Vijaya Vittala Temple: ಹಂಪಿಯ ವಿಜಯ ವಿಠ್ಠಲ ದೇವಾಲಯ ಆಕರ್ಷಣೆಯ ಕೇಂದ್ರ ಬಿಂದುವಾಗಿದೆ. ಕಲ್ಲಿನರಥ, ಸಪ್ತಸ್ವರ ಮಂಟಪ ಸೇರಿದಂತೆ ಹಲವಾರು ವಿಶೇಷತೆಯನ್ನು ಹೊಂದಿರುವ ವಿಠ್ಠಲ ದೇವಾಲಯವು ಪ್ರಸಿದ್ಧ ತಾಣವಾಗಿದೆ. ಇಲ್ಲಿನ ವಿಶೇಷ ಸಪ್ತಸ್ವರ ಮಂಟಪದಿಂದ ಹೊರಹೊಮ್ಮುವ ಸಂಗೀತ ಕೇಳುವ ಅವಕಾಶವಿಲ್ಲದೆ ಬೇಸರಗೊಂಡಿದ್ದ ಪ್ರವಾಸಿಗರಿಗೆ ಭಾರತೀಯ ಪುರಾತತ್ವ ಇಲಾಖೆ ಸಂತಸದ ಸುದ್ದಿ ನೀಡಿದೆ.
Hampi Utsav 2024: ಇಷ್ಟೂ ವರ್ಷಗಳಲ್ಲಿ ಕನ್ನಡ ಚಿತ್ರರಂಗದ ಅನೇಕ ನಟ ನಟಿಯರು ಈ ಉತ್ಸವದಲ್ಲಿ ಭಾಗಿಯಾಗಿ ಮೆರುಗು ನೀಡಿದ್ದಾರೆ. ಈ ಬಾರಿ ಇಂತಹದೊಂದು ಸುವರ್ಣಾವಕಾಶ ಶೇಕ್ ಇಟ್ ಪುಷ್ಪವತಿ ಖ್ಯಾತಿಯ ನಿಮಿಕಾ ರತ್ನಾಕರ್ ಅವರಿಗೆ ಲಭಿಸಿದೆ!
ಮುಜುರಾಯಿ ಇಲಾಖೆಗೆ ಒಳಪಟ್ಟ ಹಂಪಿಯ ವಿರೂಪಾಕ್ಷ ದೇವಸ್ಥಾನದಲ್ಲಿ ವಸ್ತ್ರಸಂಹಿತೆ ಜಾರಿಗೆ ಬಂದಿದೆ. ಬರ್ಮುಡ ಚಡ್ಡಿ, ಜೀನ್ಸ್ ಧರಿಸಿ ಬಂದವರು ಇನ್ನು ಮುಂದೆ ಪಂಚೆ ತೊಡುವುದು ಕಡ್ಡಾಯ. ಮಹಿಳೆಯರು ತುಂಡುಡುಗೆಯಲ್ಲಿ ಬಂದರೆ ಅದರ ಮೇಲೆ ಶಲ್ಯ ತೊಡಬೇಕಾಗಿದೆ.
ಹಂಪಿಯಲ್ಲಿ ರಾಜ್ಯ ಮಟ್ಟದ ಯುವಜನ ಸೇವಾ ತರಬೇತಿ ಕೇಂದ್ರವನ್ನು ಸ್ಥಾಪನೆ ಮಾಡಲಾಗುವುದು ಎಂದು ಯುವ ಸಬಲೀಕರಣ, ಕ್ರೀಡೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ನಾಗೇಂದ್ರ ಅವರು ಹೇಳಿದರು.
