ಗದಗ, ಶಿವಮೊಗ್ಗ, ವಿಜಯಪುರದಲ್ಲಿ ಧಾರಾಕಾರ ಮಳೆಯಾಗಿದೆ.. ಗದಗ ಜಿಲ್ಲೆಯ ಹಲವೆಡೆ ಆಲಿಕಲ್ಲು ಸಮೇತ ಧಾರಾಕಾರ ಮಳೆಯಾಗಿದೆ. ಶಿವಮೊಗ್ಗ ಗ್ರಾಮೀಣ ಭಾಗಗಳಲ್ಲಿ ಮಳೆಯಿಂದಾಗಿ ಅಪಾರ ಪ್ರಮಾಣ ಬೆಳೆ ಹಾನಿಯಾಗಿದೆ.
ಬಂಗಾಳಕೊಲ್ಲಿಯಲ್ಲಿ ಮತ್ತೊಂದು ಚಂಡಮಾರುತ ಬೀಸುವ ಸಾಧ್ಯತೆ ಹಿನ್ನೆಲೆಯಲ್ಲಿ ಮುಂದಿನ ೫ ದಿನಗಳ ಕಾಲ ಕರ್ನಾಟಕ ಸೇರಿದಂತೆ ದಕ್ಷಿಣ ರಾಜ್ಯಗಳ ವಿವಿಧ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ, ಜುಲೈ 25 ರಂದು ನಿಗದಿಯಾಗಿದ್ದ ಕೆ-ಸಿಇಟಿ 2021 ಪರೀಕ್ಷೆಗಳನ್ನು ಮುಂದೂಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಕೋರಿದ್ದಾರೆ.
ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯಿಂದಾಗಿ ಮೂರು ಜನ ಸಾವನ್ನಪ್ಪಿದ್ದಾರೆ, ಎಂಟು ಸ್ಥಳಗಳಲ್ಲಿ ಭೂಕುಸಿತ ಸಂಭವಿಸಿದೆ ಮತ್ತು ಸುಮಾರು 9,000 ಜನರನ್ನು ಸ್ಥಳಾಂತರಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದ ಮಲೆನಾಡು, ಕರಾವಳಿ ಮತ್ತು ಉತ್ತರ ಒಳನಾಡು, ದಕ್ಷಿನ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಇದು ಇಂದು ನಾಳೆ, ನಾಡಿದ್ದು ಅಂದ್ರೆ ಮೂರು ದಿನವೂ ಮುಂದುವರೆಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಇಲಾಖೆ ತಿಳಿಸಿದೆ.
ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ನೈಋತ್ಯ ಮುಂಗಾರು ಜೂನ್ನಿಂದ-ಸೆಪ್ಟೆಂಬರ್ ನಲ್ಲಿ ದೇಶಾದ್ಯಂತ ಮಳೆಯ ಪ್ರಮಾಣ ಸಾಮಾನ್ಯವಾಗಿರಲಿದೆ. ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆ ಶುರುವಾಗಲಿದೆ.
ರಾಜ್ಯದ ಮಲೆನಾಡಿನ ಭಾಗದಲ್ಲಿ ಇಂದು ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಈ ವಾರಾಂತ್ಯದಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
ಕರಾವಳಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗಲಿದ್ದು, ಜೂನ್ 27ರಿಂದ ರಾಜ್ಯಾದ್ಯಂತ ಬಹುತೇಕ ಪ್ರದೇಶಗಳಲ್ಲಿ ವರುಣನ ಆರ್ಭಟ ಹೆಚ್ಚಲಿದೆ. ಜೂನ್ 30ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.