ಬಿಜೆಪಿ ವಿರುದ್ಧ ಕಾಂಗ್ರೆಸ್ ನಾಯಕರ ಬೃಹತ್ ಪ್ರತಿಭಟನೆ. ಬೆಂಗಳೂರಿನ 300ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲಕ್ಕೆ ಪ್ರೊಟೆಸ್ಟ್. ಭ್ರಷ್ಟಾಚಾರ ತೊಲಗಿಸಿ ಬೆಂಗಳೂರು ಉಳಿಸಿ ಹೆಸರಿನಲ್ಲಿ ಪ್ರೊಟೆಸ್ಟ್. ಟ್ರಿನಿಟಿ ಸರ್ಕಲ್ನಲ್ಲಿ ನಡೆಯಲಿರುವ ಹೋರಾಟ. ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸೇರಿ ಹಲವರು ಭಾಗಿ.
ಹೊಸಪೇಟೆಯ ಪುನೀತ್ ರಾಜ್ಕುಮಾರ್ ಜಿಲ್ಲಾ ಕ್ರೀಡಾಂಗಣದಲ್ಲಿ ಕಾಂಗ್ರೆಸ್ ಶಕ್ತಿಪ್ರದರ್ಶನ ಮಾಡ್ತಿದೆ. ʻಕೈʼಪಡೆ ಬಸ್ ಯಾತ್ರೆ ಮೂಲಕ ಹೊಸಪೇಟೆಗೆ ಆಗಮಿಸಿದೆ. ಸಿದ್ದು, ಡಿಕೆಶಿ ಸೇರಿದಂತೆ ಘಟಾನುಘಟಿಗಳು ಭಾಗಿಯಾಗಿದ್ದಾರೆ.
ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ.. ಮೋದಿ ಆಗಮಿಸುವ ಸಮಯದಲ್ಲೇ ಪ್ರತಿಭಟನೆ ಹಿನ್ನೆಲೆಯಲ್ಲಿ ʻಕೈʼ ಮುಖಂಡರು, ಕಾರ್ಯಕರ್ತರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಮಹದಾಯಿ ಹೋರಾಟವನ್ನೇ ಚುನಾವಣಾ ಅಸ್ತ್ರವಾಗಿಸಲು ʻಕೈʼ ಪಡೆ ಮುಂದಾಗಿದೆ.. ಮಹದಾಯಿ ವಿಚಾರವಾಗಿ ಉತ್ತರ ಕರ್ನಾಟಕವೇ ಟಾರ್ಗೆಟ್ ಮಾಡಿರೋ ಕಾಂಗ್ರೆಸ್, ಬಿಜೆಪಿ ವಿರುದ್ಧ ಸಮರ ಸಾರಲು ಬಿಗ್ ಪ್ಲಾನ್ ಮಾಡಿದೆ.
ಕಳಸಾ-ಬಂಡೂರಿ ಯೋಜನೆ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಇಂದು ಕಾಂಗ್ರೆಸ್ ಪ್ರತಿಭಟನೆ ನಡೆಯಲಿದೆ. ನೆಹರು ಮೈದಾನದಲ್ಲಿ ಬೃಹತ್ ವೇದಿಕೆ ಕಾರ್ಯಕ್ರಮ ನಡೆಯಲಿದೆ. ಮಾಜಿ ಸಚಿವ ಹೆಚ್.ಕೆ. ಪಾಟೀಲ್ ತಡರಾತ್ರಿ ಸಿದ್ಧತೆ ಪರಿಶೀಲಿಸಿದ್ದಾರೆ.
ಬೇಜವಾಬ್ದಾರಿ ವರ್ತನೆ ಮತ್ತು ಮಹಿಳೆಯರಿಗೆ ಅಸಭ್ಯ ಪದಗಳಿಂದ ನಿಂದನೆ ಹಿನ್ನೆಲೆ ಸಬ್ ಇನ್ಸ್ಪೆಕ್ಟರ್ ಸಂಗಮೇಶ್ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಹೊಸಕೋಟೆಯಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ಮಾಡುವ ಮುಖಾಂತರ ಪೊಲೀಸ್ ಠಾಣೆಗೆ ಮುತ್ತಿಗೆ ಹಾಕಲಾಗಿದೆ. ಶರತ್ ಬಚ್ಚೇಗೌಡ, ಕೃಷ್ಣೆಭೈರೇಗೌಡರ ನೇತೃತ್ವದಲ್ಲಿ ನಡೆದ ಪ್ರತಿಭಟನೆ.