ಹಂಪಿಯಲ್ಲಿ G-20 ಶೃಂಗಸಭೆ ಹಿನ್ನೆಲೆ ಭಾರಿ ಭದ್ರತೆಯಲ್ಲಿ ಹಂಪಿಗೆ ಜಿ-೨೦ ರಾಷ್ಟಗಳ ಪ್ರತಿನಿಧಿಗಳು ಆಗಮಿಸಿದ್ದಾರೆ.. ಹಾಗಿದ್ರೆ ಹಂಪಿಯಲ್ಲಿ ಜಿ-20 ಶೃಂಗಸಭೆಗೆ ಯಾವೆಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದಾರೆ ಅನ್ನೋದರ ಬಗ್ಗೆ ವಿಜಯನಗರ ಪ್ರತಿನಿಧಿ ಶಾಂತಕುಮಾರ್ ವಿವರಣೆ ನೀಡಿದ್ದಾರೆ...
ವಿಶ್ವಪಾರಂಪರಿಕ ತಾಣ ಹಂಪಿಯಲ್ಲಿ ಜಿ-20 ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆಗೆ ಆಗಮಿಸಿದ ಸದಸ್ಯ ಹಾಗೂ ಅತಿಥಿ ರಾಷ್ಟ್ರಗಳ ಅತ್ಯುನ್ನತ ಪ್ರತಿನಿಧಿಗಳು ಸೋಮವಾರ ಸಂಜೆ ಐತಿಹಾಸಿಕ ತುಂಗಭದ್ರಾ ನದಿಯಲ್ಲಿ ಹರಿಗೋಲು ಸವಾರಿ (ಕೊರಾಕಲ್ ರೈಡ್) ಮಾಡಿದರು.
ವಿವಿಧ ಬಣ್ಣದ ಹಲವು ಸಣ್ಣ ತುಣುಕುಗಳನ್ನು ದಾರದಿಂದ ಹೊಲಿದು ಜೋಡಿಸಿ, ಅದರ ಮೇಲೆ ಕಸೂತಿ ಮಾಡುವ ಲಂಬಾಣಿ ಮಹಿಳೆಯರ ಕಲೆ, ಶ್ರಮ ಸಂಸ್ಕೃತಿಯ ಪ್ರತೀಕ. ಆದಿ ಕಾಲದ ಮಾನವನ ಸುಪ್ತ ಪ್ರಜ್ಞೆಯಲ್ಲಿ ಅರಳಿದ ಕಲೆಗಳು ಇಂದು ತಂತ್ರಜ್ಞಾನದ ಅತ್ಯುನ್ನತ ಮಟ್ಟ ತಲುಪಿವೆ. ತಾಂತ್ರಿಕ ಕಾಲಘಟ್ಟದಲ್ಲೂ ಲಂಬಾಣಿ ಮಹಿಳೆಯರು ಉಳಿಸಿ ಬೆಳಿಸಿಕೊಂಡು ಬಂದ ಕಸೂತಿ ಕಲೆ ಗಿನ್ನಿಸ್ ಬುಕ್ ಆಫ್ ರೆಕಾರ್ಡ್ ಸೇರುವ ಕ್ಷಣಕ್ಕೆ ಹಂಪಿಯಲ್ಲಿ ನಡೆಯುತ್ತಿರುವ ಜಿ-20 ಶೃಂಗಸಭೆ ಸಾಕ್ಷಿಯಾಗಿದೆ.
ಜಿ-20 ಶೃಂಗಸಭೆ ಅಂಗವಾಗಿ ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ, ಜುಲೈ 9 ರಿಂದ 12 ವರೆಗೆ 3ನೇ ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಸಭೆ ಜರುಗಲಿದೆ. ದೇಶದ ಜವಳಿ ಕ್ಷೇತ್ರದ ವೈವಿದ್ಯತೆ ಬಿಂಬಿಸುವ ಹಾಗೂ ಜಾಗತಿಕವಾಗಿ ಸಾಂಸ್ಕೃತಿಕ ಜವಳಿ ಉದ್ದಿಮೆಯ ಬೆಳವಣಿಗೆಗೆ ಇಂಬು ಕೊಡುವ ನಿಟ್ಟಿನಲ್ಲಿ, ಹಂಪಿ ಎದುರು ಬಸವಣ್ಣ ಮಂಪಟದ ಆವರಣದಲ್ಲಿ ಜವಳಿ ವಸ್ತುಪ್ರದರ್ಶನಕ್ಕೆ ಸೋಮವಾರ ಚಾಲನೆ ನೀಡಲಾಗುವುದು ಎಂದು ಕೇಂದ್ರ ಸಂಸ್ಕೃತಿ ಸಚಿವಾಲಯದ ಕಾರ್ಯದರ್ಶಿ ಗೋವಿಂದ ಮೋಹನ್ ಹೇಳಿದರು.
