ಕೇಂದ್ರದ ಆಗ್ನಿಪಥ್ ಯೋಜನೆಗೆ ವಿರೋಧಿಸಿ ತುಮಕೂರು ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೀತು.. ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಆಕ್ರೋಶ ಹೊರ ಹಾಕಿದ್ರು. ಅಗ್ನಿಪಥ್ ಯೋಜನೆ ಕೈ ಬಿಡುವಂತೆ ಕೈ ಕಾರ್ಯಕರ್ತರು ಆಗ್ರಹಿಸಿದ್ರು.
ರಾಹುಲ್ಗಾಂಧಿ ಮೇಲೆ ಸುಳ್ಳು ಕೇಸ್ ಹಾಕಿ ಬೆದರಿಸ್ತಿದ್ದಾರೆ ಎಂದು ಕೆಪಿಸಿಸಿ ಅಧಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.. ನ್ಯಾಷನಲ್ ಹೆರಾಲ್ಡ್ ಕಾಂಗ್ರೆಸ್ ಆಸ್ತಿ. ಅದನ್ನು ಕೇಳೋದಕ್ಕೆ ನೀವು ಯಾರು ಎಂದು ಬಿಜೆಪಿಗೆ ಡಿ.ಕೆ.ಶಿವಕುಮಾರ್ ಪ್ರಶ್ನಿಸಿದ್ದಾರೆ..
ರಾಹುಲ್ ಗಾಂಧಿ ಮೇಲಿನ ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ನಡೆಸುತ್ತಿರುವ ಪ್ರತಿಭಟನೆ ನಾಟಕ ಎಂದು ಸಚಿವ ಬೈರತಿ ಬಸವರಾಜ್ ಕಿಡಿಕಾರಿದ್ದಾರೆ.. ದಾವಣಗೆರೆಯಲ್ಲಿ ಪ್ರತಿಕ್ರಿಯೆ ನೀಡಿದ ಬೈರತಿ ಬಸವರಾಜ್, ಇಡಿ, ಸಿಬಿಐ, ಐಟಿ ಇವು ಸ್ವತಂತ್ರ ತನಿಖಾ ಸಂಸ್ಥೆಗಳು. ಅವರು ಯಾರ ಹಂಗಲ್ಲಿ ಕೆಲಸ ಮಾಡಲ್ಲ. ನಾಳೆ ತಪ್ಪಲ್ಲಿ ಸಿಕ್ಕಿಹಾಕಿಕೊಂಡು ಎಲ್ಲೋ ಪಕ್ಷ ಅಧೋಗತಿಗೆ ಹೋಗುತ್ತೆ ಅಂತ ಈ ರೀತಿ ಪ್ರತಿಭಟನೆ ಮಾಡ್ತಿದ್ದಾರೆ ಅಂತಾ ವಾಗ್ದಾಳಿ ನಡೆಸಿದ್ದಾರೆ.
ಕಾಂಗ್ರೆಸ್ನವರು ಭ್ರಷ್ಟಾಚಾರ ನಡೆಸಿರುವವರ ಪರ ಹೋರಾಟ ಮಾಡುತ್ತಿದ್ದಾರೆ. ಈಗ ಅವರು ರಾಜಭವನ ಚಲೋ ನಡೆಸುತ್ತಿದ್ದಾರೆ. ಈ ರೀತಿ ಮಾಡಿದ್ರೆ ಜನ ಅವರನ್ನ ಮನೆಗೆ ಚಲೋ ಮಾಡುತ್ತಾರೆ ಎಂದು ಸಿಎಂ ಬೊಮ್ಮಾಯಿ ಲೇವಡಿ ಮಾಡಿದ್ದಾರೆ
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, "ದೇಶದಲ್ಲಿ ಕಾಂಗ್ರೆಸ್ ನಾಯಕರಿಗೊಂದು ಕಾನೂನು, ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು ಅಂತಾ ಸಂವಿಧಾನದಲ್ಲಿ ಇದೆಯೇ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
ರಾಹುಲ್ ಗಾಂಧಿ ಮೇಲಿನ ED ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಯಲಿದೆ. ಇಂದು ಕಾಂಗ್ರೆಸ್ ನಾಯಕರು ದೇಶಾದ್ಯಂತ ರಾಜಭವನ ಚಲೋ ಹಮ್ಮಿಕೊಂಡಿದ್ದಾರೆ. ನಾಳೆ ಎಲ್ಲಾ ಜಿಲ್ಲಾಧಿಕಾರಿ ಮುಂದೆ ಪ್ರತಿಭಟನೆ ನಡೆಸಲಿದ್ದಾರೆ..
ಶೇಖ್ ಹುಸೇನ್ ವಿರುದ್ಧ ಗಿಟ್ಟಿಖಾಡನ್ ಪೊಲೀಸ್ ಠಾಣೆಯಲ್ಲಿ ಐಪಿಸಿ ಸೆಕ್ಷನ್ 294 ಮತ್ತು 504 ಅಡಿಯಲ್ಲಿ ಎಫ್ಐಆರ್ ದಾಖಲಾಗಿದೆ. ಹುಸೇನ್ ನೀಡಿರುವ ಆಕ್ಷೇಪಾರ್ಹ ಹೇಳಿಕೆಗೆ ಬಿಜೆಪಿಯ ನಾಗ್ಪುರ ಘಟಕ ಆಕ್ಷೇಪ ವ್ಯಕ್ತಪಡಿಸಿದೆ.
