ಗುಜರಾತ್ ಚುನಾವಣೆಯ ಮತ ಎಣಿಕೆ ಆರಂಭವಾಗಿದೆ. ಭಾರತೀಯ ಜನತಾ ಪಕ್ಷ ಮುನ್ನಡೆ ಸಾಧಿಸಿದ್ದು, ಬಿಜೆಪಿಗೆ ಪ್ರಬಲ ಅಭ್ಯರ್ಥಿಯಾಗಿ ಫೀಲ್ಡಿಗಿಳಿದಿರುವ ಹಾರ್ದಿಕ್ ಪಟೇಲ್ ಹಿನ್ನಡೆ ಕಾಣುತ್ತಿದ್ದಾರೆ. ಹಾರ್ದಿಕ್ ಪಟೇಲ್ ಕಾಂಗ್ರೆಸ್ ನಿಂದ ಭಾರತೀಯ ಜನತಾ ಪಕ್ಷಕ್ಕೆ ಪಕ್ಷಾಂತರಗೊಂಡಿದ್ದರು. 2015 ರಿಂದ 2019 ರವರೆಗೆ, ಪಟೇಲ್ ಸಮುದಾಯವನ್ನು ಇತರ ಹಿಂದುಳಿದ ವರ್ಗಗಳ ವರ್ಗಕ್ಕೆ ಸೇರಿಸಲು ಹಾರ್ದಿಕ್ ಹೋರಾಟ ಮಾಡುವ ಮೂಲಕ ರಾಜಕೀಯಕ್ಕೆ ಪ್ರವೇಶ ಮಾಡಿದ್ದರು. ಪಟೇಲ್ ಸಮುದಾಯದ ಮತ ಬ್ಯಾಂಕ್ ಅವರಿಗೆ ಒಲವು ತೋರಿದೆ.
ಈ ಬಾರಿ 2017ರ ರೀತಿ ರಿಸ್ಕ್ ತೆಗೆದುಕೊಳ್ಳಲು ಬಿಜೆಪಿ ಹೈಕಮಾಂಡ್ ಸಿದ್ಧವಿಲ್ಲ ಮತ್ತು ಚುನಾವಣೆಗೆ ಹಲವು ತಿಂಗಳು ಬಾಕಿ ಇರುವಾಗಲೇ ಬಿಜೆಪಿ ಹೈಕಮಾಂಡ್ ಈ ಕೆಲಸ ಆರಂಭಿಸಿದ್ದಾರೆ. ಮತ್ತೆ ಚುನಾವಣೆಯನ್ನ ಭರ್ಜರಿಯಾಗಿ ಗೆಲ್ಲಲು ಪ್ಲಾನ್ ಮಾಡುತ್ತಿದೆ.
"ಕಾಂಗ್ರೆಸ್ ಪಕ್ಷವು ಸಾರ್ವಜನಿಕರ ಭಾವನೆಗಳಿಗೆ ಧಕ್ಕೆ ತರುತ್ತದೆ. ಹಿಂದೂ ಧರ್ಮದ ನಂಬಿಕೆಗೆ ಧಕ್ಕೆ ತರುವ ಕೆಲಸ ಮಾಡುತ್ತದೆ ಎಂದು ನಾನು ಈ ಹಿಂದೆಯೂ ಹೇಳಿದ್ದೆ. ಇಂದು ಮಾಜಿ ಕೇಂದ್ರ ಸಚಿವ ಮತ್ತು ಗುಜರಾತ್ ಕಾಂಗ್ರೆಸ್ ನಾಯಕ, ರಾಮಮಂದಿರದ ಇಟ್ಟಿಗೆಗಳ ಮೇಲೆ ನಾಯಿಗಳು ಮೂತ್ರ ವಿಸರ್ಜಿಸುತ್ತವೆ ಎಂಬ ಹೇಳಿಕೆ ನೀಡಿದ್ದಾರೆ"
"ಇಂದು ನಾನು ಕಾಂಗ್ರೆಸ್ ಪಕ್ಷದ ಕಾರ್ಯಾಧ್ಯಕ್ಷ ಮತ್ತು ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುವ ಧೈರ್ಯವನ್ನು ತೆಗೆದುಕೊಂಡಿದ್ದೇನೆ. ನನ್ನ ನಿರ್ಧಾರವನ್ನು ನನ್ನ ಎಲ್ಲಾ ಸಹೋದ್ಯೋಗಿಗಳು ಮತ್ತು ಗುಜರಾತ್ ಜನರು ಸ್ವಾಗತಿಸುತ್ತಾರೆ ಎಂದು ನನಗೆ ಭಾವಿಸುತ್ತೇನೆ. ಮುಂದಿನ ದಿನಗಳಲ್ಲಿ ಗುಜರಾತ್ಗಾಗಿ ನಾನು ನಿಜವಾಗಿಯೂ ಕೆಲಸ ಮಾಡಲು ಸಾಧ್ಯವಾಗುತ್ತದೆ" ಎಂದು ಟ್ವೀಟ್ ಮಾಡಿದ್ದಾರೆ.
