ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ ಸೇವೆಗಳಿಗೆ ಸೇರಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ 2023-24 ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ದತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟಿ ಸಂಸ್ಥೆ (ರಿ), ಹಳಿಯಾಳದ ವತಿಯಿಂದ ಗ್ರಾಮೀಣ ಭಾಗದ ನಿರುದ್ಯೋಗಿ ಯುವಕರಿಗೆ 13 ದಿನಗಳ ಸಿಸಿ ಟವಿ ಇನ್ಸ್ಟಾಲೆಷನ್, ಸರ್ವಿಸಿಂಗ್ ಹಾಗೂ 30 ದಿನಗಳ ಫೋಟೋಗ್ರಾಫಿ, ವಿಡಿಯೋಗ್ರಾಫಿ ಮತ್ತು ಮಹಿಳೆಯರಿಗಾಗಿ ಉಚಿತ ಹೊಲಿಗೆ ತರಬೇತಿಯ ನೋಂದಣಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯಿಂದ ಪರಿಶೀಷ್ಟ ಜಾತಿ, ಪರಿಶಿಷ್ಟ ಪಂಗಡಗಳ 300 ಮಹಿಳಾ ಪದವೀಧರರಿಗೆ ಉದ್ಯಮಗಳನ್ನು ಸ್ಥಾಪಿಸಲು ಪೂರಕವಾಗುವಂತೆ ಪ್ರತಿಷ್ಠಿತ ಐ.ಐ.ಎಂ ಬೆಂಗಳೂರಿನಲ್ಲಿ ಉಚಿತ ಉದ್ಯಮಶೀಲತಾ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
ತೋಟಗಾರಿಕೆ ಇಲಾಖೆಯಿಂದ 2022-23 ನೇ ಸಾಲಿಗೆ ಕೊಪ್ಪಳ ಜಿಲ್ಲೆಯ ಆಸಕ್ತ ಅರ್ಹ ರೈತ ಮಕ್ಕಳಿಗೆ ಕೊಪ್ಪಳ ತಾಲೂಕಿನ ಮುನಿರಾಬಾದಿನ ತೋಟಗಾರಿಕೆ ತರಬೇತಿ ಕೇಂದ್ರದಲ್ಲಿ 10 ತಿಂಗಳ ತೋಟಗಾರಿಕೆ ತರಬೇತಿಯನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಕೆನರಾ ಬ್ಯಾಂಕ್ ದೇಶಪಾಂಡೆ ಆರ್ಸೆಟ್ ಸಂಸ್ಥೆ, ಉತ್ತರ ಕನ್ನಡ ಜಿಲ್ಲೆಯ ಹಳಿಯಾಳದಲ್ಲಿ 18 ರಿಂದ 45 ವಯಸ್ಸಿನ ನಿರುದ್ಯೋಗಿ ಯುವಕ ಹಾಗೂ ಯುವತಿಯರಿಗಾಗಿ 30 ದಿನಗಳ ಫೋಟೋಗ್ರಾಪಿ ಮತ್ತು ವಿಡಿಯೋಗ್ರಾಫಿ ಟ್ರೈನಿಂಗ್ ಉಚಿತ ತರಬೇತಿಗಳನ್ನು ಜನವರಿ ತಿಂಗಳಲ್ಲಿ ಪ್ರಾರಂಭಿಸಲಾಗುವುದು.
ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ (CBRSETI) ಮಣಿಪಾಲ ಇವರ ವತಿಯಿಂದ ನಿರುದ್ಯೋಗಿ ಸ್ವಉದ್ಯೋಗಾಕಾಂಕ್ಷಿಗಳಿಗಾಗಿ ದಿ: 27/12/2021 ರಿಂದ 30 ದಿನಗಳ “ಬ್ಯೂಟಿಪಾರ್ಲರ್ ಮ್ಯಾನೇಜ್ಮೆಂಟ್” ಮತ್ತು ದಿ: 30/12/2021 ರಿಂದ 30 ದಿನಗಳ “ಮಹಿಳೆಯರ ಟೈಲರಿಂಗ್” ಕುರಿತು ಉಚಿತ ತರಬೇತಿಯನ್ನು ಮಣಿಪಾಲದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ.
ಪ್ರಸಕ್ತ ಸಾಲಿನಲ್ಲಿ ಹರಿಹರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ (ಸಿಎಂಕೆಕೆವೈ), ವಿಶೇಷ ಘಟಕ ಯೋಜನೆ ಮತ್ತು ಗಿರಿಜನ ಉಪಯೋಜನೆ (ಎಸ್ಸಿಪಿ-ಟಿಎಸ್ಪಿ) ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ-ಯುವತಿಯರಿಗೆ ಉಚಿತ ಅಲ್ಪಾವಧಿ ತರಬೇತಿ ನೀಡಲಾಗುತ್ತಿದ್ದು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ.
2020-21ನೇ ಸಾಲಿನಲ್ಲಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ಹರಿಹರ ಇಲ್ಲಿ ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿಯಲ್ಲಿ ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ ಯೋಜನೆ, ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪಯೋಜನೆ ಮೂಲಕ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ, ಯುವತಿಯರಿಗಾಗಿ ಉದ್ಯೋಗಾವಕಾಶ ಕಲಿಸಲು ಎಸ್.ಎಸ್.ಎಲ್.ಸಿ , ಐಟಿಐ, ಡಿಪ್ಲೋಮಾ ಹಾಗೂ ಬಿ.ಇ ಪಾಸ್ ಆಗಿರುವ ಅಭ್ಯರ್ಥಿಗಳಿಗೆ 2 ತಿಂಗಳ ಅವಧಿಯ ಈ ಕೆಳಕಂಡ ಕಾರ್ಯಕ್ರಮಗಳಿಗೆ ಉಚಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.