ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಆಘಾತಕಾರಿ ಘಟನೆಯೊಂದು ನಡೆದಿದೆ. ವ್ಯಕ್ತಿಯೊಬ್ಬ ಲಿವ್-ಇನ್ ಇದ್ದ ತನ್ನ ಸಂಗಾತಿಯನ್ನು ಕತ್ತು ಹಿಸುಕಿ ಹತ್ಯೆ ಮಾಡಿ ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿ 18 ದಿನಗಳ ಕಾಲ ಪ್ರಿಡ್ಜ್ನಲ್ಲಿ ಇಟ್ಟು ನಂತರ ಮೆಹ್ರೌಲಿ ಅರಣ್ಯದಲ್ಲಿ ಎಸೆದ ಭಯಾನಕ ಪ್ರಕರಣವೊಂದು ಬೆಳಕಿಗೆ ಬಂದಿದೆ. ದೇಹದ ಭಾಗಗಳನ್ನು ಬಿಸಾಡಲು ಅವನು ಪ್ರತಿದಿನ ಮುಂಜಾನೆ 2 ಗಂಟೆಗೆ ಹೊರಹೋಗುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಸದ್ಯ ಆರೋಪಿಯನ್ನು 5 ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.