2023-24ನೇ ಸಾಲಿನ “ನನ್ನ ಬೆಳೆ ನನ್ನ ಹಕ್ಕು” ಆಶಯದಂತೆ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆರಂಭವಾಗಿದೆ. ಕಳೆದ ಬಾರಿಯಂತೆ ಈ ಬಾರಿಯೂ ಬೆಳೆ ಸಮೀಕ್ಷೆ ಕಾರ್ಯದಲ್ಲಿ ರೈತರು ಸ್ವತ: ತಮ್ಮ ಜಮೀನಿನಲ್ಲಿ ತಾವು ಬೆಳೆದ ಬೆಳೆಯ ವಿವರಗಳನ್ನು ದಾಖಲಿಸಲು “ಮುಂಗಾರು ರೈತರ ಬೆಳೆ ಸಮೀಕ್ಷೆ 2023” ಆಪ್ ಬಳಸಿಕೊಳ್ಳಬಹುದು ಎಂದು ಸಹಾಯಕ ಕೃಷಿ ನಿರ್ದೇಶಕ ದಯಾನಂದ ಅವರು ತಿಳಿಸಿದ್ದಾರೆ.
ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಅಭಿವೃದ್ಧಿಪಡಿಸುತ್ತಿರುವ ಡಾ. ಶಿವರಾಮ ಕಾರಂತ ಬಡಾವಣೆಗಾಗಿ ಜಮೀನು ನೀಡಿದ್ದ 21ಫಲಾನುಭವಿಗಳಗೆ 60:40 ಅನುಪಾತದಡಿ ಅರ್ಹತಾ ಪ್ರಮಾಣ ಪತ್ರವನ್ನು ನೀಡಲಾಗಿದೆ.
ಹಿಂಗಾರು ಬಿತ್ತನೆ ಹಾಗೂ ಬೆಳೆಗಳ ಸಂರಕ್ಷಣೆಗಾಗಿ ಕೃಷಿ ಇಲಾಖೆಯು ರೈತರಿಗೆ ಮನ್ನೇಚ್ಚರಿಕಾ ಕ್ರಮಗಳನ್ನು ತಿಳಿಸಿದೆ. ಈ ಕುರಿತು ಕೃಷಿ ಇಲಾಖೆಯ ಜಂಟಿನಿರ್ದೇಶಕರು ಪ್ರಕಟಣೆ ನೀಡಿದ್ದು, ಬಿತ್ತನೆ ಸಂದರ್ಭದಲ್ಲಿ ಬೀಜೋಪಚಾರ ಮತ್ತು ಹಿಂಗಾರು ಆರಂಭದಲ್ಲಿ ಬಿತ್ತನೆ ಮಾಡಿದ ಬೆಳೆಗಳಿಗೆ ರೋಗ, ಕೀಟಗಳ ಹಾವಳಿಯನ್ನು ನಿಯಂತ್ರಿಸಲು ಕೃಷಿ ತಜ್ಞರು ನೀಡಿರುವ ನಿರ್ವಹಣಾ ಕ್ರಮಗಳನ್ನು ಪಾಲಿಸಬೇಕೆಂದು ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗೊಬ್ಬರದ ಕೃತಕ ಅಭಾವಸೃಷ್ಟಿಯಾಗಿ ಗೊಬ್ಬರಕ್ಕಾಗಿ ರೈತರು ಪರದಾಡ್ತಿದ್ದಾರೆ. ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ನಕಲಿ ಗೊಬ್ಬರ ಮಾರಿ ರೈತರಿಗೆ ಮೋಸ ಮಾಡ್ತಿರೋದು ಬೆಳಕಿಗೆ ಬಂದಿದೆ.
ರೈತ ಉತ್ಪಾದಕರ ಸಂಸ್ಥೆಗಳಿಗೆ ಏಕರೂಪ ಬ್ರ್ಯಾಂಡ್ ರೂಪಿಸಲು ಆಕರ್ಷಕವಾದ ಬ್ರ್ಯಾಂಡ್ ಹೆಸರು, ವಿಶಿಷ್ಟ ಟ್ಯಾಗ್ಲೈನ್ (ಅಡಿಬರಹ) ಮತ್ತು ಆಕರ್ಷಕವಾದ ಲೋಗೋ ನೀಡಲು ಸ್ಪರ್ಧೆಯನ್ನು ಆಯೋಜಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.