ಚೀನಾದಲ್ಲಿ ಜಾರಿಯಲ್ಲಿರುವ ಕೊರೊನಾ ವೈರಸ್ ಹಾವಳಿ ಹಾಗೂ ವಿಭಿನ್ನ ಏಜೆನ್ಸಿಗಳಿಂದ ಬರುತ್ತಿರುವ ಆರ್ಥಿಕ ಹಿಂಜರಿತ ಸುದ್ದಿಗಳು ಇದೀಗ ಭಾರತೀಯ ಷೇರು ಮಾರುಕಟ್ಟೆಯ ಮೇಲೆ ತನ್ನ ಪ್ರಭಾವ ತೋರಿಸಲು ಆರಂಭಿಸಿವೆ.
ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರು ಶುಕ್ರವಾರ ರಾಷ್ಟ್ರೀಯ ಆರ್ಥಿಕತೆಯ ನಿರಂತರ ಕುಸಿತದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಎಎನ್ಐ ಜೊತೆ ಮಾತನಾಡಿದ ಡಾ.ಮನಮೋಹನ್ ಸಿಂಗ್, 'ನಮ್ಮ ಆರ್ಥಿಕತೆಯ ಸ್ಥಿತಿ ಚಿಂತಾಜನಕವಾಗಿದೆ, ಆದರೆ ನಮ್ಮ ಸಮಾಜದ ಸ್ಥಿತಿ ಇನ್ನಷ್ಟು ಆತಂಕಕಾರಿ ' ಎಂದು ಕಳವಳ ವ್ಯಕ್ತಪಡಿಸಿದ್ದಾರೆ.
ಶಿವಸೇನೆಯ (Shiv Sena) ಮುಖವಾಣಿ ಸಾಮ್ನಾದಲ್ಲಿ ದೇಶದ ಆರ್ಥಿಕತೆ(Economy)ಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ಮೇಲೆ ತೀವ್ರ ದಾಳಿ ನಡೆಸಿದೆ. ಸಿಎಂಐಇ(CMIE) ಬಿಡುಗಡೆ ಮಾಡಿದ ವರದಿಯನ್ನು ಉಲ್ಲೇಖಿಸಿ ಶಿವಸೇನೆ ಕೇಂದ್ರ ಸರ್ಕಾರವನ್ನು ಟೀಕಿಸಿದೆ.
ಆರ್ಥಿಕ ಕುಸಿತದ ಪರಿಣಾಮ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪ್ರಭಾವ ಈಗ ಇತರ ವಲಯಗಳಿಗೂ ವಿಸ್ತರಿಸುತ್ತಿದೆ. ಈಗ ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ)ದಲ್ಲಿ ಸತತ ಎರಡು ತಿಂಗಳ ಕುಸಿತ ಮುಂದುವರೆದಿದೆ.
ಆರ್ಥಿಕ ಕುಸಿತದ ಪರಿಣಾಮ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಅದರ ಪ್ರಭಾವ ಈಗ ಇತರ ವಲಯಗಳಿಗೂ ವಿಸ್ತರಿಸುತ್ತಿದೆ. ಈಗ ಕೈಗಾರಿಕಾ ಉತ್ಪಾದನಾ ಸೂಚ್ಯಂಕ (ಐಐಪಿ)ದಲ್ಲಿ ಸತತ ಎರಡು ತಿಂಗಳ ಕುಸಿತ ಮುಂದುವರೆದಿದೆ.
ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿಯ ವಿರುದ್ಧ ಕಾಂಗ್ರೆಸ್ ನವೆಂಬರ್ 5-15 ರಿಂದ ಪ್ರತಿಭಟನೆ ನಡೆಸಲಿದೆ. ಕಾಂಗ್ರೆಸ್ ನವೆಂಬರ್ 1-8 ರವರೆಗೆ 35 ಪತ್ರಿಕಾಗೋಷ್ಠಿಗಳನ್ನು ನಡೆಸಲಿದೆ. ಪಕ್ಷದ ಹಿರಿಯ ಮುಖಂಡರು ಈ ಪತ್ರಿಕಾಗೋಷ್ಠಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ದೇಶದ ಆರ್ಥಿಕ ಕುಸಿತದ ವಿಚಾರವಾಗಿ ಕೇಂದ್ರ ಸರ್ಕಾರವನ್ನು ಶಿವಸೇನಾ ತರಾಟೆಗೆ ತೆಗೆದುಕೊಂಡಿದೆ. ಜಿಎಸ್ಟಿ ಹಾಗೂ ನೋಟು ನಿಷೇಧದಂತಹ ಕ್ರಮಗಳಿಂದಾಗಿ ದೇಶದ ಆರ್ಥಿಕ ವ್ಯವಸ್ಥೆ ಹದಗೆಟ್ಟಿದೆ ಎಂದು ಶಿವಸೇನಾ ಹೇಳಿದೆ.
ನವೆಂಬರ್ 18 ರಿಂದ ಪ್ರಾರಂಭವಾಗಲಿರುವ ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ದೇಶದ ಆರ್ಥಿಕ ಕುಸಿತದ ಬಗ್ಗೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟಿಸಲು ಮುಖ್ಯ ವಿರೋಧ ಪಕ್ಷದ ಕಾಂಗ್ರೆಸ್ ಯೋಜಿಸುತ್ತಿದೆ.
ಸಾರ್ವಜನಿಕ ವಲಯದ ಖಾಸಗೀಕರಣದ ತಡೆ ಮತ್ತು ಕನಿಷ್ಠ ಮಾಸಿಕ ವೃದ್ಧಾಪ್ಯ ಮತ್ತು ವಿಧವಾ ಪಿಂಚಣಿಯನ್ನು 3,000 ರೂ.ಗಳಿಗೆ ಹೆಚ್ಚಿಸುವುದು, ನೌಕರರ ಕನಿಷ್ಠ ವೇತನವನ್ನು ತಿಂಗಳಿಗೆ 21,000 ರೂ. ನಿಗದಿಪಡಿಸುವುದು ಸೇರಿದಂತೆ ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಅಕ್ಟೋಬರ್ 10 ರಿಂದ 16 ರವರೆಗೆ ಪ್ರತಿಭಟನೆ ನಡೆಸಲು ಎಡಪಕ್ಷಗಳು ನಿರ್ಧರಿಸಿವೆ.
ನಾನು ಬೇರೊಂದು ಸಂದರ್ಭವನ್ನು ಗಮನದಲ್ಲಿಟ್ಟುಕೊಂದು ಆ ಹೇಳಿಕೆಯನ್ನು ನೀಡಿದ್ದೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ ಸರ್ಕಾರವು ಜನರ ಕೌಶಲ್ಯವನ್ನು ಹೆಚ್ಚಿಸಲು ಮಾಡುತ್ತಿರುವ ಪ್ರಯತ್ನಗಳ ಮೇಲೆ ನನ್ನ ಹೇಳಿಕೆ ಕೇಂದ್ರೀಕರಿಸಿದೆ ಎಂದು ಸಚಿವರು ಹೇಳಿದ್ದಾರೆ.
2019-20ರ ವಾರ್ಷಿಕ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ) 7 ವರ್ಷದಲ್ಲೇ ಕನಿಷ್ಠ ಶೇಕಡಾ 5 ಕ್ಕೆ ಕುಸಿದಿದ್ದರಿಂದಾಗಿ ಪ್ರಧಾನಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕಿಡಿ ಕಾರಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.