ನಾನು ಅವರ ತಂದೆ ವಿರುದ್ಧ 1985ರಲ್ಲಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ್ದೆ. ಬಂಗಾರಪ್ಪನವರ ಸಂಪುಟದಲ್ಲಿ ಸಚಿವನಾಗಿದ್ದೆ. ನನ್ನ ಹಾಗೂ ಎಸ್.ಎಂ ಕೃಷ್ಣ ಅವರ ನಡುವಣ ಸಂಬಂಧ ಏನು ಎಂದು ಕುಮಾರಸ್ವಾಮಿಗೆ ಏನು ಗೊತ್ತಿದೆ? ಅವರಿಗೆ ಹುಚ್ಚು ಹಿಡಿದಿದೆ. ಅವರಿಗೆ ಸೂಕ್ತ ಚಿಕಿತ್ಸೆ ಕೊಡಿಸಿ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಗುಡುಗಿದರು.
ಶಿವಪುರದ ಧ್ವಜ ಸತ್ಯಾಗ್ರಹ ಸೌಧಕ್ಕೆ ಬಿಜೆಪಿಯವರು ಒಮ್ಮೆ ಭೇಟಿ ನೀಡಬೇಕು ಎಂದು ಸಲಹೆ ನೀಡುತ್ತೇನೆ. ಆಗಿನ ಕಾಲದಲ್ಲೇ 10 ಸಾವಿರ ಜನರು ಸೇರಿ ಬ್ರಿಟಿಷರ ವಿರುದ್ದ ಹೋರಾಟ ಮಾಡಿದ ಜಾಗವಿದು ಅಂತ ಡಿಸಿಎಂ ಡಿ.ಕೆ. ಶಿವಕುಮಾರ್ ಬಿಜೆಪಿ ನಾಯಕರಿಗೆ ಸಲಹೆ ನೀಡಿದರು..
ನಾನು ಬಿಚ್ಚೋಕ್ಕೆ ಹೋದ್ರೆ ನಿಮ್ಮದು ಪುಟಗಟ್ಟಲೆ ಇದೆ. ಅಜ್ಜಯ್ಯನ ಬಗ್ಗೆ ಈ ಡಿ.ಕೆ.ಶಿವಕುಮಾರ್ ಗೆ ಭಕ್ತಿ ಗೌರವ ಇದ್ದರೆ ಪ್ರಮಾಣ ಮಾಡಲಿ. ಅಜ್ಜಯ್ಯನ ಬಗ್ಗೆ ನನಗೆ ಗೌರವ, ಭಕ್ತಿ ಎರಡೂ ಇದೆ. ನಾನು ಪ್ರಾಮಾಣಿಕವಾಗಿ ಬೆಳೆದು ಬಂದಿದೇನೆ ಎಂದು ಅವರ ಮೇಲೆ ಪ್ರಮಾಣ ಮಾಡಿ. ನಾನೂ ಪ್ರಮಾಣ ಮಾಡುತ್ತೇನೆ ಎಂದು ಕೇಂದ್ರ ಸಚಿವರ ಹೆಚ್.ಡಿ.ಕುಮಾರಸ್ವಾಮಿ ಡಿಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಕಿಡಿಕಾರಿದರು..
ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ ಸಂಘಟನೆಗೂ ಅವಕಾಶ ಕಲ್ಪಿಸಿಕೊಟ್ಟಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.