ರಾಮಭಕ್ತ, ಕರಸೇವಕ ಎಂದು ಸಮಾಜದೆದುರು ನಕಲಿ ವೇಷ ತೊಟ್ಟು ಮೆರೆಯುವ ಶ್ರೀಕಾಂತ ಪೂಜಾರಿ ಕಾನೂನಿನ ದೃಷ್ಟಿಯಲ್ಲಿ ಒಬ್ಬ ಸಮಾಜಘಾತುಕ ವ್ಯಕ್ತಿ. ತನ್ನ ಅಪರಾಧ ಕೃತ್ಯಗಳಿಂದ ರಕ್ಷಣೆ ಸಿಗಲಿ ಎಂಬ ಕಾರಣಕ್ಕೆ ಧರ್ಮರಕ್ಷಣೆ ನಾಟಕವಾಡುವ ಇಂಥವರನ್ನು ಬಂಧಿಸದೆ, ರಾಜಾರೋಷವಾಗಿ ತಿರುಗಾಡಲು ಬಿಟ್ಟರೆ ಶ್ರೀರಾಮಚಂದ್ರನೂ ಕ್ಷಮಿಸಲಾರ ಎಂದು ಸಿಎಂ ಸಿದ್ದರಾಮಯ್ಯ ಬಿಜೆಪಿ ವಿರುದ್ಧ ಕಿಡಿ ಕಾರಿದ್ದಾರೆ.
ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ, ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸುವ ಕೆಲಸವನ್ನು ಅಧಿಕಾರಿಗಳು ಮಾಡಬೇಕು. ಸವೆದ ಚಪ್ಪಲಿ, ಹರಕಲು ಚೆಡ್ಡಿ, ಮಾಸಿದ ಬಟ್ಟೆ, ಅವಿದ್ಯಾವಂತರ ಪರವಾಗಿ ನಿಮ್ಮಗಳ ಹೃದಯ ಮಿಡಿಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಮುಖ್ಯಮಂತ್ರಿ Siddaramaiah ಅವರು ಬೆಂಗಳೂರು ಅಂತರರಾಷ್ಟ್ರೀಯ ಚಲನ ಚಿತ್ರೋತ್ಸವ ಪೂರ್ವ ಸಭೆ ನಡೆಸಿ, ಮಾತನಾಡಿದರು.ಚಲನಚಿತ್ರೋತ್ಸವದಲ್ಲಿ ಸೌಹಾರ್ದತೆ, ಸಹಬಾಳ್ವೆ, ಸಂವಿಧಾನ ಪ್ರಜ್ಞೆಯನ್ನು ಜಾಗೃತಗೊಳಿಸುವ ವಿಚಾರಗಳು, ಎಲ್ಲರ ಒಳಗೊಳ್ಳುವಿಕೆಯ ಕುರಿತ ಚಿತ್ರಗಳಿಗೆ ಒತ್ತು ನೀಡಲು, ಮನುಷ್ಯತ್ವದ ಸಂದೇಶ ನೀಡಲು ತೀರ್ಮಾನಿಸಲಾಯಿತು.
ಅಲ್ಪಸಂಖ್ಯಾತರ ಕಾಲೋನಿ ಅಭಿವೃದ್ಧಿಗೆ ಸಾವಿರ ಕೋಟಿ ರೂ. ಗಳ ಕ್ರಿಯಾ ಯೋಜನೆ ರೂಪಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು. ಅವರು ಇಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಸತಿ ಇಲಾಖೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಈ ಕ್ರಿಯಾ ಯೋಜನೆ ತಯಾರಿಸುವ ಸಂದರ್ಭದಲ್ಲಿ ಅಲ್ಪಸಂಖ್ಯಾತರು ಹೆಚ್ಚಾಗಿ ನೆಲೆಸಿರುವ ಪ್ರದೇಶಗಳನ್ನು ಗುರುತಿಸಿ, ಅನುದಾನ ಹಂಚಿಕೆ ಮಾಡುವಂತೆ ಸೂಚಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.