ಭಾರತದ ಚುನಾವಣಾ ಇತಿಹಾಸದಲ್ಲಿ ಮೊದಲ ಬಾರಿಗೆ, ಜಮ್ಮು ಮತ್ತು ಕಾಶ್ಮೀರದ ಅನಂತ್ನಾಗ್ ಲೋಕಸಭಾ ಕ್ಷೇತ್ರದ ಮತದಾನ ಮೂರು ಹಂತಗಳಲ್ಲಿ ನಡೆಯಲಿದೆ ಎಂದು ಚುನಾವಣಾ ಆಯೋಗ ಭಾನುವಾರ ಪ್ರಕಟಿಸಿದೆ.
543 ಲೋಕಸಭಾ ಕ್ಷೇತ್ರಗಳಿಗೆ ಏಪ್ರಿಲ್ 11, ಎಪ್ರಿಲ್ 18, ಏಪ್ರಿಲ್ 23, ಎಪ್ರಿಲ್ 29, ಮೇ 6, ಮೇ 12 ಮತ್ತು ಮೇ 19 ರಂದು ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ. ಇದರಲ್ಲಿ 90 ಕೋಟಿ ಮತದಾರರು ಮತ ಚಲಾಯಿಸುವ ಅರ್ಹತೆ ಹೊಂದಿದ್ದಾರೆ.
2019 ರ ಲೋಕಸಭಾ ಚುನಾವಣೆಗೆ ಸಕಲ ಸಿದ್ಧತೆ ಮಾಡಿಕೊಂಡಿರುವ ಕೇಂದ್ರ ಚುನಾವಣಾ ಆಯೋಗ, ಏಳು ಹಂತಗಳಲ್ಲಿ ಚುನಾವಣೆ ನಡೆಸಲು ಮುಂದಾಗಿದೆ. ಈ ಬಗ್ಗೆ ಕೇಂದ್ರ ಚುನಾವಣಾ ಆಯೋಗದ ಮುಖ್ಯಸ್ಥ ಸುನೀಲ್ ಅರೋರಾ ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಗುಜರಾತ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರಾಜ್ಯವಾಗಿದ್ದು, ಕಳೆದ ವಿಧಾನಸಭಾ ಚುನಾವಣಾ ವೇಳೆ ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಗುಜರಾತ್ ಅನ್ನು ಕೇಂದ್ರೀಕರಿಸುತ್ತಿದೆ.
28 ಲೋಕಸಭೆ ಕ್ಷೇತ್ರಗಳಲ್ಲಿ 12 ಸ್ಥಾನಕ್ಕಾಗಿ ಜೆಡಿಎಸ್ ಪಟ್ಟು ಹಿಡಿದಿದ್ದು, ಕಾಂಗ್ರೆಸ್ ಸಂಸದರಿರುವ 4 ಕ್ಷೇತ್ರಗಳನ್ನು ಜೆಡಿಎಸ್ ತನಗೆ ನೀಡುವಂತೆ ಒತ್ತಾಯಿಸುತ್ತಿದೆ ಎಂದು ಮೂಲಗಳು ತಿಳಿಸಿವೆ.
"ಆಯುಷ್ಮಾನ್ ಭಾರತ ಯೋಜನೆ" ಫಲಾನುಭವಿಗಳೊಂದಿಗೆ ಸಂವಾದ, ಬಿಪಿಸಿಎಲ್ ಡಿಪೋಗೆ ಭೂಮಿ ಪೂಜೆ ಸೇರಿದಂತೆ ವಿವಿಧ ಕಾಮಗಾರಿಗಳಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.
ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಅಯೋಧೆಯಲ್ಲಿ ಅದೇ ಸ್ಥಳದಲ್ಲಿ ಆದಷ್ಟು ಬೇಗ ರಾಮಮಂದಿರ ನಿರ್ಮಾಣವಾಗಲಿದೆ ಎಂದು ಕರ್ನಾಟಕದ ಜನತೆಗೆ ಹೇಳಬಯಸುವೆ ಎಂದರು.
2019 ರಲ್ಲಿ ನಡೆಯಲಿರುವ ಲೋಕಸಭಾ ಚುನಾವಣೆಯಲ್ಲಿ ವೋಟರ್ ವೇರಿಯಬಲ್ ಪೇಪರ್ ಆಡಿಟ್ ಟ್ರಯಲ್ (VVPAT) ಘಟಕಗಳ ಕೊರತೆಯನ್ನು ತಪ್ಪಿಸಲು, ಕೇಂದ್ರ ಸರಕಾರವು ಚುನಾವಣಾ ಆಯೋಗವನ್ನು VVPAT ಯಂತ್ರಗಳನ್ನು ಖಾಸಗಿ ಕಂಪೆನಿಯಿಂದ ಖರೀದಿಸಲು ಕೇಳಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.