ಸಾವಿರಾರು ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ ಸಲ್ಲಿಕೆ ಮಳೆಗಾಗಿ ಪ್ರಾರ್ಥನೆ ಮಾಡಿದ ಮುಸ್ಲಿಂ ಬಾಂಧವರು ಪ್ರಾರ್ಥನೆಯಲ್ಲಿ ಸಚಿವ ಹೆಚ್.ಕೆ.ಪಾಟೀಲ್ ಭಾಗಿ ಮುಸ್ಲಿಂ ಸಮುದಾಯದ ಟೋಪಿ ಹಾಕಿಕೊಂಡು ನಮಾಜ್ ಪ್ರಾರ್ಥನೆ ಬಳಿಕ ಮುಸ್ಲಿಂ ಬಾಂಧವರ ಜೊತೆಗೆ ಪರಸ್ಪರ ಆಲಿಂಗನ ಮಾಡಿ ಶುಭಾಶಯ ತಿಳಿಸಿದ ಸಚಿವ ಹೆಚ್.ಕೆ.ಪಾಟೀಲ್ ಮಳೆಗಾಗಿ ಪ್ರಾರ್ಥನೆ ಮಾಡಿದ ಮುಸ್ಲಿಂ ಬಾಂಧವರಿಗೆ ಧನ್ಯವಾದ ತಿಳಿಸಿದ ಸಚಿವ ಹೆಚ್.ಕೆ.ಪಾಟೀಲ್
ಈದ್ಗಾದಲ್ಲಿ ಧಾರ್ಮಿಕ ಕಾರ್ಯಗಳಿಗೆ ಅವಕಾಶ ನೀಡೋ ಅಧಿಕಾರವನ್ನು ಹೈಕೋರ್ಟ್ ಸರ್ಕಾರಕ್ಕೆ ನೀಡಿದೆ. ಈದ್ಗಾ ಮೈದಾನದಲ್ಲಿ ಗಣೇಶ ಹಬ್ಬಕ್ಕೆ ಸರ್ಕಾರ ಗ್ರೀನ್ಸಿಗ್ನಲ್ ನೀಡುತ್ತಾ ಅನ್ನೋದು ಕುತೂಹಲ ಮೂಡಿಸಿದೆ.
ದುರ್ಗದ ಬೈಲಿಂದ ದಾಜಿಬಾನ್ ಪೇಟೆವರೆಗೂ ಭಾರೀ ಪ್ರತಿಭಟನೆ . ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಭಾಗಿ . ಸಾರ್ವಜನಿಕರಿಂದ ಸಹಿ ಸಂಗ್ರಹಿಸುತ್ತಿರುವ ಹಿಂದೂ ಸಂಘಟನೆ
ಭಜರಂಗದಳ, ಹಿಂದೂ ಜಾಗರಣ ವೇದಿಕೆ , ಶ್ರೀರಾಮ ಸೇನೆ,..
ಚಾಮರಾಜಪೇಟೆ ಈದ್ಗಾ ಮೈದಾನದ ವಿಚಾರಕ್ಕೆ ಸಂಬಂಧಿಸಿದಂತೆ ಧಾರವಾಡದಲ್ಲಿ ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ್ ಮುತಾಲಿಕ್ ಪ್ರತಿಕ್ರಿಯೆ ನೀಡಿದ್ದಾರೆ. ಈಗಾಗಲೇ ಆ ಜಾಗ ಕಂದಾಯ ಇಲಾಖೆಯದ್ದು ಅಂತ ಸರ್ಕಾರ ಡಿಕ್ಲೇರ್ ಮಾಡಿದೆ. ಅದು ಸರ್ಕಾರದ್ದು ಅಂದ ಮೇಲೂ ಸಹ ಅಲ್ಲಿಯ ಶಾಸಕ ಕೋಮುಗಲಭೆ ಸೃಷ್ಟಿಸುತ್ತಿದ್ದಾರೆ. ಹಿಂದೂಗಳ ಮೇಲೆಯೇ ಹೆಚ್ಚು ಕೇಸ್ಗಳಾಗಿವೆ. ಅದಕ್ಕಾಗಿಯೇ ರಾಜ್ಯದಲ್ಲಿ ಬಿಜೆಪಿ ಮೇಲೆ ಜನರು ಸಿಟ್ಟಾಗಿದ್ದಾರೆ ಎಂದಿದ್ದಾರೆ.
ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕಂದಾಯ ಇಲಾಖೆ ಅಧಿಕಾರಿಗಳ ಮಹತ್ವದ ಮೀಟಿಂಗ್ ನಡೆಯಲಿದೆ. ಕಂದಾಯ ಸಚಿವ ಅಶೋಕ್ ನೇತೃತ್ವದಲ್ಲಿ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದಲ್ಲಿ ಸಭೆ ನಡೆಯಲಿದೆ. ಈದ್ಗಾ ಮೈದಾನದ ಬಳಕೆ ಬಗ್ಗೆ ಮಹತ್ವದ ನಿರ್ಧಾರ ಕೈಗೊಳ್ಳುವ ಸಾಧ್ಯತೆ ಇದೆ.
ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದ ಸದ್ಯಕ್ಕಂತೂ ಬಗೆಹರಿಯೋ ಲಕ್ಷಣ ಕಾಣ್ತಿಲ್ಲ.. ಮೈದಾನದಲ್ಲಿ ರಾಷ್ಟ್ರಧ್ವಜಾರೋಹಣ ಮಾಡುವುದಾಗಿ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಹೇಳಿದ್ದಾರೆ. ಇನ್ನು ಈ ಬಗ್ಗೆ ಸಚಿವ ಆರ್.ಅಶೋಕ್ ಕೂಡಾ ಪ್ರತಿಕ್ರಿಯೆ ಕೊಟ್ಟಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.