ಆರಂಭದ ಎರಡು ಕೋವಿಡ್ ಅಲೆಗಳಲ್ಲಿ ಹೆಚ್ಚು ಜನರು ಸಾವನ್ನಪ್ಪಿದ್ದರು. ಆದರೆ ಕರೋನಾ ಮೂರನೇ ಅಲೆಯಲ್ಲಿ ಕರೋನಾದಿಂದಾಗಿ ಹೆಚ್ಚು ಸಾವು-ನೋವು ಆಗದಂತೆ ಪರಿಸ್ಥಿತಿಯನ್ನು ನಿಯಂತ್ರಿಸುವಲ್ಲಿ ಸರ್ಕಾರ ಯಶಸ್ವಿಯಾಯಿತು. ಅದಾಗ್ಯೂ, ಕರೋನಾವೈರಸ್ ಹೊಸ ರೂಪಾಂತರವೂ ದೇಶದಲ್ಲಿ ಕೋವಿಡ್ ನಾಲ್ಕನೇ ಅಲೆಗೆ ಕಾರಣವಾಗಬಹುದು ಎಂದು ಹೇಳಲಾಗುತ್ತಿದ್ದು ಕೊರೋನ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಅಗತ್ಯವಿದೆ. ಇದು ಕೇವಲ ಸರ್ಕಾರದ ಕೆಲಸವಲ್ಲ, ಸಾರ್ವಜನಿಕರ ಕರ್ತವ್ಯವೂ ಹೌದು ಎಂಬುದರಲ್ಲಿ ಎರಡು ಮಾತಿಲ್ಲ.
ಕರೋನಾ ಕುರಿತು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸುವುದು ನಮ್ಮ-ನಿಮ್ಮೆಲ್ಲರ ಕರ್ತವ್ಯ. ಇದಕ್ಕೆ ನಿದರ್ಶನ ಎಂಬಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಸಾದಹಳ್ಳಿ ಸಮೀಪದ ಕ್ಲಾರ್ಕ್ ಎಕ್ಸೋಟಿಕಾ ರೆಸಾರ್ಟ್ ನಲ್ಲಿ ಫ್ಯಾಮಿಲಿಯೊಂದು ಕೊರೊನಾ ವಿಶೇಷ ಜಾಗೃತಿಯೊಂದಿಗೆ ಮದುವೆ ಕಾರ್ಯಕ್ರಮ ಮಾಡಿದೆ.
ವೈಕುಂಠ ಏಕಾದಶಿ (Vaikunta Ekadashi) ದಿನದಂದು ಈಗಾಗಲೇ ನಿಗದಿಪಡಿಸಿರುವಂತೆ ಪೂರ್ಣ ಪ್ರಮಾಣದ ಕೋವಿಡ್-19 ಲಸಿಕೆ (Covid-19 Vaccine) ಪಡೆದ 50 ಜನರಿಗೆ ಮಾತ್ರ ಒಂದು ಬಾರಿಗೆ ದರ್ಶನಕ್ಕೆ ಅವಕಾಶ ಕಲ್ಪಿಸತಕ್ಕದ್ದು, ಯಾವುದೇ ಸೇವೆ ಇತ್ಯಾದಿಗಳಿಗೆ ಅವಕಾಶವಿರುವುದಿಲ್ಲ.
ಕರೋನವೈರಸ್ನ ಹೊಸ ಓಮಿಕ್ರಾನ್ ರೂಪಾಂತರದಿಂದ ಪ್ರಚೋದಿಸಲ್ಪಟ್ಟ COVID-19 ಪ್ರಕರಣಗಳು ಮಹಾರಾಷ್ಟ್ರದಲ್ಲಿ ಹೆಚ್ಚುತ್ತಲೇ ಇರುವುದರಿಂದ, ರಾಜ್ಯ ಸರ್ಕಾರವು ಭಾನುವಾರದಂದು (ಜನವರಿ 9) ರಾಜ್ಯದಲ್ಲಿ ಅನುಸರಿಸಬೇಕಾದ ಪರಿಷ್ಕೃತ COVID-19 ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಐಸಿಎಂಆರ್ ಮತ್ತು ಲಂಡನ್ನಇಂಪೀರಿಯಲ್ ಕಾಲೇಜಿನ ಸಂಶೋಧಕರು 'revenge travel ನಿಂದ ಭಾರತದಲ್ಲಿ COVID-19 ಮೂರನೇ ಅಲೆಯ ಸ್ಥಿತಿ ಮತ್ತಷ್ಟು ಹದಗೆಡಬಹುದು ಎಂದು ಅಧ್ಯಯನವೊಂದರಲ್ಲಿ ತಿಳಿಸಲಾಗಿದೆ.
ಈ ಮಾರ್ಗಸೂಚಿಯ ಪ್ರಕಾರ, ಮಕ್ಕಳಿಗೆ ರೆಮ್ಡೆಸಿವಿರ್ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. 5 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಫೇಸ್ ಮಾಸ್ಕ್ ಧರಿಸುವ ಅಗತ್ಯವಿಲ್ಲ ಎಂದು ಸಹ ತಿಳಿಸಲಾಗಿದೆ.
PM Modi Address To Nation: ಕೊರೊನಾದ ಈ ಸಂಕಷ್ಟದ ಪರಿಸ್ಥಿತಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಹುದೊಡ್ಡ ಘೋಷಣೆಯೊಂದನ್ನು ಮಾಡಿದ್ದಾರೆ. ಬರುವ ಜೂನ್ 21 ರಿಂದ ಅಂದರೆ ಅಂತಾರಾಷ್ಟ್ರೀಯ ಯೋಗ ದಿನಾಚರನೆಯಿಂದ ದೇಶದ 18 ವರ್ಷ ವಯಸ್ಸಿಗಿಂತ ಮೇಲ್ಪಟ್ಟ ಜನರಿಗೆ ಭಾರತ ಸರ್ಕಾರ ಉಚಿತವಾಗಿ ವ್ಯಾಕ್ಸಿನ್ ಪೂರೈಸಲಿದೆ ಎಂದು ಘೋಷಿಸಿದ್ದಾರೆ. ಅಂದರೆ, ವ್ಯಾಕ್ಸಿನ್ ನಿರ್ವಹಣಾ ಜವಾಬ್ದಾರಿಯಿಂದ ರಾಜ್ಯಗಳನ್ನು ಮುಕ್ತಗೊಳಿಸಲಾಗಿದೆ.
ಕೋವಿಡ್ -19ನ ಹೆಚ್ಚುತ್ತಿರುವ ಪ್ರಕರಣಗಳ ಬಗ್ಗೆ, ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕಠಿಣ ಎಚ್ಚರಿಕೆ ನೀಡಿದೆ. ಜೊತೆಗೆ ಕೇವಲ ಮಾರ್ಗಸೂಚಿಗಳನ್ನು ಮಾಡುವುದರಿಂದ ಏನೂ ಆಗಲ್ಲ, ಅವುಗಳನ್ನು ಪಾಲಿಸುವಂತೆ ಮಾಡುವುದು ಕೂಡ ಅವಶ್ಯಕವಾಗಿದೆ ಎಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.