ರಾಜ್ಯದ ಎಲ್ಲ ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ʼನಮ್ಮ ಶಾಲೆ ನಮ್ಮ ಜವಾಬ್ದಾರಿʼ ಎಂಬ ಯೋಜನೆಯನ್ನು ಜಾರಿಗೊಳಿಸಿದ್ದೇವೆ. ಉದ್ಯೋಗಿಗಳು, ಉದ್ಯಮಿಗಳು, ಪಾಲಕರು ಮತ್ತು ಹಳೆ ವಿದ್ಯಾರ್ಥಿಗಳು ಶಾಲೆಗೆ ದೇಣಿಗೆ ನೀಡಿ ಪ್ರಗತಿಯ ಜವಾಬ್ದಾರಿ ವಹಿಸಿಕೊಳ್ಳಬೇಕು ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಮನವಿ ಮಾಡಿದ್ದಾರೆ.
Government of India INSPIRE Awards: ಕೆಲವು ವರ್ಷಗಳ ಹಿಂದೆ, ವಿದ್ಯಾರ್ಥಿಗಳಿಗೆ ಹಣ ಗಳಿಕೆ ಮಾಡುವ ಮಾರ್ಗಗಲು ಬಹಳ ಕಡಿಮೆ ಇದ್ದವು. ಆದರೆ ಈಗ ವಿದ್ಯಾರ್ಥಿಗಳು ಹಣ ಸಂಪಾದಿಸುವ ಅವಕಾಶಗಳಿಗೇನು ಕಡಿಮೆ ಇಲ್ಲ. ಕೇಂದ್ರ ಸರ್ಕಾರ ಹಣ ಗಳಿಸಲು ಹಲವು ಅವಕಾಶಳನ್ನು ನೀಡುತ್ತಿದೆ. ಅಂತಹದ್ದೇ ಒಂದು ಅದ್ಬುತ ಅವಕಾಶವೊಂದನ್ನು ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದಿಟ್ಟಿದೆ. ಹಾಗಾದರೆ ಆ ಯೋಜನೆ ಯಾವುದು ಅಂತೀರಾ..? ಈ ಸ್ಟೋರಿ ಓದಿ...
ಮಾನ್ಯ ಮುಖ್ಯಮಂತ್ರಿಯವರಾದ ಶ್ರೀ ಸಿದ್ದರಾಮಯ್ಯ ಮತ್ತು ಶಿಕ್ಷಣ ಸಚಿವರಾದ ಶ್ರೀ ಮಧು ಬಂಗಾರಪ್ಪ ಅವರ ಕ್ರಾಂತಿಕಾರಕ ಯೋಜನೆಯಾದ ‘ನಮ್ಮ ಶಾಲೆ ನಮ್ಮ ಜವಾಬ್ದಾರಿ- ಸರ್ಕಾರಿ ಶಾಲೆಗಳ ಅಭಿವೃದ್ಧಿ ಹಾಗೂ ಬಲವರ್ಧನೆ’ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು ತಾವು ಕಲಿತ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಪ್ಪೇಗಾಲ ಮತ್ತು ಕೆ.ಪಿ.ಎಸ್. ಸಿದ್ದರಾಮನಹುಂಡಿಗೆ 10 ಲಕ್ಷ ರೂ. ಗಳ ದೇಣಿಗೆ ನೀಡುವ ಮೂಲಕ ಚಾಲನೆ ನೀಡಿದರು.
ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು ಚಿತ್ರದ ಮೂಲಕ ಸರ್ಕಾರಿ ಶಾಲೆಗಳ ಉಳಿವಿನ ಬಗ್ಗೆ ಜಾಗೃತಿ ಮೂಡಿಸಿದ್ದ ನಟ, ನಿರ್ದೇಶಕ. ಕನ್ನಡ ಶಾಲೆಗಳ ಸದ್ಯದ ಪರಿಸ್ಥಿತಿ ಕುರಿತು ಮನಮುಟ್ಟುವ ಚಿತ್ರಣವನ್ನು ಕಟ್ಟಿಕೊಟ್ಟಂತ ನಟ ನಿರ್ದೇಶಕ ಸದ್ಯ ಕಾಂತಾರ ಪ್ರಿಕ್ವೇಲ್ ನಿರ್ಮಾಣದ ಗಡಿಬಿಡಿಯಲ್ಲಿದ್ದಾರೆ.
