ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭಾನುವಾರ ಹೊಸ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯನ್ನು (ಸಿಡಬ್ಲ್ಯೂಸಿ) ರಚಿಸಿದ್ದು, ಈ ಸಮಿತಿಯು ಪಕ್ಷದ ನಿರ್ಣಾಯಕ ನಿರ್ಧಾರಗಳನ್ನು ತೆಗೆದುಕೊಳ್ಳುತ್ತದೆ. ಹೊಸ ಸಮಿತಿಯಲ್ಲಿ ಶಶಿ ತರೂರ್, ಸಚಿನ್ ಪೈಲಟ್, ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಸೇರಿದಂತೆ ಒಟ್ಟು 39 ನಾಯಕರನ್ನು ಹೊಂದಿದೆ.
ಭಾನುವಾರದಂದು ನಡೆದ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಸಭೆಯ ನಂತರ ಕಾಂಗ್ರೆಸ್ ಪಕ್ಷವು ಸೋನಿಯಾ ಗಾಂಧಿ ಅವರು ಹಳೆಯ ಪಕ್ಷವನ್ನು ಮುನ್ನಡೆಸುತ್ತಾರೆ ಮತ್ತು ಪಕ್ಷದ ಅಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುತ್ತಾರೆ ಎಂದು ಘೋಷಿಸಿದೆ.
ಇತ್ತೀಚಿನ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲನುಭವಿಸಿದ ಬಳಿಕ ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಭಾನುವಾರ ಸಭೆ ಸೇರಿ ಸೋಲಿನ ಕಾರಣಗಳ ಬಗ್ಗೆ ಪರಾಮರ್ಶೆ ನಡೆಸಿ ಮುಂದಿನ ಕ್ರಮಗಳ ಕುರಿತು ಚರ್ಚೆ ನಡೆಸಲಿದೆ.
ಐದು ರಾಜ್ಯಗಳಲ್ಲಿ ಹೀನಾಯ ಸೋಲನ್ನು ಕಂಡಿರುವ ಬೆನ್ನಲ್ಲೇ ಈಗ ಕಾಂಗ್ರೆಸ್ ಪಕ್ಷದ ಕಾರ್ಯಕಾರಿ ಸಮಿತಿ ಸಭೆ ನಾಳೆ ಸಂಜೆ ಸೇರಲಿದೆ.ಈ ಸಭೆಯಲ್ಲಿ ಪಕ್ಷದ ನಾಯಕತ್ವ ಹಾಗೂ ಮುಂದಿನಗಳಲ್ಲಿ ಪಕ್ಷದ ಕಾರ್ಯತಂತ್ರದ ಕುರಿತಾಗಿ ಚರ್ಚಿಸಲಾಗುವುದು ಎನ್ನಲಾಗಿದೆ.
ಪಂಚ ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ (Five State Election result) ಹೊರಬಿದ್ದಿದ್ದು, ಐದು ರಾಜ್ಯಗಳಾದ ಮಣಿಪುರ, ಉತ್ತರಾಖಂಡ, ಉತ್ತರ ಪ್ರದೇಶ, ಗೋವಾ ಮತ್ತು ಪಂಜಾಬ್ಗಳಲ್ಲಿ ಕಾಂಗ್ರೆಸ್ ಕಳಪೆ ರಿಸಲ್ಟ್ ಪಡೆದುಕೊಂಡಿದೆ.
ಕಾಂಗ್ರೆಸ್ ಪಕ್ಷದಲ್ಲಿ ನಡೆಯುತ್ತಿರುವ ನಾಯಕತ್ವದ ಬಿಕ್ಕಟ್ಟಿನ ಮಧ್ಯೆ ಈಗ ಹಂಗಾಮಿ ಅಧ್ಯಕ್ಷರನ್ನು ನೇಮಕ ಮಾಡಲು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ) ಮುಂದಿನ ವಾರ ಸಭೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಮೂಲಗಳ ಪ್ರಕಾರ ಮುಂದಿನ ವಾರ ಸಿಡಬ್ಲ್ಯುಸಿ ಸಭೆ ದಿನಾಂಕವನ್ನು ನಿಗದಿಪಡಿಸಲಾಗುವುದು. ಆಗ ನೂತನ ಹಂಗಾಮಿ ಅಧ್ಯಕ್ಷರನ್ನು ನೇಮಕ ಮಾಡಲಾಗುವುದು ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.