ಸಂವಿಧಾನ, ಸಮಾನತೆ, ಮಾನವ ಸಮಾಜದ ನಿರ್ಮಾಣದ ಪರವಾಗಿರುವವರ ಕೈಯಲ್ಲಿದ್ದರೆ ಸಂವಿಧಾನ ಯಶಸ್ವಿಯಾಗುತ್ತದೆ. ಸಂವಿಧಾನಕ್ಕೆ ವಿರುದ್ಧವಾಗಿರುವವರ ಕೈಯಲ್ಲಿದ್ದರೆ ನಮಗೆ ಉಳಿಗಾಲವಿಲ್ಲ. ಸಂವಿಧಾನದ ಆಶಯಗಳು ಈಡೇರಲು ಸಂವಿಧಾನದ ಪರವಾಗಿರುವವರ ಕೈಯಲ್ಲಿ ಅಧಿಕಾರವಿರಬೇಕು ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟರು.
CM Siddaramaiah speech on secularism and equality: ಜಾತ್ಯಾತೀತತೆ, ಸಮಾನತೆ, ಭ್ರಾತೃತ್ವ ತತ್ವಗಳೇ ಸಂವಿಧಾನದ ತಳಹದಿ.ಈ ಸಿದ್ಧಾಂತಗಳಿಗೆ ಧಕ್ಕೆ ತರುವ ಪ್ರಯತ್ನಗಳನ್ನು ವಿಫಲಗೊಳಿಸಬೇಕಾಗಿರುವುದು ಪ್ರತಿಯೊಬ್ಬ ನಾಗರಿಕನ ಜವಾಬ್ದಾರಿ. ಇದಕ್ಕೆ ಯಾವ ಪಕ್ಷ, ಗುಂಪು ಇಲ್ಲ. ಸಂವಿಧಾನ ಈ ದೇಶದ ಎಲ್ಲಾ ಜನರಿಗೆ ಸಲ್ಲುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
CM Siddaramaiah on B.R. Ambedkar's Constitution : ಅಂಬೇಡ್ಕರ್ ಸಂವಿಧಾನ ನೀಡದೇ ಹೋಗಿದ್ದರೆ ನಾನು ಮುಖ್ಯಮಂತ್ರಿ ಆಗುತ್ತಲೇ ಇರಲಿಲ್ಲ. ಆದ್ದರಿಂದ ಸಂವಿಧಾನ ವಿರೋಧಿಗಳು ನಮ್ಮ ವಿರೋಧಿಗಳು ಎನ್ನುವುದನ್ನು ನಾವು-ನೀವು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಸಂವಿಧಾನದ ವಿರೋಧಿಗಳನ್ನು ಸಾರಾ ಸಗಟಾಗಿ ತಿರಸ್ಕರಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಮನವಿ ಮಾಡಿದರು.
Republic Day 2024: ಗಣರಾಜ್ಯೋತ್ಸವವನ್ನು ರಾಷ್ಟ್ರವ್ಯಾಪಿ ಆಚರಣೆಗಳಿಂದ ಗುರುತಿಸಲಾಗಿದ. ಪ್ರಮುಖವಾಗಿ ದೆಹಲಿಯ ರಾಜ್ಪಥ್ನಿಂದ ಇಂಡಿಯಾ ಗೇಟ್ವರೆಗೆ ಗ್ರ್ಯಾಂಡ್ ಪರೇಡ್ ನಡೆಯಲಿದೆ. ರಾಷ್ಟ್ರಪತಿಗಳು ರಾಜಪಥದಲ್ಲಿ ಧ್ವಜಾರೋಹಣ ಮಾಡುತ್ತಾರೆ. ಭಾರತೀಯ ಸಶಸ್ತ್ರ ಪಡೆಗಳು ಮೆರವಣಿಗೆಗಳು ಮತ್ತು ವೈಮಾನಿಕ ಪ್ರದರ್ಶನಗಳ ಮೂಲಕ ದೇಶದ ಸಾಂಸ್ಕೃತಿಕ ಮತ್ತು ಸಾಮಾಜಿಕ ಪರಂಪರೆಯನ್ನು ಪ್ರದರ್ಶಿಸುತ್ತವೆ.
‘We the people of India’ ಎನ್ನುವ ಮೂಲಕವೇ ನಮ್ಮ ಸಂವಿಧಾನ ತೆರೆದುಕೊಳ್ಳುತ್ತದೆ. ಸಂವಿಧಾನದ ಆಶಯಗಳನ್ನು ಪರಿಣಾಮಕಾರಿಯಾಗಿ ಅರ್ಥೈಸಿಕೊಂಡು ಪಾಲಿಸದಿದ್ದರೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರು ರಾಜ್ಯದ ಕೆಸಿ ರೆಡ್ಡಿ, ಕೆಂಗಲ್ ಹನುಮಂತಯ್ಯ, ಟಿ ಸಿದ್ದಲಿಂಗಯ್ಯ, ಎಚ್ ಆರ್ ಗುರುವ ರೆಡ್ಡಿ, ಎಸ್ ವಿ ಕೃಷ್ಣಮೂರ್ತಿ ರಾವ್, ಎಚ್ ಸಿದ್ದವೀರಪ್ಪ, ಟಿ ಚನ್ನಯ್ಯ ಮತ್ತು ಎಸ್ ನಿಜಲಿಂಗಪ್ಪ ಅವರು ಸಂವಿಧಾನ ರಚನಾ ಸಭೆಯ ಸದಸ್ಯರಾಗಿ ಸಂವಿಧಾನ ರಚನೆಯಲ್ಲಿ ಮತ್ವದ ಪಾತ್ರವಹಿಸಿದ್ದಾರೆ.
ಭಾರತೀಯ ಸಂವಿಧಾನದ ವಿಷಯ ಬಂದಾಗಲೆಲ್ಲಾ ಸಾಮಾನ್ಯವಾಗಿ ಕೇಶವಾನಂದ ಭಾರತಿ ಪ್ರಕರಣ ಅತಿ ಹೆಚ್ಚು ಚರ್ಚೆಗೆ ಒಳಗಾಗಿದೆ.ಇಂತಹದೊಂದು ಪ್ರಕರಣಕ್ಕೆ ನಾಂದಿ ಹಾಡಿದ ಕೇರಳದ ಕೇಶವಾನಂದ ಭಾರತಿ ಸ್ವಾಮೀಜಿ ಭಾನುವಾರದಂದು ತಮ್ಮ 80 ನೇ ವಯಸ್ಸಿನಲ್ಲಿ ಕೊನೆಯುಸಿರೆಳೆದಿದ್ದಾರೆ.
ಮಹಾರಾಷ್ಟ್ರದಲ್ಲಿ ಬಿಜೆಪಿಯಿಂದ ಸರ್ಕಾರ ರಚನೆಯ ವಿರುದ್ಧ ವಿರೋಧ ಪಕ್ಷಗಳು ನಡೆಸಿದ ಪ್ರತಿಭಟನೆಯ ಸಂದರ್ಭದಲ್ಲಿ ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮಂಗಳವಾರ ಭಾರತದ ಸಂವಿಧಾನದ ಮುನ್ನುಡಿ ಓದಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.