Deepika Padukone : ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ಅಭಿನಯದ ಮುಂಬರುವ ಸಿನಿಮಾ ʼಪಠಾನ್ʼ ವಿವಾದದ ಕೇಂದ್ರ ಬಿಂದುವಾಗಿದೆ. ಮಧ್ಯಪ್ರದೇಶದಲ್ಲಿ ದೀಪಿಕಾ ಕೇಸರಿ ಬಿಕನಿ ವಿವಾದ ತಾರಕ್ಕೇರಿದೆ. ಥಿಯೇಟರ್ಗಳಲ್ಲಿ ಚಲನಚಿತ್ರವನ್ನು ನಿಷೇಧಿಸಲು ಒತ್ತಾಯಗಳು ಹೆಚ್ಚುತ್ತಿವೆ. ಈ ನಡುವೆ ಸೋಮವಾರದಿಂದ ಪ್ರಾರಂಭವಾಗಲಿರುವ ವಿಧಾನಸಭೆಯ ಚಳಿಗಾಲದ ಅಧಿವೇಶನದಲ್ಲಿ ಈ ವಿಷಯವನ್ನು ಚರ್ಚಿಸುವ ಸಾಧ್ಯತೆಯಿದೆ.
ಬಾಲಿವುಡ್ ಬಾದ್ ಶಾ ಶಾರುಖ್ ಖಾನ್ ನಟನೆಯ, ನಿರ್ದೇಶಕ ಸಿದ್ಧಾರ್ಥ್ ಆನಂದ್ ನಿರ್ದೇಶಿಸಿರುವ ʼಪಠಾಣ್ʼ ಚಿತ್ರ ವಿವಾದಕ್ಕೆ ಕಾರಣವಾಗಿದೆ. ಸಿನಿಮಾದ ಹಾಡಿನ ದೃಶ್ಯ ಒಂದರಲ್ಲಿ ನಟಿ ದೀಪಿಕಾ ಪಡುಕೋಣೆ ಅವರು ಕೇಸರಿ ಬಿಕಿನಿ ಧರಿಸಿದ್ದು ನೆಟ್ಟಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಅಲ್ಲದೆ, ಹಿಂದೂ ಸಂಘಟನೆಗಳು ಸಿನಿಮಾ ಬಿಡುಗಡೆ ಮಾಡದಂತೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಈ ಕುರಿತು, ನಟ, ರಾಜಕಾರಣಿ ಪ್ರಕಾಶ್ ರಾಜ್ ಪ್ರತಿಕ್ರಿಯೆ ನೀಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.