Loksabha Election : ಬಾರಾಮತಿ ಲೋಕಸಭಾ ಕ್ಷೇತ್ರದಲ್ಲಿ ವಿದ್ಯುನ್ಮಾನ ಮತಯಂತ್ರ ಗಳನ್ನು ಇಟ್ಟಿದ ಗೋದಾಮಿನಲ್ಲಿ 45 ನಿಮಿಷ ಸಿ.ಸಿ.ಟಿ.ವಿ ಕ್ಯಾಮೆರಾಗಳು ಸ್ವಿಚ್ ಆಫ್ ಆಗಿದ್ದು, ಇದು ಅನುಮಾನಾಸ್ಪದವಾಗಿದೆ ಎಂದು ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಆರೋಪ ಮಾಡಿದೆ.
ಬಿರುಸಿನ ಮತದಾನದ ನಡುವೆ ಕೈ ಕೊಟ್ಟ EVM. ಚಾಮರಾಜನಗರ ಮತಗಟ್ಟೆಯ ಇವಿಎಂನಲ್ಲಿ ದೋಷ. ಸಂತೇಮರಹಳ್ಳಿ ವೃತ್ತ ಸಮೀಪದ ಮತಗಟ್ಟೆಯಲ್ಲಿ ಘಟನೆ. ಉಪ್ಪಾರ ಬೀದಿಯ ಮತಗಟ್ಟೆ 69ರಲ್ಲಿ ತಾಂತ್ರಿಕ ದೋಷ. ಬಳಿಕ ಅಧಿಕಾರಿಗಳಿಂದ ಸರಿಪಡಿಸುವ ಕಾರ್ಯ ಪೂರ್ಣ. ಮತದಾರರು ಅರ್ಧ ಗಂಟೆ ಕಾದು ಕಾದು ಅಸಮಾಧಾನ. ಚಾಮರಾಜನಗರದ ಉಳಿದೆಲ್ಲೆಡೆ ಬಿರುಸಿನ ಮತದಾನ.
ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷಕ್ಕೆ ಸೇರಿದ ಮಹಾರಾಷ್ಟ್ರದ ವಿರೋಧ ಪಕ್ಷದ ನಾಯಕ ಅಜಿತ್ ಪವಾರ್ ಶನಿವಾರ, ಎಲೆಕ್ಟ್ರಾನಿಕ್ ಮತಯಂತ್ರಗಳು (ಇವಿಎಂ) ವಿಶ್ವಾಸಾರ್ಹವಾಗಿವೆ ಮತ್ತು ಒಬ್ಬ ವ್ಯಕ್ತಿಯಿಂದ ವ್ಯವಸ್ಥೆಯನ್ನು ಕುಶಲತೆಯಿಂದ ನಿರ್ವಹಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ದೆಹಲಿಯ ಆಡಳಿತಾರೂಢ ಆಮ್ ಆದ್ಮಿ ಪಕ್ಷವು ಶನಿವಾರ ವಿಧಾನಸಭಾ ಚುನಾವಣೆಯಿಂದ ಎಲೆಕ್ಟ್ರಾನಿಕ್ ಮತದಾನ ಯಂತ್ರಗಳನ್ನು ಹಾಳುಮಾಡಲು ಪ್ರಯತ್ನಿಸಲಾಗುತ್ತಿದೆ ಎಂಬ ತಮ್ಮ ಹೇಳಿಕೆಯನ್ನು ಬೆಂಬಲಿಸುವ ವೀಡಿಯೊಗಳನ್ನು ಉಲ್ಲೇಖಿಸಿದೆ.
ಒಂದು ದೇಶ ಒಂದು ಚುನಾವಣೆ ಕುರಿತಾಗಿ ಪ್ರಧಾನಿ ಮೋದಿ ಕರೆದಿರುವ ಸಭೆ ಬಗ್ಗೆ ಪ್ರತಿಕ್ರಿಯಿಸಿರುವ ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ " ಈ ಸಭೆ ಎಲೆಕ್ಟ್ರಾನಿಕ್ ಮತದಾನ ಯಂತ್ರ ಅಥವಾ ಇವಿಎಂಗಳ ಬಗ್ಗೆ ಇದ್ದಿದ್ದರೆ ಪ್ರಧಾನಿ ನರೇಂದ್ರ ಮೋದಿ ಅವರು ಕರೆದ ಸರ್ವಪಕ್ಷ ಸಭೆಯಲ್ಲಿ ಭಾಗವಹಿಸಬಹುದಿತ್ತು ಎಂದು ಹೇಳಿದ್ದಾರೆ.
ಇವಿಎಂ ಮತಗಳ ಜೊತೆಗೆ ಶೇ.100 ವಿವಿಪ್ಯಾಟ್ ಹೊಂದಾಣಿಕೆ ಕೋರಿ ತಂತ್ರಜ್ಞರ ತಂಡವೊಂದು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ್ದ ಸರ್ವೋಚ್ಚ ನ್ಯಾಯಾಲಯದ ರಜಾ ಕಾಲದ ಪೀಠ ಅರ್ಜಿಯನ್ನು ವಜಾಗೊಳಿಸಿದೆ.
ಈ ಹಿಂದೆ ಆಡಳಿತ ಪಕ್ಷ ಇವಿಎಂಗಳ ದುರುಪಯೋಗ ಮಾಡಿಕೊಂಡಿದೆ ಎಂದು ವಿರೋಧ ಪಕ್ಷಗಳು ಅನುಮಾನ ವ್ಯಕ್ತಪಡಿಸಿದ್ದವು. ಅದೀಗ ಚುನಾವಣೋತ್ತರ ಸಮೀಕ್ಷೆಯಿಂದ ಸಾಬೀತಾಗಿದೆ ಎಂದು ಇವಿಎಂ ದುರ್ಬಳಕೆ ಬಗ್ಗೆ ಸಿಎಂ ಆರೋಪಿಸಿದ್ದಾರೆ.
ಮತಗಟ್ಟೆ ಅಧಿಕಾರಿ ಮೊಹಮದ್ ಜುಬೈರ್ ಅವರು ಮತದಾರರಿಗೆ ಸಮಾಜವಾದಿ ಪಕ್ಷದ ಸೈಕಲ್ ಚಿಹ್ನೆಗೆ ಮತ ಹಾಕುವಂತೆ ಹೇಳುತ್ತಿದ್ದರು ಎಂದು ಆರೋಪಿಸಿ ಬಿಜೆಪಿ ಕಾರ್ಯಕರ್ತರು ದಾಳಿ ನಡೆಸಿದ್ದಾರೆ.
ಭಾರತದ ಚುನಾವಣಾ ಆಯೋಗವು ಗೌರವಾನ್ವಿತ ಸುಪ್ರೀಂ ಕೋರ್ಟ್ ನಿರ್ದೇಶನಗಳನ್ನು ಕಾರ್ಯಗತಗೊಳಿಸಲು ಮತ್ತು ಕಾರ್ಯರೂಪಕ್ಕೆ ತರಲು ಎಲ್ಲ ಪ್ರಯತ್ನಗಳನ್ನು ನಡೆಸಲಿದೆ ಎಂದು ಚುನಾವಣಾ ಆಯೋಗ ಹೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.