Government Schools: ಸರ್ಕಾರಿ ಶಾಲೆ-ಕಾಲೇಜುಗಳನ್ನು ಉಳಿಸಬೇಕಾದ ಶಿಕ್ಷಕರೇ ಖಾಸಗಿ ಶಿಕ್ಷಣ ಸಂಸ್ಥೆಗಳ ಆಮಿಷಕ್ಕೆ ಬಲಿಯಾಗಿ ಮಕ್ಕಳನ್ನು ಬಲವಂತವಾಗಿ ಖಾಸಗಿ ಕಾಲೇಜುಗಳಿಗೆ ಕಳುಹಿಸುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ಇಲ್ಲಿನ ಶಾಲೆಗಳಲ್ಲಿ ಶುಕ್ರವಾರ ವಾರದ ರಜೆ ನೀಡುವ ಸಂಪ್ರದಾಯ ಹಲವು ವರ್ಷಗಳಿಂದ ನಡೆದುಕೊಂಡು ಬಂದಿದೆ. ಇದೀಗ ಈ ಸಂಪ್ರದಾಯವು ವ್ಯವಸ್ಥೆಯ ವಿರುದ್ದ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ.
ಸರ್ಕಾರಿ ಶಾಲೆಗಳಲ್ಲಿ ಇನ್ಮುಂದೆ ವಾರದಲ್ಲಿ ಎರಡು ದಿನ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ಆಯೋಜನೆ ಮಾಡಲು ಶಿಕ್ಷಣ ಇಲಾಖೆ ಪ್ಲ್ಯಾನ್ ನಡೆಸಿದೆ. ಖಾಸಗಿ ಶಾಲೆಯ ಮಕ್ಕಳಿಗಿಂತ ತಮ್ಮ ಮಕ್ಕಳು ಯಾವುದರಲ್ಲೂ ಕಡಿಮೆ ಇರಬಾರದು ಎಂಬ ಉದ್ದೇಶದಿಂದ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಪೋಕನ್ ಇಂಗ್ಲೀಷ್ ತರಗತಿಗಳನ್ನು ನಡೆಸಲು ತೀರ್ಮಾನಿಸಿದೆ.
ಶಿಕ್ಷಣ ನಿರ್ದೇಶನಾಲಯ ಹೊರಡಿಸಿದ ಮಾರ್ಗಸೂಚಿಗಳು ಸರ್ಕಾರಿ ಮತ್ತು ಸರ್ಕಾರಿ ಅನುದಾನಿತ ಶಾಲೆಗಳ 2020-21ರ ಬೋಧನಾ ಅಧಿವೇಶನಕ್ಕೆ ಪರಿಣಾಮಕಾರಿಯಾಗಿರುತ್ತವೆ. ಈ ಬೋಧನಾ ಅಧಿವೇಶನದಲ್ಲಿ ಕೋವಿಡ್ -19 (Covid-19) ರ ಕಾರಣದಿಂದಾಗಿ, ಶಾಲೆಗಳು ದೀರ್ಘಕಾಲ ಮುಚ್ಚಲ್ಪಟ್ಟವು ಮತ್ತು ಎಲ್ಲಾ ಕಲಿಕೆಗೆ ಸಂಬಂಧಿಸಿದ ಚಟುವಟಿಕೆಗಳು ಆನ್ಲೈನ್ನಲ್ಲಿತ್ತು.
ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯವು ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿಗಳಿಂದ ಸರ್ಕಾರಿ ಶಾಲೆಗಳ ದತ್ತು ಸ್ವೀಕಾರ ಪತ್ರವನ್ನು ಕುಲಪತಿ ಪ್ರೊ. ವಿಷ್ಣುಕಾಂತ ಎಸ್ ಚಟಪಲ್ಲಿ ಪಡೆದುಕೊಡರು.
ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳಿಗೆ ಕೇಬಲ್ ಮೂಲಕ ಹೈ ಸ್ಪೀಡ್ ಇಂಟರ್ನೆಟ್ ಸೌಲಭ್ಯ ಕಲ್ಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ. ಭಾರತ್ ನೆಟ್ ಸಹಯೋಗದಲ್ಲಿ ಈ ಕೆಲಸ ಆಗಲಿದೆ ಎಂದು ಸುರೇಶ್ ಕುಮಾರ್ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.