ಕಳೆದ ವರ್ಷ ಮುಸಲ್ಮಾನ ಸಮಾಜ ಬಾಂಧವರು ಹಂಚಿದ ಸಿಹಿ ತಿಂಡಿ ತಿಂದು ನಮ್ಮ ಕೆಲವು ಮಕ್ಕಳು ಅಸ್ವಸ್ಥರಾಗಿದ್ದಾರೆ. ಹೀಗಾಗಿ ಈ ಬಾರಿ ಗಣೇಶೋತ್ಸವ ಮೆರವಣಿಗೆಯಲ್ಲಿ ಸಿಹಿ ತಿಂಡಿ, ತಂಪು ಪಾನೀಯ ಹಂಚಬೇಡಿ ಎಂದು ಶ್ರೀ ಸಿದ್ಧಿವಿನಾಯಕ ವಿಶ್ವಸ್ಥ ಮಂಡಳಿಯಿಂದ ಬೋಳಂತೂರು ಮಸೀದಿಗೆ ಪತ್ರ ಬರೆದು ಮನವಿ ಮಾಡಲಾಗಿದೆ.
Idgah Maidan: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಹುಬ್ಬಳ್ಳಿಯ ಕಚೇರಿ ಎದುರು ಪ್ರತಿಭಟನೆಗೆ ನಿರ್ಧಾರ ಮಾಡಿದ್ದು ಶ್ರೀ ಗಜಾನನ ಮಹಾಮಂಡಳದ ಅಧ್ಯಕ್ಷ ಡಿ.ಗೋವಿಂದರಾವ್ ನೇತೃತ್ವ ವಹಿಸಲಿದ್ದಾರೆ.
ಗುರುಪೂರ್ಣಿಮೆಯಂದು ಶಿರಡಿ ಸಾಯಿ ಬಾಬಾರನ್ನು ತೆಂಗಿನ ಕಾಯಿ, ಬಾದಾಮಿ, ಖರ್ಜೂರ, ಹಣ್ಣುಗಳಿಂದ ಸಿಂಗರಿಸಿ ಗಮನ ಸೆಳೆದಿದ್ದ ಟ್ರಸ್ಟ್, ಈ ಬಾರಿ ಗಣೇಶೋತ್ಸಕ್ಕೆ ಲಕ್ಷ್ಮಿ ಕಟಾಕ್ಷದ ಸ್ಪರ್ಷ ನೀಡುತ್ತಿದೆ.
ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಶ್ರೀರಾಮನಗರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಮುಖಂಡರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿದ್ದು ಭಾವೈಕ್ಯ ಮರೆದಿದ್ದಾರೆ.. ಸತತ 13 ವರ್ಷಗಳಿಂದ ಈ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಗ್ಯಾರೇಜ್ ಮಾಲೀಕರು ಸಾರ್ವಜನಿಕವಾಗಿ ಗಣೇಶ ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸುತ್ತಿದ್ದಾರೆ..
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ನೀಡೋ ವಿಚಾರ ಅಧಿಕಾರಿಗಳೊಂದಿಗೆ ಸಚಿವ ಆರ್. ಅಶೋಕ್ ಮಹತ್ವದ ಸಭೆ ನಡೆಸಲಿದ್ದಾರೆ. ಚಾಮರಾಜಪೇಟೆ ಮೈದಾನದಲ್ಲಿ ಗಣೇಶೋತ್ಸವಕ್ಕೆ ಮನವಿ ಮಾಡಿ 5 ಅರ್ಜಿಗಳು ಬಂದಿದ್ದು, ಸಭೆಯಲ್ಲಿ ತೀರ್ಮಾನ ಕೈಗೊಳ್ಳೋದಾಗಿ ಅಶೋಕ್ ಹೇಳಿದ್ದಾರೆ.
ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗಾಗಿ ಪಟ್ಟು ಹಿಡಿಯಲಾಗಿದೆ. ಕಳೆದ ಒಂದು ತಿಂಗಳಿಂದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆ ಮಾಡಲು ಅವಕಾಶ ನೀಡುವಂತೆ ಹೋರಾಟ ಮಾಡುತ್ತ ಬರಲಾಗಿದೆ. ಈ ಕುರಿತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯಲ್ಲಿ ನಡೆದ ಮಾಸಿಕ ಸಾಮಾನ್ಯ ಸಭೆಯಲ್ಲಿ ಬಹಳ ದೀರ್ಘವಾಗಿ ಚರ್ಚೆ ಮಾಡಲಾಯಿತು.
Zee Kannada Ganeshotsava : ಗೌರಿ ಗಣೇಶ ಹಬ್ಬದ ಈ ಸುಸಂಧರ್ಭದಲ್ಲಿ ಕೊಟ್ಟೂರಿನ ವಿದ್ಯಾನಗರದಲ್ಲಿರುವ ತುಂಗಭದ್ರಾ ಶಿಕ್ಷಣ ಸಂಸ್ಥೆಯ ಸಿಪಿಇಡಿ ಕಾಲೇಜು ಮೈದಾನಲ್ಲಿ ಇದೇ ಆಗಸ್ಟ್ 25 ಗುರುವಾರದಂದು ಸಂಜೆ 5.30 ಕ್ಕೆ " ಜೀ ಕನ್ನಡ ಗಣೇಶೋತ್ಸವ " ಕಾರ್ಯಕ್ರಮವನ್ನು ಆಯೋಜಿಸಿದೆ.
ಗಣೇಶೋತ್ಸವದಲ್ಲಿ ಡಿಜೆ ಬಳಕೆಗೆ ಸುಪ್ರೀಂಕೋರ್ಟ್ ನಿಷೇಧ ವಿಚಾರ ಪ್ರತಿಕ್ರಿಯೆ ನೀಡಿದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸುಪ್ರೀಂ ಆದೇಶ ಮಸೀದಿ ಮೇಲಿನ ಮೈಕ್ಗೂ ಇದೆ, ಗಣಪತಿಗೂ ಇದೆ. ಮೈಕ್ ಯಾವಾಗ ಬಂದ್ ಆಗುತ್ತೋ ಅಂದು ಡಿಜೆಯೂ ಬಂದ್ ಆಗುತ್ತೆ ಎಂದಿದ್ದಾರೆ.
ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ನಡೆದ ಕೆಲವು ಘಟನೆಗಳು ರಾಜ್ಯ ಪೊಲೀಸರ ನಿದ್ದೆಗೆಡಿಸಿದೆ. ಈ ನಿಟ್ಟಿನಲ್ಲಿ ಮುಂದೆ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಭಾರೀ ಮುನ್ನೆಚ್ಚರಿಕೆ ವಹಿಸಲಾಗುತ್ತಿದೆ.
ಗಣೇಶ ಚತುರ್ಥಿಗೆ ಬಿಬಿಎಂಪಿಯಿಂದ ಹಲವು ನಿಯಮಗಳಿವೆ. ಕಳೆದ ಬಾರಿಯ ನಿಯಮಗಳನ್ನೇ ಈ ಬಾರಿಯೂ ಮುಂದುವರೆಸುವ ಬಗ್ಗೆ ಚರ್ಚೆ ಮಾಡ್ತೀವಿ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.