Farooq Abdullah ED Summons: ಸೋಮವಾರ (ಫೆಬ್ರವರಿ 12) ಸಂಜೆ, ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಷನ್ (ಜೆಕೆಸಿಎ) ಯಲ್ಲಿನ ಹಣಕಾಸು ಅಕ್ರಮಗಳಿಗೆ ಸಂಬಂಧಿಸಿದಂತೆ ಇಡಿ ಎನ್’ಸಿ ಅಧ್ಯಕ್ಷರನ್ನು ವಿಚಾರಣೆಗೆ ಕರೆದಿತ್ತು.
Farooq Abdullah: ಜಮ್ಮು ಮತ್ತು ಕಾಶ್ಮೀರ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಯ ಮತದಾನದ ನಡುವೆ ಫಾರೂಕ್ ಅಬ್ದುಲ್ಲಾ ಅವರು ಭಾರತೀಯ ಸೇನೆಯ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಇದು ಮತ್ತೆ ಪುನರಾವರ್ತನೆಯಾಗಬಾರದು ಎಂದು ಎಚ್ಚರಿಕೆ ನೀಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರು ದೇಶದಲ್ಲಿ ಮುಸ್ಲಿಮರನ್ನು ಹೀನಾಯವಾಗಿ ನಡೆಸಿಕೊಳ್ಳುತ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
Farooq Abdullah: ಈ ಕುರಿತು ಮಾತನಾಡಿರುವ ಫಾರುಕ್ ಅಬ್ದುಲ್ಲಾ (Farooq Abdullah), 'ನಮಾಜ್ ದಾರಿಯಲ್ಲಿಯೇ ಇರಿ, ಅಲ್ಲಾಹ್ ತೋರಿಸಿರುವ ಮಾರ್ಗದಲ್ಲಿಯೇ ಸಾಗಿ, ಎಲ್ಲಿಯೂ ತಲೆಬಾಗುವ ಅವಶ್ಯಕತೆ ಇಲ್ಲ' ಎಂದು ಹೇಳಿದ್ದಾರೆ.
ಸರ್ಕಾರದ ಅಭಿಪ್ರಾಯಕ್ಕಿಂತ ಭಿನ್ನವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸುವುದರಿಂದ ಅದು ದೇಶದ್ರೋಹದ ಅಪರಾಧವಾಗುವುದಿಲ್ಲ ಎಂದು ಜಮ್ಮು ಮತ್ತು ಕಾಶ್ಮೀರ ಸಂಸದ ಫಾರೂಕ್ ಅಬ್ದುಲ್ಲಾ ವಿರುದ್ಧದ ಅರ್ಜಿಯನ್ನು ವಜಾಗೊಳಿಸಿ ಎಂದು ಸುಪ್ರೀಂ ಕೋರ್ಟ್ ಹೇಳಿದೆ.
ಪುಸ್ತಕ ಬಿಡುಗಡೆ ಸಮಾರಂಭವೊಂದರಲ್ಲಿ ಮಾತನಾಡಿದ ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫರೋಕ್ ಅಬ್ದುಲ್ಲಾ ಕೊರೊನಾವೈರಸ್ ಸಾಂಕ್ರಾಮಿಕ ತಂದೊಡ್ಡಿರುವ ವಿಚಿತ್ರ ಸನ್ನಿವೇಶಗಳ ಬಗ್ಗೆ ಮಾತನಾಡಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ಕ್ರಿಕೆಟ್ ಅಸೋಸಿಯೇಶನ್ (ಜೆಕೆಸಿಎ) ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಷನಲ್ ಕಾನ್ಫೆರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರ 11.86 ಕೋಟಿ ಮೌಲ್ಯದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯವು ವಶಕ್ಕೆ ತೆಗೆದುಕೊಂಡಿದೆ ಎಂದು ಸಂಸ್ಥೆ ಶನಿವಾರ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರದ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಅವರು ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಮೆಹಬೂಬಾ ಮುಫ್ತಿ, ಸಜ್ಜಾದ್ ಲೋನ್ ಮತ್ತು ಇತರ ಪ್ರಾದೇಶಿಕ ಗುಂಪುಗಳೊಂದಿಗೆ 370 ನೇ ವಿಧಿ ಪುನಃಸ್ಥಾಪನೆ ಮತ್ತು ಕಾಶ್ಮೀರ ಸಮಸ್ಯೆಯನ್ನು ಪರಿಹಾರಕ್ಕಾಗಿ ಮೈತ್ರಿ ಘೋಷಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರಿಂದ ಅನುಮತಿ ಪಡೆದ ಒಂದು ದಿನದ ನಂತರ ಜೆ & ಕೆ ನ್ಯಾಷನಲ್ ಕಾನ್ಫರೆನ್ಸ್ನ 15 ಸದಸ್ಯರ ನಿಯೋಗ ಪಕ್ಷದ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಅವರನ್ನು ಭಾನುವಾರ ಅವರ ನಿವಾಸದಲ್ಲಿ ಭೇಟಿ ಮಾಡಿತು.
