Pushpa 3: ʼಪುಷ್ಪ 1ʼ ಹಿಟ್ ಆದ ಬಳಿಕ ಎರಡನೇ ಪಾರ್ಟನ್ನು ಬಹಳ ಎಚ್ಚರಿಕೆಯಿಂದ ಮಾಡಿದ್ದು, ಕೊನೆಯಲ್ಲಿ ʼಪುಷ್ಪ 3ʼ ಬರಲಿದೆ ಎಂಬ ಸೂಚನೆ ನೀಡಲಾಗಿದೆ. ಮೂರನೇ ಭಾಗದ ದೃಶ್ಯಗಳು ಎರಡನೇ ಭಾಗದಲ್ಲಿ ಬಂದು ಹೋಗುವುದು ಇದಕ್ಕೆ ಸ್ಪಷ್ಟ ಸೂಚನೆ ನೀಡಿದೆ.
Pushpa 2 collection day 3 : ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ ಅಭಿನಯದ 'ಪುಷ್ಪ 2: ದಿ ರೂಲ್' ಈ ವರ್ಷದ ಬಹುನಿರೀಕ್ಷಿತ ಚಲನಚಿತ್ರಗಳಲ್ಲಿ ಒಂದು. ಡಿಸೆಂಬರ್ 5 ರ ಗುರುವಾರದಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಈ ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಧೂಳೆಬ್ಬಿಸುತ್ತಿದೆ.
Pushpa 2 The Rule: ವರದಿಗಳ ಪ್ರಕಾರ, ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಮತ್ತು ಫಹದ್ ಫಾಸಿಲ್ 'ಪುಷ್ಪಾ'ಗೆ ಮೊದಲ ಆಯ್ಕೆಯಾಗಿರಲಿಲ್ಲ. ಹೌದು! ಶಾಕ್ ಎನಿಸಿದರೂ ನಿರ್ದೇಶಕ ಸುಕುಮಾರ್ ಪ್ರಿ-ಪ್ರೊಡಕ್ಷನ್ ಸಮಯದಲ್ಲಿ ಈ ಸೂಪರ್ ಸ್ಟಾರ್ ಅನ್ನು ಮನಸ್ಸಿನಲ್ಲಿಟ್ಟುಕೊಂಡಿರಲಿಲ್ಲ.
Pushpa 2 The Rule: 3D ಪ್ರಿಂಟ್ ಸಿದ್ಧವಾಗಲು ಇನ್ನೂ ಸ್ವಲ್ಪ ಸಮಯ ತೆಗೆದುಕೊಳ್ಳುತ್ತದೆ ಎಂದು ನಿರ್ಮಾಪಕರು ಹೇಳಿದ್ದಾರೆ. ಮಧ್ಯರಾತ್ರಿಯ ಶೋ ವೀಕ್ಷಿಸಲು ಯೋಜಿಸುತ್ತಿದ್ದ ವೀಕ್ಷಕರು ಈಗ 2D ಆವೃತ್ತಿಯಲ್ಲಿಯೇ ಸಿನಿಮಾ ವೀಕ್ಷಿಸಬೇಕಾದ ಅನಿವಾರ್ಯತೆ ಎದುರಾಗಿದೆ.
Allu Arjun Rashmika Mandanna Remuneration: ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ನಟನೆಯ ಬಹು ನಿರೀಕ್ಷಿತ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ, ಇನ್ನೇನು ಕೆಲವೇ ದಿನಗಳಲ್ಲಿ ಈ ಸಿನಿಮಾ ರಿಲೀಸ್ ಆಗಲಿದ್ದು, ಈ ಸಿನಿಮಾದ ಕುರಿತಾದ ಇನ್ಟ್ರೆಸ್ಟಿಂಗ್ ಮಾಹಿತಿಯೊಂದು ಇದೀಗ ಹೊರಬಿದ್ದಿದೆ.
Actor Fahadh Faasil: ಮಲಯಾಳಂ ನಟ ಫಹಾದ್ ಫಾಸಿಲ್ ಇತ್ತೀಚೆಗೆ ಶಾಲೆಯ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದರು. ಈ ಸಮಯದಲ್ಲಿ ಅವರು ಗಂಭೀರ ಕಾಯಿಲೆಯೊಂದಿಗೆ ಹೋರಾಡುತ್ತಿರುವ ಬಗ್ಗೆ ಹೇಳಿದರು.
Thalaiver 170 : ʼಜೈಲರ್ʼ ಸಿನಿಮಾ ನಂತರ ರಜನಿಕಾಂತ್ ನಟನೆಯ ಮುಂಬರುವ ಬಹುನಿರೀಕ್ಷಿತ ಸಿನಿಮಾ ʼತಲೈವರ್ 170ʼ. ಸಧ್ಯ ಈ ಸಿನಿಮಾದ ಫಸ್ಟ್ ಲುಕ್ ಬಿಡುಗಡೆಯಾಗಿದ್ದು, ತಲೈವಾ ರಜನಿ ನ್ಯೂ ಲುಕ್ಗೆ ಫ್ಯಾನ್ಸ್ ಫಿದಾ ಆಗಿದ್ದಾರೆ.
