ಈಗ ಪಂಚಾಯಿತಿಗೆ ಆಯ್ಕೆಯಾಗಿರುವ ಸದಸ್ಯರ ಸಹಾಯದಿಂದಲೇ ನಮ್ಮ ಪಕ್ಷದ ನಿಷ್ಠಾವಂತ ಕಾರ್ಯಕರ್ತರ ಜೊತೆಗೂಡಿ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಈ ಪ್ರಾದೇಶಿಕ ಪಕ್ಷವನ್ನು ನಮ್ಮ ರಾಜ್ಯದಲ್ಲಿ ಸ್ವತಂತ್ರವಾಗಿ ಅಧಿಕಾರಕ್ಕೆ ತರಲು ನಾನು ಹಗಲು ರಾತ್ರಿ ಶ್ರಮಿಸುತ್ತೇನೆ- ಹೆಚ್.ಡಿ. ದೇವೇಗೌಡ
ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಯಾವುದೇ ರಾಜಕೀಯ ಪಕ್ಷಗಳಿಂದ ಆಯಾ ಪಕ್ಷದ ಚಿಹ್ನೆಗಳ ಮೂಲಕ ಅಭ್ಯರ್ಥಿಗಳು ಕಣಕ್ಕಿಳಿದಿರುವುದಿಲ್ಲವಾದರೂ ಪಕ್ಷದ ಬೆಂಬಲಿತ ಅಭ್ಯರ್ಥಿಗಳಿರುವ ಕಾರಣಕ್ಕೆ ರಾಜ್ಯದ ಮೂರು ಪ್ರಮುಖ ಪಕ್ಷಗಳಾದ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಗೆ ಈ ಚುನಾವಣೆ ನಿರ್ಣಾಯಕವಾಗಿದೆ.
ರಾಜ್ಯದಲ್ಲೆಡೆ ಈ ಬಾರಿ ಗ್ರಾಮ ಪಂಚಾಯತ್ ಚುನಾವಣೆ ಪ್ರಚಾರದ ಆರ್ಭಟ ಜೋರಾಗಿದ್ದು. ಗ್ರಾಮ ಪಂಚಾಯತ್ ಅಭ್ಯರ್ಥಿಗಳೆಲ್ಲರೂ ಸಹಿತ ಈ ಬಾರಿ ತಮ್ಮ ಪ್ರಚಾರಕ್ಕಾಗಿ ಸಾಮಾಜಿಕ ಮಾಧ್ಯಮಗಳನ್ನು ಬಳಸಿಕೊಳ್ಳುತ್ತಿದ್ದಾರೆ,ಆ ಮೂಲಕ ಅಭ್ಯರ್ಥಿಗಳು ಮತದಾರರನ್ನು ತಲುಪುವ ಪ್ರಯತ್ನವನ್ನು ಮಾಡುತ್ತಿದ್ದಾರೆ.
ಅಧಿಕಾರವನ್ನು ವಿಕೇಂದ್ರೀಕರಣಗೊಳಿಸಬೇಕೆಂಬ ಮಹದಾಶಯಗಳೊಂದಿಗೆ ಗ್ರಾಮ ಪಂಚಾಯತಿಗಳ ರಚನೆಯಾಗಿದೆ. ಹಾಗೆ ರಾಷ್ಟ್ರ ಮಟ್ಟದಲ್ಲಿ ಪಂಚಾಯತಿ ವ್ಯವಸ್ಥೆಗೆ ಕಾಯಕಲ್ಪ ನೀಡಿದವರು ಮಾಜಿ ಪ್ರಧಾನ ಮಂತ್ರಿ ರಾಜೀವ್ ಗಾಂಧಿ. ರಾಜ್ಯದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾಗಿದ್ದ ನಜೀರ್ ಸಾಬ್.
2020ರ ಗ್ರಾಮ ಪಂಚಾಯಿತಿ ಚುನಾವಣೆ ಸದಸ್ಯ ಸ್ಥಾನಗಳಿಗೆ ಹರಾಜಿನ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಪ್ರಕರಣಗಳು ಕಂಡುಬಂದಲ್ಲಿ ಮೊಕದ್ದಮೆ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಚಾಮರಾಜನಗರದ ಜಿಲ್ಲಾಧಿಕಾರಿ ಡಾ.ಎಂ.ಆರ್. ರವಿ ಅವರು ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.