ಮೋದಿ ಸರ್ಕಾರವು ಜಮ್ಮು ಮತ್ತು ಕಾಶ್ಮೀರದಲ್ಲಿ ರಾಜಕೀಯ ನಿರ್ವಾತವನ್ನು ಸೃಷ್ಟಿಸುವ ಪ್ರಯತ್ನಗಳನ್ನು ಮಾಡುತ್ತಿದ್ದು, ಫಾರೂಕ್ ಅಬ್ದುಲ್ಲಾ ಅವರಂತಹ ರಾಷ್ಟ್ರೀಯವಾದಿ ನಾಯಕರನ್ನು ಬಂಧಿಸುವ ಮೂಲಕ ಅವರಂತಹ ನಾಯಕರನ್ನು ಮುಗಿಸಲು ಪ್ರಯತ್ನಿಸುತ್ತಿದೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರ ಮೇಲೆ ಸಾರ್ವಜನಿಕ ಸುರಕ್ಷತಾ ಕಾಯ್ದೆ (ಪಿಎಸ್ಎ) ಅಡಿಯಲ್ಲಿ ಆರೋಪ ಹೊರಿಸಲಾಗಿದೆ, ಇದು ಎರಡು ವರ್ಷಗಳವರೆಗೆ ವಿಚಾರಣೆಯಿಲ್ಲದೆ ಬಂಧನ ಅಥವಾ ಬಂಧನಕ್ಕೆ ಅವಕಾಶ ನೀಡುತ್ತದೆ. ವಿಪರ್ಯಾಸವೆಂದರೆ, 1970 ರ ದಶಕದಲ್ಲಿ ಅವರ ತಂದೆ ಮತ್ತು ಮಾಜಿ ಮುಖ್ಯಮಂತ್ರಿ ಶೇಖ್ ಅಬ್ದುಲ್ಲಾ ಅವರು ಜಾರಿಗೆ ತಂದಿದ್ದ ಕಾನೂನಿನಲ್ಲಿ ಅವರನ್ನು ಈಗ ಬಂಧಿಸಲಾಗಿದೆ!
ಫಾರೂಕ್ ಅಬ್ದುಲ್ಲಾ ಅವರನ್ನು ಸಾರ್ವಜನಿಕ ರಕ್ಷಣಾ ಕಾಯ್ದೆ(ಪಿಎಸ್ಎ) ಅಡಿಯಲ್ಲಿ ಬಂಧಿಸುವ ನಿರ್ಧಾರವನ್ನು ಭಾನುವಾರ ರಾತ್ರಿ ತೆಗೆದುಕೊಳ್ಳಲಾಗಿದ್ದು, ಈ ಮೂಲಕ ವಿಚಾರಣೆಯಿಲ್ಲದೆ ಒಬ್ಬ ವ್ಯಕ್ತಿಯನ್ನು 2 ವರ್ಷಗಳವರೆಗೆ ಬಂಧಿಸುವ ಅಧಿಕಾರವನ್ನು ಸರ್ಕಾರ ಪಡೆಯಲಿದೆ.
ವೈ.ಎಸ್.ರಾಜಶೇಖರ ರೆಡ್ಡಿ ನಿಧನದ ಬಳಿಕ ತಮ್ಮ ಬಳಿ ಬಂದಿದ್ದ ಜಗನ್ ಮೋಹನ್ ರೆಡ್ಡಿ, ಕಾಂಗ್ರೆಸ್ ನಿಂದ ಮುಖ್ಯಮಂತ್ರಿ ಮಾಡುವುದಾದರೆ 1500 ಕೋಟಿ ರೂಪಾಯಿ ನೀಡುವುದಾಗಿ ಹೇಳಿದ್ದರು ಎಂದು ಫಾರೂಕ್ ಅಬ್ದುಲ್ಲಾ ಆರೋಪಿಸಿದ್ದಾರೆ.
ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರ ಹಿಡಿಯಬೇಕೆನ್ನುವ ಒತ್ತಾಸೆ ಹಿನ್ನಲೆಯಲ್ಲಿ ಬಾಲಾಕೋಟದಲ್ಲಿರುವ ಜೈಶ್-ಎ-ಮೊಹಮ್ಮದ್ ಶಿಬಿರದ ಮೇಲೆ ವಾಯುಸೇನಾ ದಾಳಿ ಕೈಗೊಳ್ಳಲಾಗಿದೆ ಎಂದು ನ್ಯಾಷನಲ್ ಕಾನ್ಫರೆನ್ಸ್ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಹೇಳಿಕೆ ನೀಡಿದ್ದಾರೆ.
"ಈ ಸರ್ಜಿಕಲ್ ಸ್ಟ್ರೈಕ್ ದಾಳಿಯನ್ನು ಸಂಪೂರ್ಣ ಚುನಾವಣಾ ಉದ್ದೇಶಕ್ಕಾಗಿ ಮಾತ್ರ ಕೈಗೊಳ್ಳಲಾಗಿದೆ. ಕೋಟ್ಯಾಂತರ ರೂಪಾಯಿ ಬೆಲೆ ಬಾಳುವ ವಿಮಾನವನ್ನು ನಾವು ಕಳೆದುಕೊಂಡಿದ್ದೇವೆ. ಅದೃಷ್ಟವಶಾತ್ ಪೈಲೆಟ್ ಹಾಗೂ ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್ ಉಳಿದು ಗೌರವ ಪೂರಕವಾಗಿ ಪಾಕ್ ನಿಂದ ಮರಳಿದ್ದಾನೆ" ಎಂದು ಫಾರುಕ್ ಅಬ್ದುಲ್ಲಾ ತಿಳಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.