ ಎರಡೂ ಇರುವ 'ಮಲ್ಲೇಶ್ವರಂ ಸ್ಕೂಲ್ ಮಾಡೆಲ್' (ಎಂಎಸ್ಎಂ) ಅತ್ಯುತ್ತಮವಾಗಿದ್ದು ಅದನ್ನು ರಾಜ್ಯದ ಸರ್ಕಾರಿ ಪಬ್ಲಿಕ್ ಶಾಲೆಗಳಲ್ಲಿ ಅಳವಡಿಸಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಇಂದು ರಾಜ್ಯ ಮಟ್ಟದ ಕಿತ್ತೂರು ಉತ್ಸವ 2022ಕ್ಕೆ ಚಾಲನೆ ಸಿಗಲಿದೆ. ಇಂದಿನಿಂದ 2 ದಿನಗಳ ಕಾಲ ಐತಿಹಾಸಿಕ ಕಿತ್ತೂರು ಉತ್ಸವ ನಡೆಯಲಿದೆ.. ಸಂಜೆ ಸಿಎಂ ಬೊಮ್ಮಾಯಿ ಅಧಿಕೃತ ಚಾಲನೆ ನೀಡಲಿದ್ದಾರೆ.
ಹೊಸದುರ್ಗ ನ್ಯಾಯಾಲಯದ ಸುವರ್ಣ ಮಹೋತ್ಸವ... ಹೊಸದುರ್ಗದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಭಾಷಣ... ಬಡವರು, ಕಕ್ಷಿದಾರರು ಕೋರ್ಟಿಗೆ ಬರುವುದೇ ಕಷ್ಟ ಆಗಿದೆ.. ನ್ಯಾಯ ಸಿಗುವುದು ಕಷ್ಟವಾದಾಗ ಅನ್ಯಾಯದ ವಿರುದ್ಧ ಹೋರಾಟ ಕಡಿಮೆ... ನ್ಯಾಯ ಸರಳವಾಗಿ ಸಿಗುವಂತೆ ಆಗಬೇಕು ಎಂದ ಸಿಎಂ ಬೊಮ್ಮಾಯಿ
By accepting cookies, you agree to the storing of cookies on your device to enhance site navigation, analyze site usage, and assist in our marketing efforts.