ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ. 1995ರಲ್ಲಿ ಕಾಂಗ್ರೆಸ್ 149 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಇದೀಗ ತನ್ನ ದಾಖಲೆಯನ್ನು ತಾನೇ ಮುರಿದು ಭರ್ಜರಿ ಜಯ ಗಳಿಸಿದೆ. ಇಲ್ಲಿಯವರೆಗೆ (ಮಧ್ಯಾಹ್ನ 4:30 ಗಂಟೆಗೆ) ಬಿಜೆಪಿ 156 ಸ್ಥಾನಗಳನ್ನು ಗೆದ್ದಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ, ಹೀಗಾಗಿ ಬಿಜೆಪಿ 157 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಅಲ್ಲದೆ, ಬಿಜೆಪಿ ಸತತ 7ನೇ ಬಾರಿಗೆ ಸರ್ಕಾರ ರಚಿಸಲು ಹೊರಟಿದೆ.
ಗುಜರಾತ್ ವಿಧಾನಸಭಾ ಚುನಾವಣೆ ಮತ ಎಣಿಕೆ ಕಾರ್ಯ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. 33 ಜಿಲ್ಲೆಗಳ 182 ವಿಧಾನಸಭಾ ಸ್ಥಾನಗಳಿಗೆ ಎರಡು ಹಂತಗಳಲ್ಲಿ ಚುನಾವಣೆ ನಡೆದಿತ್ತು. ಇಂದು ಬಹು ನಿರೀಕ್ಷಿತ ಫಲಿತಾಂಶ ಹೊರಬೀಳಲಿದ್ದು, ಪ್ರತಿನಿಧಿಗಳ ಭವಿಷ್ಯ ಬಯಲಾಗಲಿದೆ. ಈಗಾಗಲೇ 5 ವಿಧಾನಸಭಾ ಕ್ಷೇತ್ರಗಳ ಫಲಿತಾಂಶ ಪ್ರಕಟವಾಗಿದ್ದು, ಈ ಪೈಕಿ ಬಿಜೆಪಿ 4 ಸ್ಥಾನಗಳಲ್ಲಿ ಜಯ ಸಾಧಿಸಿದ್ದರೆ, ಕಾಂಗ್ರೆಸ್ ಒಂದು ಸ್ಥಾನದಲ್ಲಿ ಜಯಭೇರಿ ಬಾರಿಸಿದೆ.
ಗುಜರಾತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ಪ್ರಬಲ ಅಭ್ಯರ್ಥಿಯಾಗಿ ಫೀಲ್ಡಿಗಿಳಿದಿರುವ ಹಾರ್ದಿಕ್ ಪಟೇಲ್ ಹಿನ್ನಡೆ ಕಾಣುತ್ತಿದ್ದಾರೆ. ಹಾರ್ದಿಕ್ ಪಟೇಲ್ ಕಾಂಗ್ರೆಸ್ ನಿಂದ ಭಾರತೀಯ ಜನತಾ ಪಕ್ಷಕ್ಕೆ ಪಕ್ಷಾಂತರಗೊಂಡಿದ್ದರು. 2015 ರಿಂದ 2019 ರವರೆಗೆ, ಪಟೇಲ್ ಸಮುದಾಯವನ್ನು ಇತರ ಹಿಂದುಳಿದ ವರ್ಗಗಳ ವರ್ಗಕ್ಕೆ ಸೇರಿಸಲು ಹಾರ್ದಿಕ್ ಹೋರಾಟ ಮಾಡುವ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು. ಪಟೇಲ್ ಸಮುದಾಯದ ಮತ ಬ್ಯಾಂಕ್ ಅವರಿಗೆ ಒಲವು ತೋರಿದೆ.
ಗುಜರಾತ್ ಮತ್ತು ಹಿಮಾಚಲ ಪ್ರದೇಶಗಳಲ್ಲಿ ಕಾಂಗ್ರೆಸ್ ಚುನಾವಣೆ ಕಳೆದುಕೊಂಡ ಒಂದು ದಿನದ ನಂತರ, ಪ್ರಧಾನಿ ನರೇಂದ್ರ ಮೋದಿ ಅವರ ವಿಶ್ವಾಸಾರ್ಹತೆಗೆ ಪ್ರಶ್ನೆಯೊಂದು ಎದ್ದಿದೆ ಎಂದು ಕಾಂಗ್ರೇಸ್ ಅಧ್ಯಕ್ಷ ರಾಹುಲ್ ಗಾಂಧಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.