ಮುಂಗಾರು ಹಂಗಾಮಿಗೆ ಆಯ್ದ ಹೋಬಳಿಗಳಲ್ಲಿ ರಾಗಿ(ಮಳೆ ಆಶ್ರಿತ) ಹಾಗೂ ಜೋಳ (ಮಳೆಆಶ್ರಿತ) ಮತ್ತು ಗ್ರಾಮ ಪಂಚಾಯಿತಿ ಮಟ್ಟಕ್ಕೆ ಭತ್ತ(ನೀರಾವರಿ/ಮಳೆ ಆಶ್ರಿತ), ಮುಸುಕಿನ ಜೋಳ(ನೀರಾವರಿ/ಮಳೆ ಆಶ್ರಿತ) ಬೆಳೆಗಳು ಆಯ್ಕೆಯಾಗಿರುತ್ತವೆ. ಜಿಲ್ಲೆಯಲ್ಲಿ ಬೆಳೆ ವಿಮಾ ಯೋಜನೆಯನ್ನು ಸರ್ಕಾರದಿಮದ ಆಯ್ಕೆಯಾದ ಓರಿಯಂಟಲ್ ಜನರಲ್ ಇನ್ಶೂರೆನ್ಸ್ ಕಂಪನಿ ಇವರ ಸಹಯೋಗದೊಂದಿಗೆ ಅನುಷ್ಟಾನಗೊಳಿಸಲಾಗುವುದು.
2023-24ನೇ ಸಾಲಿನ “ನನ್ನ ಬೆಳೆ ನನ್ನ ಹಕ್ಕು” ಆಶಯದಂತೆ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರಗಳನ್ನು ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಆಪ್ ಬಳಸಿಕೊಳ್ಳಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ.
2020-21 ನೇ ಸಾಲಿನ ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಈಗಾಗಲೇ ಪ್ರಾರಂಭವಾಗಿದ್ದು, ರೈತರು ತಾವು ಬೆಳೆದ ಬೆಳೆಗಳ ವಿವರಗಳನ್ನು ಖುದ್ದಾಗಿ ಗೂಗಲ್ ಪ್ಲೇಸ್ಟೋರ್ನಿಂದ “ರೈತರ ಬೆಳೆ ಸಮೀಕ್ಷೆ 2020-21 ಆ್ಯಪ್” ಡೌನ್ಲೋಡ್ ಮಾಡಿಕೊಂಡು ಬೆಳೆ ವಿವರ ದಾಖಲಿಸಬೇಕು.
ಧಾರವಾಡ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಯು ಖಾಸಗಿ ನಿವಾಸಿಗಳಿಂದ ದಾಖಲಿಸುವ ಕಾರ್ಯ ಶೇ.92.16 ರಷ್ಟು ಪ್ರಗತಿಯಾಗಿದ್ದು, ಇತ್ತೀಚಿನ ದಿನಗಳಲ್ಲಿ ಸತತ ಮಳೆಯಿಂದಾಗಿ ಬೆಳೆ ಸಮೀಕ್ಷೆ ಕಾರ್ಯ ಸಂಪೂರ್ಣಗೊಳಿಸಲು ಸಾಧ್ಯವಾಗಿರುವುದಿಲ್ಲ.ಇದನ್ನು ಪರಿಗಣಿಸಿ ಖಾಸಗಿ ನಿವಾಸಿಗಳಿಂದ ಬೆಳೆ ಸಮೀಕ್ಷೆ ಕೈಗೊಳ್ಳುವ ಅವಧಿಯನ್ನು ಅಕ್ಟೋಬರ್ 15,2020 ರವರೆಗೆ ವಿಸ್ತರಿಸಲಾಗಿದೆ.
ಪ್ರಸಕ್ತ ಸಾಲಿನಲ್ಲಿ ರೈತರು ತಮ್ಮ ಜಮೀನುಗಳಲ್ಲಿ ತಾವು ಬೆಳೆದ ಬೆಳೆಗಳ ಮಾಹಿತಿಯನ್ನು ಛಾಯಾಚಿತ್ರ ಸಹಿತ “ಬೆಳೆ ಸಮೀಕ್ಷೆ ಮೊಬೈಲ್ ಆ್ಯಪ್” ಮೂಲಕ ಸ್ವಯಂ ದಾಖಲಿಸುವ ವಿನೂತನ ಯೋಜನೆಯನ್ನು ಪ್ರಾರಂಭಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.