Pushpa 2: The Rule: ಟಾಲಿವುಡ್ ನಿರ್ದೇಶಕ ಸುಕುಮಾರ್ ನಿರ್ದೇಶನದ ‘ಪುಷ್ಪ 2: ದಿ ರೂಲ್’ ಚಿತ್ರ ಮುಂದಿನ ವರ್ಷ ಆಗಸ್ಟ್ 15ರ ಸ್ವಾತಂತ್ರ್ಯ ದಿನಾಚರಣೆ ದಿನ ವಿಶ್ವದಾದ್ಯಂತ ಬಿಡುಗಡೆಯಾಗಲಿದೆ’ ಎಂದು ನಟ ಅಲ್ಲು ಅರ್ಜುನ್ ಕೂಡ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.
ಖ್ಯಾತ ನಟ ಫಹಾದ್ ಫಾಸಿಲ್ ನಟನೆಯ ಧೂಮಂ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡಿದೆ. ಧೂಮಂ ಸಿನಿಮಾ ಅಭಿಮಾನಿಗಳ ನಿರೀಕ್ಷೆ ಮಟ್ಟ ಮುಟ್ಟುವಲ್ಲಿ ವಿಫಲವಾಗಿದೆ. ಬಾಕ್ಸ್ ಆಫೀಸ್ನಲ್ಲಿ ನೆಲಕಚ್ಚಿದೆ. ಈಗ ಒಟಿಟಿಗೆ ಎಂಟ್ರಿ ಕೊಡಲು ಸಿದ್ಧವಾಗಿದೆ ಎಂದು ತಿಳಿದು ಬಂದಿದೆ.
Dhoomam : ಕನ್ನಡದ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲಂಸ್, ‘ಧೂಮಂ’ ಎಂಬ ಚಿತ್ರವನ್ನು ನಿರ್ಮಿಸುವ ಮೂಲಕ ಮಲಯಾಳಂ ಚಿತ್ರರಂಗಕ್ಕೆ ಕಾಲಿಟ್ಟಿರುವುದು ಗೊತ್ತೇ ಇದೆ. ಈ ಚಿತ್ರವು ಜೂನ್ 23ಕ್ಕೆ ಬಿಡುಗಡೆಯಾಗುತ್ತಿದ್ದು, ಇತ್ತೀಚೆಗೆ ಟ್ರೇಲರ್ ಬಿಡುಗಡೆಯಾಗಿದೆ.
Fahadh Faasil Dhoomam : ಫಹಾದ್ ಮತ್ತು ಅಪರ್ಣಾ 'ಧೂಮಂ' ಚಿತ್ರದ ಮೂಲಕ ಮತ್ತೆ ತೆರೆ ಮೇಲೆ ಮೋಡಿ ಮಾಡಲು ರೆಡಿಯಾಗಿದ್ದಾರೆ. ಥ್ರಿಲ್ಲರ್ ಕಥಾಹೊಂದಿರುವ 'ಧೂಮಂ' ಚಿತ್ರವನ್ನು ಯು-ಟರ್ನ್ ಮತ್ತು ಲೂಸಿಯಾ ಖ್ಯಾತಿ ಡೈರೆಕ್ಟರ್ ಪವನ್ ಕುಮಾರ್ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಮಲಯಾಳಂ, ತಮಿಳು, ತೆಲುಗು ಮತ್ತು ಕನ್ನಡ ಸೇರಿದಂತೆ ನಾಲ್ಕು ಭಾಷೆಗಳಲ್ಲಿ ಬಿಡುಗಡೆಯಾಗಲಿದೆ.
ಹೊಂಬಾಳೆ ಫಿಲಂಸ್ನಡಿ ವಿಜಯ್ ಕುಮಾರ್ ಕಿರಗಂದೂರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ ʼಧೂಮಂʼ ಚಿತ್ರದ ಚಿತ್ರೀಕರಣ ಇದೀಗ ಬೆಂಗಳೂರಿನಲ್ಲಿ ನಡೆಯುತ್ತಿದ್ದು, ಶೂಟಿಂಗ್ ಸ್ಪಾಟ್ಗೆ ರಿಷಭ್ ಶೆಟ್ಟಿ, ಸಪ್ತಮಿ ಗೌಡ ಭೇಟಿ ನೀಡಿ ಚಿತ್ರತಂಡದ ಜೊತೆ ಕೆಲ ಕಾಲ ಕಳೆದರು.
ಇಡೀ ವಿಶ್ವವೇ ಕನ್ನಡ ಚಿತ್ರರಂಗದತ್ತ ನೋಡುವಂತಹ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರು ಅವರು ನಿರ್ಮಿಸುತ್ತಿರುವ "ಧೂಮಂ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿದೆ. ಇದು ಹೊಂಬಾಳೆ ಫಿಲಂಸ್ ನಿರ್ಮಾಣದ ಹನ್ನೆರಡನೇ ಚಿತ್ರ. ಮಲೆಯಾಳಂ, ಕನ್ನಡ, ತೆಲುಗು ಹಾಗೂ ತಮಿಳು ಭಾಷೆಗಳಲ್ಲಿ ಈ ಚಿತ್ರ ಬರಲಿದ್ದು, "ಲೂಸಿಯಾ" ಖ್ಯಾತಿಯ ಪವನ್ ಕುಮಾರ್ ನಿರ್ದೇಶನ ಮಾಡಲಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.