ತುರ್ತು ಸಂದರ್ಭದಲ್ಲಿ ಸಹಾಯಕ್ಕಾಗಿ ಸಹಾಯವಾಣಿ ಸ್ಥಾಪನೆ; ಜಿಲ್ಲಾಧಿಕಾರಿಗಳ ಕಚೇರಿ 08192-234034, 1077, ಎಸ್ಡಿಆರ್ಎಫ್ ಘಟಕ, ದೇವರಬೆಳೆಕೆರೆ 7411308591, ದಾವಣಗೆರೆ ಅಗ್ನಿಶಾಮಕ ಇಲಾಖೆ 08192-258101, 112, ದಾವಣಗೆರೆ ಮಹಾನಗರ ಪಾಲಿಕೆ 08192-234444, 8277234444, ದಾವಣಗೆರೆ ತಾ; ಕಚೇರಿ 9036396101, ಹರಿಹರ 08192-272959, ಜಗಳೂರು 08196-227242, ಹೊನ್ನಾಳಿ 08188-252108, ನ್ಯಾಮತಿ 8073951245, ಚನ್ನಗಿರಿ 7892481962 ದೂರವಾಣಿ, ಮೊಬೈಲ್ ಸಂಖ್ಯೆಗೆ ಕರೆ ಮಾಡಲು ಕೋರಲಾಗಿದೆ.
ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಆರ್ದ್ರ ಹವಾಮಾನವು ಮುಂದುವರೆಯುವ ಸಾದ್ಯತೆಯಿದ್ದು, ಜುಲೈ 27ರವರೆಗೆ ವ್ಯಾಪಕವಾಗಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರಿ ಮತ್ತು ಅತಿ ಭಾರಿ ಮಳೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಉತ್ತರ ಕರ್ನಾಟಕದ ಈಗ ಭೀಕರ ಪ್ರವಾಹ ಪರಿಸ್ಥಿತಿ ಹಿನ್ನಲೆಯಲ್ಲಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಲು ಬೆಳಗಾವಿಗೆ ಆಗಮಿಸಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಕೇಂದ್ರ ಸರ್ಕಾರ ರಾಜ್ಯಕ್ಕೆ ತಾರತಮ್ಯ ಮಾಡದೆ ಹೆಚ್ಚಿನ ನೆರವು ನೀಡಬೇಕೆಂದು ವಿನಂತಿಸಿಕೊಂಡರು.
ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಗುರುವಾರ ಕೆಲವು ರಾಜ್ಯಗಳಲ್ಲಿನ ಪ್ರವಾಹ ಪರಿಸ್ಥಿತಿ ಬಗ್ಗೆ ಕಳವಳ ವ್ಯಕ್ತಪಡಿಸಿದ್ದು, ಸಂತ್ರಸ್ತರಿಗೆ ಸಹಾಯ ಮಾಡುವಂತೆ ತಮ್ಮ ಪಕ್ಷದ ಕಾರ್ಯಕರ್ತರನ್ನು ಒತ್ತಾಯಿಸಿದರು.
ರಾಜ್ಯದ 10 ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರೆದಿದ್ದು, ಕರಾವಳಿ ಮತ್ತು ಮಲ್ನಾಡ್ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಪ್ರವಾಹದಿಂದಾಗಿ ಈಗ ಶಿವಮೊಗ್ಗ, ಬೆಳಗಾವಿ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ ಎನ್ನಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.