ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಕಂಡಿರುವ ಗುಜರಾತ್ ಸಿಎಂ ಭೂಪೇಂದ್ರ ಪಟೇಲ್ ಡಿಸೆಂಬರ್ 12ರಂದು ಎರಡನೇ ಬಾರಿಗೆ ರಾಜ್ಯದ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಈ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಲಿದ್ದಾರೆ.
ಕಮಲ ಪಕ್ಷದ ಗೆಲುವಿನ ನಾಗಾಲೋಟ ಮುಂದುವರಿದಿದೆ.. ಸತತ 7ನೇ ಬಾರಿಗೆ ಗೆಲ್ಲೋ ಮೂಲಕ ಗುಜರಾತ್ನಲ್ಲಿ ಬಿಜೆಪಿ ಹೊಸ ದಾಖಲೆ ಬರೆದಿದೆ. 182 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರೋ ಗುಜರಾತ್ ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 156 ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಇನ್ನು ಕಾಂಗ್ರೆಸ್ ಕೇವಲ 17 ಸ್ಥಾನಗಳಲ್ಲಿ ಗೆಲ್ಲೋ ಮೂಲಕ ಭಾರಿ ಮುಖಭಂಗ ಅನುಭವಿಸಿದೆ.
ಬಹುನಿರೀಕ್ಷಿತ ಗುಜರಾತ್ ಹಾಗೂ ಹಿಮಾಚಲ ಪ್ರದೇಶದ ವಿಧಾನಸಭಾ ಚುನಾವಣಾ ಫಲಿತಾಂಶ ಇಂದು ಪ್ರಕಟವಾಗಲಿದೆ. ಗುಜರಾತ್ನಲ್ಲಿ ಸತತ 7ನೇ ಬಾರಿ ಗೆದ್ದು ಬಿಜೆಪಿ ಮತ್ತೆ ಅಧಿಕಾರ ಹಿಡಿಯಲಿದೆ ಎಂದು ಬಹುತೇಕ ಎಲ್ಲ ಚುನಾವಣೋತ್ತರ ಸಮೀಕ್ಷೆಗಳು ಹೇಳಿವೆ. ಆದರೆ ಹಿಮಾಚಲ ಪ್ರದೇಶದಲ್ಲಿ ಅತಂತ್ರ ಸ್ಥಿತಿ ನಿರ್ಮಾಣವಾಗಬಹುದು ಎಂದು ಅಂದಾಜಿಸಿವೆ. ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಸಿಗಲಿದೆ.
Gujarat Election Results 2022: ಗುಜರಾತ್ ರಾಜ್ಯದ ಅಭೂತಪೂರ್ವ ಜಯ ನಿಜಕ್ಕೂ ರಾಜ್ಯದ ಚುನಾವಣೆಗೆ ಬೂಸ್ಟರ್ ಆಗಿ ಪರಿಣಮಿಸುತ್ತದೆ. ಗುಜರಾತ್ ರಾಜ್ಯದ ಜನರು ಭಾರತೀಯ ಜನತಾ ಪಕ್ಷದ ಅಧಿಕಾರದ ಕಾರ್ಯವೈಖರಿ ಹಾಗೂ ನರೇಂದ್ರ ಮೋದಿಯವರ ನಾಯಕತ್ವಕ್ಕೆ ಮನ್ನಣೆ ನೀಡಿರುವುದು ನಿಜಕ್ಕೂ ಅಭಿನಂದನಾ ಪೂರಕವಾಗಿದೆ- ಮಾಜಿ ಸಿಎಂ ಜಗದೀಶ್ ಶೆಟ್ಟರ್
Gujarat Assembly Election Result 2022: ಇಂದು ಬಹುನಿರೀಕ್ಷಿತ ಗುಜರಾತ್ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಇಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಯಲಿದ್ದು, ಮತ ಎಣಿಕೆಗಾಗಿ 37 ಎಣಿಕೆ ಕೇಂದ್ರಗಳಲ್ಲಿ ಸಕಲ ಸಿದ್ದತೆಯನ್ನೂ ಕೈಗೊಳ್ಳಲಾಗಿದೆ. ಗುಜರಾತ್ ಅಸೆಂಬ್ಲಿ ಚುನಾವಣಾ ಫಲಿತಾಂಶವನ್ನು ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಗೆ ಮುನ್ನುಡಿ ಎಂದು ಬಿಂಬಿಸಲಾಗುತ್ತಿದ್ದು ಇದೀಗ ಎಲ್ಲರ ಚಿತ್ತ ಗುಜರಾತ್ನತ್ತ ನೆಟ್ಟಿದೆ. ಗುಜರಾತ್ ಅಸೆಂಬ್ಲಿ ಚುನಾವಣಾ ಫಲಿತಾಂಶಗಳ ಲೈವ್ ಅಪ್ಡೇಟ್ಗಳನ್ನು ಹೇಗೆ ನೋಡುವುದು ತಿಳಿಯಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.