ಕಾಂಗ್ರೆಸ್ ನಾಯಕರು ಮಡಿಕೇರಿ ಚಲೋ ಕಾರ್ಯಕ್ರಮ ಮುಂದೂಡಿಕೆ ಮಾಡಿದ್ದಾರೆ. ಈ ಬಗ್ಗೆ ವಿರುದ್ಧ ನಾಯಕ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಸರ್ಕಾರಕ್ಕೆ ನನ್ನ ಮೇಲೆ ಭಯ ಬಂದಿದೆ. ಅದಕ್ಕೆ ನಿಷೇಧಾಜ್ಞೆ ಜಾರಿ ಮಾಡಿದ್ದಾರೆ ಎಂದಿದ್ದಾರೆ.
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಪ್ರಕರಣ. 26ರಂದು ಮಡಿಕೇರಿಯಲ್ಲಿ ಕಾಂಗ್ರೆಸ್ ಶಕ್ತಿ ಪ್ರದರ್ಶನ. ಸಿದ್ದರಾಮಯ್ಯ ಪರ ಟ್ರೆಂಡ್ ಸೆಟ್ಗೆ ವೇದಿಕೆ. ಮೊಟ್ಟೆ ಎಸೆತ ವಿಚಾರದಲ್ಲಿ ರಾಜ್ಯ ಕಾಂಗ್ರೆಸ್ ಆಕ್ರೋಶ. ಸಿದ್ದರಾಮಯ್ಯ ಪರ ಕಾಂಗ್ರೆಸ್ ನಾಯಕರ ಬ್ಯಾಟಿಂಗ್. ಸಿದ್ದು ರಕ್ಷಣೆ ವಿಚಾರದಲ್ಲಿ ಸರ್ಕಾರದ ವಿರುದ್ಧ ವಾಗ್ದಾಳಿ. 26ಕ್ಕೆ ಮಡಿಕೇರಿ SP ಕಚೇರಿಗೆ ಮುತ್ತಿಗೆ ಹಾಕಲು ʼಕೈʼ ಭರ್ಜರಿ ಸಿದ್ಧತೆ.
ಸೋನಿಯಾ ಗಾಂಧಿಯನ್ನು ED ತನಿಖೆ ನಡೆಸ್ತಿರೋದನ್ನು ಖಂಡಿಸಿ ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ.. ಕೇಂದ್ರ ಸರ್ಕಾರವು ದ್ವೇಷದ ರಾಜಕಾರಣ ಮಾಡ್ತಿದೆ ಎಂದು ಆರೋಪಿಸಿ ಸಂಸತ್ ಭವನದಿಂದ ರಾಷ್ಟ್ರಪತಿ ಭವನಕ್ಕೆ ಮೆರವಣಿಗೆಗೆ ಮುಂದಾಗಿದ್ದಾರೆ. ಈ ವೇಳೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಸಂಸದ ಡಿ.ಕೆ.ಸುರೇಶ್ ಸೇರಿದಂತೆ ಹಲವು ಕಾಂಗ್ರೆಸ್ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಂಗ್ರೆಸ್ ಪಕ್ಷ ಮೋದಿ ಹಾಗೂ ಗಡಿಪಾರ್ ಅಮಿತ್ ಶಾ ಅವರ ಧಮಕಿಗೆ ಹೆದರುವುದಿಲ್ಲ. ಸೋನಿಯಾ ಗಾಂಧಿ ಅವರನ್ನು ಮುಟ್ಟಿದರೆ ಸರ್ಕಾರ ಚೂರಾಗಲಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ ಹರಿಪ್ರಸಾದ್ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಂದು ಇಡಿ ಅಧಿಕಾರಿಗಳಿಂದ ಸೋನಿಯಾ ಗಾಂಧಿ ವಿಚಾರಣೆ ನಡೆಯಲಿದೆ. ಮತ್ತೊಂದೆಡೆ ED ವಿಚಾರಣೆ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.