500 ರೂಪಾಯಿ ನೋಟಿಗೆ ಸಂಬಂಧಪಟ್ಟಂತೆ ಸಂದೇಶವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಇಲ್ಲಿ 500 ರೂಪಾಯಿಯ ನಕಲಿ ನೋಟಿನ ಬಗ್ಗೆ ಮಾಹಿತಿ ನೀಡಲಾಗಿದೆ. ಈ ನೋಟು ಯಾಕೆ ನಕಲಿ ಎನ್ನುವುದನ್ನು ಕೂಡಾ ವಿಡಿಯೋದಲ್ಲಿ ವಿವರಿಸಲಾಗಿದೆ.
Fake Note Alert: ಕಳೆದ ಒಂದು ವರ್ಷಕ್ಕೆ ಹೋಲಿಸಿದರೆ ಈ ವರ್ಷ ದೇಶದಲ್ಲಿ ನಕಲಿ ನೋಟುಗಳ ಸಂಖ್ಯೆ ಗಣನೀಯ ಏರಿಕೆ ಕಂಡಿದೆ. ಇಂತಹ ಪರಿಸ್ಥಿತಿಯಲ್ಲಿ, ನೀವು ಕೆಲವು ಸಣ್ಣಪುಟ್ಟ ಮುಂಜಾಗ್ರತೆಯನ್ನು ವಹಿಸುವ ಮೂಲಕ ನಕಲಿ ನೋಟುಗಳ ಬಲೆಯಲ್ಲಿ ಸಿಲುಕಿಕೊಳ್ಳುವುದರಿಂದ ಪಾರಾಗಬಹುದು.
ದೇಶದ ಸಾರ್ವಜನಿಕ ವಲಯದ ಅತಿ ದೊಡ್ಡ ಬ್ಯಾಂಕ್ ಆಗಿರುವ ಭಾರತೀಯ ಸ್ಟೇಟ್ ಬ್ಯಾಂಕ್, ದೇಶದ ನಾಗರಿಕರಿಗೆ ಎಚ್ಚರಿಕೆಯ ಸಂದೇಶವೊಂದನ್ನು ಜಾರಿಗೊಳಿಸಿದೆ. ಮಾರುಕಟ್ಟೆಯಲ್ಲಿ ಈ ಕರೆನ್ಸಿಗಳ ಸರ್ಕ್ಯೂಲೇಶನ್ ತುಂಬಾ ವೇಗವಾಗಿ ನಡೆಯುತ್ತಿರುವುದರ ಮೇಲೆ ಬ್ಯಾಂಕ್ ಶಂಕೆ ವ್ಯಕ್ತಪಡಿಸಿರುವುದೇ ಇದಕ್ಕೆ ಕಾರಣ ಎನ್ನಲಾಗಿದೆ.
ದೆಹಲಿಯ ಕಾಶ್ಮೀರ್ ಗೇಟ್ ಮೆಟ್ರೋ ನಿಲ್ದಾಣದಲ್ಲಿ ಸಿಐಎಸ್ಎಫ್ 4,64,000 ರೂ. ಮೌಲ್ಯದ 500 ರೂ. ಮುಖಬೆಲೆಯ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದೆ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ.
ಶನಿವಾರ ಸಂಜೆ 5.30ರ ಸುಮಾರಿಗೆ ಈ ಘಟನೆ ನಡೆದಿದ್ದು, ಕಾಶ್ಮೀರಿ ಗೇಟ್ ಮೆಟ್ರೋ ನಿಲ್ದಾಣದಲ್ಲಿ ಎಂದಿನಂತೆ ಪೊಲೀಸರು ಗಸ್ತು ತಿರುಗುತ್ತಿದ್ದ ಸಂದರ್ಭದಲ್ಲಿ ಸಿಐಎಸ್ಎಫ್ ಕ್ವಿಕ್ ರಿಯಾಕ್ಷನ್ ಟೀಮ್ ಸಬ್-ಇನ್ಸ್ಪೆಕ್ಟರ್ ಬೈರೇಂದರ್ ಕುಮಾರ್ ಅವರು ಗೇಟ್ ನಂ ಬಳಿ 8 ಬಳಿ ನಕಲಿ ನೋಟುಗಳ ಚೀಲ ಬಿದ್ದಿರುವುದು ಪತ್ತೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.