ಇಡಿ ಇಕ್ಕಳದಲ್ಲಿ ಸಿಲಿಕೊಕೊಂಡಿರೊ ರಾಷ್ಟ್ರ ನಾಯಕ ರಾಹುಲ್ ಗಾಂಧಿಗೆ ಮೂರನೇ ದಿನವೂ ಜಾರಿ ನಿರ್ದೇಶನಾಲಯ ಫುಲ್ ಡ್ರಿಲ್ ನಡೆಸಿದೆ. ಅತ್ತ ರಾಹುಲ್ ಗಾಂಧಿ ಇಡಿ ವಿಚಾರಣೆ ಎದುರಿಸುತ್ತಿದ್ರೆ, ಇತ್ತ ಕಾಂಗ್ರೆಸ್ ನಾಯಕರು ರಾಷ್ಟ್ರ ರಾಜ್ಯಧಾನಿಯಲ್ಲಿ ಮತ್ತೆ ದೊಡ್ಡ ಹೈಡ್ರಾಮವೇ ಸೃಷ್ಟಿಸಿದ್ದಾರೆ.
ರಾಹುಲ್ ಗಾಂಧಿ ಮೇಲಿನ ED ದಾಳಿ ವಿರೋಧಿಸಿ ಕಾಂಗ್ರೆಸ್ ನಾಯಕರು ನಡೆಸುತ್ತಿರುವ ಪ್ರತಿಭಟನೆಯನ್ನು ಸಚಿವ ಶ್ರೀರಾಮುಲು ಖಂಡಿಸಿದ್ದಾರೆ.. ನ್ಯಾಶನಲ್ ಹೆರಾಲ್ಡ್ ಪ್ರಕರಣ ಹಳೆಯದ್ದು. ಕಾನೂನು ಪ್ರಕಾರ ಎಲ್ಲರೂ ಸಮಾನರು. ಇಂಥಾ ಸಮಯದಲ್ಲಿ ಕಾನೂನಿಗೆ ಗೌರವ ಕೊಡುವ ಕೆಲಸ ಮಾಡಬೇಕು ಎಂದು ಶ್ರೀರಾಮುಲು ಹೇಳಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಇಡಿ ವಿಚಾರಣೆ ಸಂಬಂಧ ದೇಶದಾದ್ಯಂತ ಕಾಂಗ್ರೆಸ್ ಬೃಹತ್ ಹೋರಾಟ ನಡೆಸಿತು. ಆದ್ರೆ ಈ ಬಗ್ಗೆ ರಾಜ್ಯದ ಕಮಲ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದು, ಇಡಿ ಅಧಿಕಾರಗಳು ತಮ್ಮ ಕೆಲಸ ಮಾಡುತ್ತಿದ್ದಾರೆ ಅಷ್ಟೇ ಅಂತ ಕಿಡಿಕಾರಿದ್ದಾರೆ. ಕಾಂಗ್ರೆಸ್ ನಾಯಕರು ಭ್ರಷ್ಟಾಚಾರ ನಡೆಸಿಲ್ಲ ಅನ್ನೋದಾದ್ರೆ ವಿಚಾರಣೆಗೆ ಯಾಕೆ ಭಯ ಪಡುತ್ತಿದ್ದಾರೆ ಎಂದು ಕಮಲ ನಾಯಕರು ಪ್ರಶ್ನೆ ಮಾಡಿದ್ದಾರೆ.
ಪ್ರತಿಭಟನೆ ಹೆಸರಿನಲ್ಲಿ ಕಾಂಗ್ರೆಸ್ ನಾಯಕರು ಈ ನೆಲದ ಕಾನೂನನ್ನು ಧಿಕ್ಕರಿಸಿದ್ದಾರೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋನಿಯಾ, ರಾಹುಲ್ ಗಾಂಧಿಗೆ ಇಡಿ ನೋಟಿಸ್ ಹಿನ್ನೆಲೆ ..ಇಡಿ ನೋಟಿಸ್ ಖಂಡಿಸಿ ದೇಶಾದ್ಯಂತ ಕಾಂಗ್ರೆಸ್ ಪ್ರತಿಭಟನೆ..ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಇಡಿ ನೋಟಿಸ್ ಜಾರಿ..ಇಂದು ರಾಹುಲ್ ಗಾಂಧಿ ಇಡಿ ಮುಂದೆ ವಿಚಾರಣೆಗೆ ಹಾಜರು ..
ಕಾಂಗ್ರೆಸ್ ವರಿಷ್ಠರಿಗೆ ಇಡಿ ನೋಟಿಸ್ ನೀಡಿರುವ ಹಿನ್ನಲೆಯಲ್ಲಿ ಇಂದು ದೇಶಾದ್ಯಂತ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಜೆಪಿ ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ನಾಯಕರು ಇಂದು ದೇಶದಲ್ಲಿ ಇರುವ ಎಲ್ಲಾ ಇಡಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.