ನಮ್ಮ ಸರ್ಕಾರದಲ್ಲಿ ಸಾಹಿತಿಗಳು ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಆತಂಕ ಪಡಬೇಕಾಗಿಲ್ಲ. ವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ನಾವು ರಕ್ಷಣೆ ಮಾಡುತ್ತೇವೆ. ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಯಾರೂ ಹೆದರಬೇಕಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.ಅವರು ಕರ್ನಾಟಕ ರಾಜ್ಯ ಬರಹಗಾರರು ಹಾಗೂ ಪ್ರಕಾಶಕರ ಸಂಘದ 20ನೇ ವಾರ್ಷಿಕೋತ್ಸವ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ದೇಶದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅಪಾಯದಲ್ಲಿದೆ, ನೇರವಾಗಿ, ಧೈರ್ಯದಿಂದ ಸತ್ಯ ಹೇಳುವುದು ಕಷ್ಟವಾಗಿದೆ.ಸಂವಿಧಾನ ನೀಡಿದ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸಿದರೆ ಅವರಿಗೆ ಕಹಿಯಾಗಿ ಕಾಣುತ್ತದೆ.ಇದಕ್ಕೆ ಕಾರಣ ಅವರ ವಕ್ರಕಣ್ಣುಗಳು. ಇದಕ್ಕೆ ಹೆದರದೆ ಪ್ರತಿಯೊಬ್ಬ ಪ್ರಜೆಯೂ ಸತ್ಯವನ್ನು ಧೈರ್ಯದಿಂದ ಹೇಳಲು ಮುಂದಾಗಬೇಕು ಎಂದು ಪ್ರತಿಪಕ್ಷದ ನಾಯಕ ಸಿದ್ಧರಾಮಯ್ಯ ಅಭಿಪ್ರಾಯಪಟ್ಟಿದ್ದಾರೆ.
Freedom of expression: ಇತರರ ನಂಬಿಕೆ ಅಥವಾ ಭಾವನೆಗಳಿಗೆ ಧಕ್ಕೆಯಾಗದಂತೆ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಜವಾಬ್ದಾರಿಯುತವಾಗಿ ಬಳಸುವ ಅಗತ್ಯವನ್ನು ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಶನಿವಾರ ಒತ್ತಿ ಹೇಳಿದರು.
ಪ್ರಜಾಪ್ರಭುತ್ವದ ಪ್ರಮುಖ ವಿಷಯವೆಂದರೆ ನಾಗರಿಕರ ಸ್ವಾತಂತ್ರ್ಯ ಮತ್ತು ಅಭಿವ್ಯಕ್ತಿ ಸ್ವಾತಂತ್ರ್ಯ,ಇದು ಉತ್ತಮ ಪೋಲಿಸಿಗೆ ನೇರವಾಗಿ ಸಂಬಂಧಿಸಿದೆ ಮತ್ತು ಇದನ್ನು ನಿರಂತರವಾಗಿ ಸುಧಾರಿಸಬೇಕಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.