ಭಾರತದ ಜಿ20 ಅಧ್ಯಕ್ಷತೆಯಲ್ಲಿ, ಸಾಂಸ್ಕೃತಿಕ ಕಾರ್ಯಕಾರಿ ಗುಂಪಿನ ಮೂರನೇ ಸಭೆ, ಕರ್ನಾಟಕದ ವಿಜಯನಗರ ಜಿಲ್ಲೆಯಲ್ಲಿರುವ ವಿಶ್ವ ಪಾರಂಪರಿಕ ತಾಣ, ಹಂಪಿಯಲ್ಲಿ ಇಂದಿನಿಂದ ಪ್ರಾರಂಭವಾಗಲಿದೆ.
CM Bommai : ಕಲ್ಯಾಣ ಚಾಲುಕ್ಯರ ವಾಸ್ತುಶಿಲ್ಪದ ಪ್ರಮುಖ ಕೇಂದ್ರವಾದ ಲಕ್ಕುಂಡಿಯನ್ನು ಹಂಪಿ ಸರ್ಕ್ಯೂಟ್ನಲ್ಲಿ ಸೇರಿಸಲು ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ. ಅಲ್ಲದೇ ಈ ಕುರಿತು ಸರ್ಕಾರಕ್ಕೆ ಮನವಿಯನ್ನು ಸಲ್ಲಿಸಲಾಗಿದೆ ಎಂದು ಸಿಎಂ. ಬೊಮ್ಮಾಯಿ ತಿಳಿಸಿದ್ದಾರೆ.
ಹಂಪಿ ಸ್ಮಾರಕಗಳ ಮೇಲೆ ನೃತ್ಯ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಂಪಿ ಪೊಲೀಸರು ಯುವಕನ ಮೇಲೆ ಪ್ರಕರಣ ದಾಖಲಿಸುತ್ತಿದ್ದಂತೆಯೇ ಯುವಕ ಕ್ಷಮೆ ಕೋರಿ ವಿಡಿಯೋ ಮಾಡಿದ್ದಾನೆ.. ಮಂಡ್ಯ ಮೂಲದ ದೀಪಕ್ ಗೌಡ ಎಂಬ ಯುವಕನ ಮೇಲೆ FIR ದಾಖಲಾಗಿದೆ..
ಆತ ಆಗಿನ್ನೂ ನೂತನ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ. ನವದಂಪತಿಗಳು ತಮ್ಮ ಮುಂದಿನ ಭವಿಷ್ಯದ ಬಗ್ಗೆ ತಮ್ಮದೇ ಆದ ಕನಸ್ಸು ಕಟ್ಟಿಕೊಂಡಿದ್ರು. ಆದ್ರೆ ಇವರ ಕನಸೇಕೋ ಜವರಾಯನಿಗೆ ಇಷ್ಟವಾಗಲಿಲ್ಲ ಅನಿಸುತ್ತೆ. ಮದುವೆ ಆರತಕ್ಷತೆ ವೇಳೆ ದಿಢೀರನೆ ಕಾಣಿಸಿಕೊಂಡ ಎದೆನೋವು ವರನ ಪ್ರಾಣ ತೆಗೆದಿದೆ. ಮದುವೆ ದಿನವೇ ವರ ಮರಣ ಹೊಂದೊದ್ದು ಕುಟುಂಬಸ್ಥರಿಗೆ ಬರಸಿಡಿಲು ಬಡಿದಂತಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.