ರಾಷ್ಟ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕಿತ್ತೊಗೆಯುವವರೆಗೂ ನಮ್ಮ ಹೋರಾಟ ಮುಂದುವರಿಯಬೇಕು. ನಮ್ಮ ಹೋರಾಟ ಶಾಂತಿಯುತವಾಗಿರಬೇಕು. ಗಾಂಧಿ ತತ್ವ ಹಾಗೂ ನಾಯಕತ್ವದಲ್ಲಿ ಶಾಂತಿಯುತ ಹೋರಾಟ ಮಾಡಿದಂತೆ ನಾವು ಹೋರಾಟ ಮಾಡಬೇಕು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
'ಪಿಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಮುಖ್ಯಮಂತ್ರಿಗಳ ಕಚೇರಿಯಿಂದ ಹಿಡಿದು ಗೃಹ ಸಚಿವಾಲಯ, ಪೊಲೀಸ್ ಅಧಿಕಾರಿಗಳ ಕಚೇರಿಗಳ ಪ್ರತಿನಿಧಿಗಳು ಭಾಗಿಯಾಗಿದ್ದು, ಸರ್ಕಾರ ಎಲ್ಲವನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದೆ. ಹೀಗಾಗಿ ಪ್ರಕರಣದ ಎಲ್ಲ ಬಂಧಿತರಿಂದ ಸೆಕ್ಷನ್ 164 ಪ್ರಕಾರ ನ್ಯಾಯಾಧೀಶರ ಮುಂದೆ ಹೇಳಿಕೆ ದಾಖಲಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಆಗ್ರಹಿಸಿದ್ದಾರೆ.
ನ್ಯಾಯಾಲಯದ ಅಭಿಪ್ರಾಯಕ್ಕೆ ಗೌರವ ಕೊಟ್ಟು ಮೇಕೆದಾಟು ಪಾದಯಾತ್ರೆಯನ್ನು ತಾತ್ಕಾಲಿಕವಾಗಿ ಮುಂದೂಡಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ.ಈ ಹೋರಾಟ ಪೂರ್ಣ ಪ್ರಮಾಣದಲ್ಲಿ ನಿಂತಿಲ್ಲ, ಜನರಿಗೆ ಕುಡಿಯುವ ನೀರು ನೀಡುವ ಬದ್ಧತೆಯನ್ನು ಪಕ್ಷ ಕಾಯ್ದುಕೊಳ್ಳಲಿದ್ದು, ಮುಂದಿನ ದಿನಗಳಲ್ಲಿ ಇದೇ ರಾಮನಗರದಿಂದ ಪಾದಯಾತ್ರೆ ಮುಂದುವರಿಸಲಾಗುತ್ತದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಹೇಳಿದ್ದಾರೆ.
ರಾಜ್ಯದಲ್ಲಿ ವಿದ್ಯಾರ್ಥಿಗಳಿಗೆ ಊಟಕ್ಕೆ ಮೊಟ್ಟೆಯನ್ನು ನೀಡುವ ವಿಚಾರವಾಗಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಈಗ ಈ ಸರ್ಕಾರಕ್ಕೆ ಮೊಟ್ಟೆ ಕೊಡುವುದು ಒಂದೆಡೆ ಇರಲಿ ಬಿಸಿಯೂಟಕ್ಕೆ ಸರಿಯಾಗಿ ದಿನಸಿಯಾದರೂ ನೀಡುತ್ತಿದೆಯೇ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ.
ಕಳೆದ ಮೂರು ದಿನಗಳಿಂದ ಗುಲ್ಬರ್ಗ-ರಾಯಚೂರು ಪ್ರವಾಸದಲ್ಲಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಫುಡ್ ಪಾಯ್ಸನ್ ಆಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಅವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದೇನೆ.
ಜಲಾಶಯಗಳ ನೀರಿನ ಮಟ್ಟ ದಿನದಿಂದ ದಿನಕ್ಕೆ ಏರುತ್ತಿದ್ದು, ನೀರಿನ ಒತ್ತಡ ಹೆಚ್ಚಾಗಿರುವ ಕಾರಣ ಅಲ್ಲಲ್ಲಿ ಬಿರುಕು ಕಂಡುಬಂದಿದೆ ಎಂದು ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.