ಗುಜರಾತ್ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಅವರು ಪಕ್ಷದಲ್ಲಿನ ಆಂತರಿಕ ಕಲಹದ ಕಾರಣ ತ್ಯಜಿಸಬಹುದು ಎಂಬ ಊಹಾಪೋಹಗಳ ನಡುವೆ, ಆಮ್ ಆದ್ಮಿ ಪಕ್ಷದ ಗುಜರಾತ್ ಮುಖ್ಯಸ್ಥ ಗೋಪಾಲ್ ಇಟಾಲಿಯಾ ಇಂದು ಅವರನ್ನು ಎಎಪಿಗೆ ಸೇರಲು ಆಹ್ವಾನಿಸಿದ್ದಾರೆ.
ಶುಕ್ರವಾರ ನಡೆದ ಚುನಾವಣಾ ರ್ಯಾಲಿಯಲ್ಲಿ ಬಹಿರಂಗವಾಗಿ ಕಪಾಳಮೋಕ್ಷವಾದ ನಂತರ ಈಗ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ತಮ್ಮ ಜೀವಕ್ಕೆ ಬೆದರಿಕೆ ಇದೆ. ಆದ್ದರಿಂದ ಪೊಲೀಸರು ಸೂಕ್ತ ರಕ್ಷಣೆ ಒದಗಿಸಬೇಕೆಂದು ಕೇಳಿಕೊಂಡಿದ್ದಾರೆ.
ಇಂದು ಗುಜರಾತಿನ ಸುರೇಂದ್ರನಗರದಲ್ಲಿ ನಡೆದ ಜನ ಆಕ್ರೋಶ್ ರ್ಯಾಲಿಯಲ್ಲಿ ಕಾಂಗ್ರೆಸ್ ನಾಯಕ ಹಾರ್ದಿಕ್ ಪಟೇಲ್ ಮಾತನಾಡುತ್ತಿದ್ದ ವೇಳೆ ಅವರ ಕೆನ್ನೆಗೆ ತರುಣ್ ಗಜ್ಜರ್ ಎನ್ನುವ ವ್ಯಕ್ತಿ ಬಾರಿಸಿದ್ದಾನೆ.ಈಗ ಈ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ.
2015ರಲ್ಲಿ ಗುಜರಾತ್ನಲ್ಲಿ ಪಾಟೀದಾರ್ ಸಮುದಾಯದ ಮೀಸಲಾತಿಗಾಗಿ ಹೋರಾಟ ನಡೆಸುತ್ತಿದ್ದ ವೇಳೆ ಮೆಹಸಾನಾದಲ್ಲಿ ನಡೆದ ದೊಂಬಿ ಪ್ರಕರಣದಲ್ಲಿ ಹಾರ್ದಿಕ್ಗೆ ಮೆಹಸಾನಾ ನ್ಯಾಯಾಲಯ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿದೆ.
2015 ರಲ್ಲಿನ ಹಿಂಸಾಚಾರದ ಪ್ರಕರಣಕ್ಕೆ ಸಂಬಂಧಿಸಿದಂತೆ ತಡೆ ನೀಡಬೇಕೆಂದು ಹಾರ್ದಿಕ್ ಪಟೇಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ತಿರಸ್ಕರಿಸಿದೆ.ಈ ಹಿನ್ನಲೆಯಲ್ಲಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸಿದ್ದ ಹಾರ್ದಿಕ್ ಪಟೇಲ್ ಗೆ ಹಿನ್ನಡೆಯಾಗಿದೆ.
ಗುಜರಾತ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ರಾಜ್ಯವಾಗಿದ್ದು, ಕಳೆದ ವಿಧಾನಸಭಾ ಚುನಾವಣಾ ವೇಳೆ ಆಡಳಿತಾರೂಢ ಬಿಜೆಪಿಗೆ ಕಠಿಣ ಸ್ಪರ್ಧೆ ನೀಡಿದ್ದ ಕಾಂಗ್ರೆಸ್ ಗುಜರಾತ್ ಅನ್ನು ಕೇಂದ್ರೀಕರಿಸುತ್ತಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.