ಮಹಾರಾಷ್ಟ್ರ ಪಶ್ಚಿಮಘಟ್ಟ ಪ್ರದೇಶ ಧಾಕಾಕಾರ ಮಳೆ ಹಿನ್ನೆಲೆ ಘಟಪ್ರಭಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರ್ತಿದೆ. ಚಿಕ್ಕೋಡಿ ಉಪವಿಭಾಗದಲ್ಲಿ 4 ಸೇತುವೆಗಳು ಮುಳುಗಡೆಯಾಗಿದೆ. ಮತ್ತೊಂದೆಡೆ ಹಿಡಕಲ್ ಜಲಾಶಯದಿಂದ 20ಸಾವಿರ ಕ್ಯೂಸೆಕ್ ನೀರನ್ನು ಹೊರಕ್ಕೆ ಬಿಡಲಾಗುತ್ತಿದೆ. ಘಟಪ್ರಭಾ ನದಿ ತೀರದ ಜನರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚನೆ ಕೊಟ್ಟಿದೆ.
ಡೆಮಾಕ್ರಸಿ ಪಾರ್ಟಿ (ಎಲ್ಡಿಪಿ) ಅಧ್ಯಕ್ಷ ಖೇಮ್ ವಿಸಾನಾ ಮಾಡಿದ ಪೋಸ್ಟ್ ವೈರಲ್ ಆಗಿದೆ. ಅವರ ಹೆಚ್ಚಿನ ಸಂಖ್ಯೆಯ ಬೆಂಬಲಿಗರು ಕುಲೆನ್ ಪರ್ವತದಲ್ಲಿರುವ ಅವರ ಫಾರ್ಮ್ ಹೌಸ್ನಲ್ಲಿ ಸೇರಲು ಪ್ರಾರಂಭಿಸಿದರು.
ಯಳಂದೂರಿನಲ್ಲಿರುವ ವಲಯ ಅರಣ್ಯ ಇಲಾಖೆ, ಚೆಸ್ಕಾಂ ಇಲಾಖೆ, ಪದವಿಪೂರ್ವ ಕಾಲೇಜು, ಮಾರಮ್ಮನ ದೇವಾಲಯ, ಪೊಲೀಸ್ ವಸತಿ ಗೃಹ, ಸಮಾಜ ಕಲ್ಯಾಣ ಇಲಾಖೆ, ಪ್ರವಾಸಿ ಮಂದಿರ ಪ್ರವಾಸಿ ಮಂದಿರದ ವಸತಿಗೃಹ ಸಂಪೂರ್ಣ ಜಲಾವೃತಗೊಂಡಿದ್ದು ಯಾರೂ ಕಾಲಿಡಲಾಗದ ಸ್ಥಿತಿ ಇದೆ.
Weather Update: ಮುಂದಿನ 4 ದಿನಗಳ ಕಾಲ ದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇಂದಿನಿಂದ ಸತತ ನಾಲ್ಕು ದಿನಗಳ ಕಾಲ ದೇಶದ ಹಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಭವಿಷ್ಯ ನುಡಿದಿದೆ.
ರಾಜ್ಯದೆಲ್ಲೆಡೆ ಮತ್ತೆ ಮಳೆ ಅಬ್ಬರಿಸಿದೆ. ಹಾವೇರಿ ಗ್ರಾಮೀಣ ಭಾಗದ ಜನರು ಮಳೆಯಿಂದ ನಲುಗಿ ಹೋಗಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಿಂದ ಹೊರಬರದೇ ಜನ ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ. ಅಧಿಕಾರಿಗಳ ವಿರುದ್ದ ಜನತೆಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಬಳ್ಳಾಪುರದಲ್ಲಿ ಸುರಿದ ಭಾರೀ ಮಳೆಯ ಪರಿಣಾಮ ಮಳೆಯ ನೀರು ಕೋಳಿ ಫಾರಂಗೆ ನುಗ್ಗಿದೆ. ಈ ಹಿನ್ನೆಲೆಯಲ್ಲಿ ಫಾರಂನಲ್ಲಿದ್ದ 15 ಸಾವಿರ ಕೋಳಿಗಳು ನೀರಿನಲ್ಲಿ ಕೊಚ್ಚಿ ಹೋಗಿ ಮೃತಪಟ್ಟಿವೆ.
ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ಉಂಟಾದ ಪ್ರವಾಹವು ಹಲವು ಪ್ರದೇಶಗಳಲ್ಲಿ ಹಾನಿಯನ್ನುಂಟುಮಾಡಿದೆ. ರಾಜ್ಯದಲ್ಲಿ ಮಳೆಯಿಂದಾಗಿ ಈವರೆಗೆ 22 ಮಂದಿ ಸಾವನ್ನಪ್ಪಿದ್ದು, ಹಲವರು ನಾಪತ್ತೆಯಾಗಿದ್ದಾರೆ.
ಬೆಳಗಾವಿ ಜಿಲ್ಲೆಯಲ್ಲಿ ವರುಣನ ಆರ್ಭಟ ಮುಂದುವರೆದಿದೆ. ಘಟಪ್ರಭಾ ನದಿಯಲ್ಲಿ ನೀರಿನ ಹರಿವು ಹೆಚ್ಚಿದೆ. ಹಿರಣ್ಯಕೇಶಿ ನದಿ ಮೈದುಂವಿ ಹರಿಯುತ್ತಿದೆ. ಗೋಕಾಕ್, ಮೂಡಲಗಿ ತಾಲೂಕಿನ 5 ಸೇತುವೆಗಳು ಜಲಾವೃತವಾಗಿವೆ.
ಕೃಷ್ಣಾ ನದಿಯ ಅಬ್ಬರಕ್ಕೆ ಯಾದಗಿರಿ ಜನ ತತ್ತರಿಸಿದ್ದಾರೆ. ಬಸವಸಾಗರ ಜಲಾಶಯದಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. 1 ಲಕ್ಷ 21 ಸಾವಿರ ಕ್ಯೂಸೆಕ್ ನೀರು ನದಿಗೆ ಬಿಡುಗಡೆ ಮಾಡಲಾಗಿದ್ದು, ನದಿ ತೀರದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಕಬಿನಿಯಿಂದ ಕಪಿಲಾ ನದಿಗೆ 37 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಇದರಿಂದಾಗಿ ಕಪಿಲಾ ನದಿ ಪಾತ್ರದಲ್ಲಿ ಪ್ರವಾಹ ಭೀತಿ ಎದುರಾಗಿದೆ. ನಂಜನಗೂಡಿನ ಶ್ರೀಕಂಠೇಶ್ವರ ದೇಗುಲದ ನದಿಯ ಸ್ನಾನಘಟ್ಟ ಮುಳುಗಡೆಯಾಗಿದೆ. ನದಿ ಮಧ್ಯದಲ್ಲಿರುವ ಕಾಲು ಮಂಟಪ ಮುಳುಗಡೆಯಾಗಿದೆ. ಪರಶುರಾಮ ದೇಗುಲಕ್ಕೂ ಜಲ ದಿಗ್ಭಂದನವಾಗಿದೆ.
ನಿರಂತರ ಮಳೆಯಿಂದಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಇನ್ನೊಂದೆಡೆ ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಶ್ರೀರಂಗಪಟ್ಟಣದ ಮಹದೇಪುರ ಗ್ರಾಮದ ಸ್ಮಶಾನದ ರಸ್ತೆ ಕಾವೇರಿ ಪ್ರವಾಹದಿಂದ ಬಂದ್ ಆಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.