ಕಲ್ಪತರು ನಾಡು ತುಮಕೂರಿನಲ್ಲಿ ವರುಣನ ಅಬ್ಬರ ಕಡಿಮೆ ಆಗ್ತಾನೇ ಇಲ್ಲ. ಜಿಲ್ಲೆಯ ತಿಪಟೂರಿನಲ್ಲಿ ಸುರಿದ ಭಾರಿ ಮಳೆಗೆ ರಸ್ತೆಗಳು ತುಂಬಿ ಹರಿದಿದೆ. ಕಳೆದ ಕೆಲವು ದಿನಗಳಿಂದ ಮಾಯವಾಗಿದ್ದ ಮಳೆರಾಯ ತುಮಕೂರಿನ ತಿಪಟೂರಿನಲ್ಲಿ ಅಬ್ಬರಿಸಿ ಬೊಬ್ಬರಿದಿದ್ದಾನೆ.
ಚಿಕ್ಕಬಳ್ಳಾಪುರ ನಗರದಲ್ಲಿ ಮಳೆ ಅವಾಂತರ ಮುಂದುವರೆದಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳಿಗೆ ಮಳೆ ನೀರು ನುಗ್ಗಿದೆ. ಚಿಕ್ಕಬಳ್ಳಾಪುರ ನಗರದ ಮಂಚನಬಲೆ ಅಂಡರ್ ಪಾಸ್ ಜಲಾವೃತವಾಗಿದೆ.
ಗಡಿಜಿಲ್ಲೆ ಚಾಮರಾಜನಗರದಲ್ಲಿ ಮಳೆರಾಯನ ಅಬ್ಬರ ಮುಂದುವರೆದಿದೆ. ಯಳಂದೂರು ತಾಲೂಕಿನ ಮಾಂಬಳ್ಳಿ ಪೊಲೀಸ್ ಠಾಣೆ ಜಲಾವೃತವಾಗಿದೆ. ಮಾಂಬಳ್ಳಿ ಠಾಣೆ ತುಂಬೆಲ್ಲಾ 3-4 ಅಡಿ ನೀರು ನಿಂತು ಅವಾಂತರ ಸೃಷ್ಟಿಸಿದೆ.
ಬೆಂಗಳೂರಿನ ದಿಕ್ಕು ದಿಕ್ಕುಗಳಲ್ಲೂ ಮಳೆ ಅಲ್ಲೋಲ ಕಲ್ಲೋಲ ಸೃಷಿಸಿದೆ. ನಗರದೆಲ್ಲೆಡೆ ಇನ್ನೂ ಐದು ದಿನ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಬೆಂಗಳೂರು ದಕ್ಷಿಣ ವಿಭಾಗದ ಡಿಡಿಪಿಐ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಬೆಂಗಳೂರಿನಲ್ಲಿ ಭಾರಿ ಮಳೆಯಾಗೋ ಮುನ್ಸೂಚನೆ ನೀಡಲಾಗಿದೆ. ಜೋರು ಗಾಳಿ, ಗುಡುಗು ಮಿಂಚಿನೊಂದಿಗೆ ಮಳೆಯಾಗೋ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಬೆಂಗಳೂರು ನಗರ, ಬೆಂ.ಗ್ರಾಮಾಂತರ, ರಾಮನಗರ, ಮೈಸೂರು, ಮಂಡ್ಯ, ಕೋಲಾರ ಜಿಲ್ಲಾಧಿಕಾರಿಗಳಿಗೆ ಅಲರ್ಟ್ ನೀಡಲಾಗಿದೆ.
ರಾಯಚೂರು ಜಿಲ್ಲೆಯಾದ್ಯಂತ ಮಳೆರಾಯನ ಅಬ್ಬರ ಜೋರಾಗಿದೆ. ರಾಯಚೂರಿನ ಸಿರವಾರ-ಕುರುಕುಂದ ಬಳಿ ನೀರಿನ ರಭಸಕ್ಕೆ ಕಾಲುವೆ ಒಡೆದುಹೋಗಿದೆ. ಕಳಪೆ ಕಾಮಗಾರಿಯಿಂದ ಕಾಲುವೆ ಒಡೆದು ಹೋಗಿದ್ದು, ಏಕಾಏಕಿ ಅಕ್ಕಪಕ್ಕದ ಹೊಲ-ಗದ್ದೆಗಳಿಗೆ ನೀರು ನುಗ್ಗಿದೆ.
ರಾಜ್ಯದೆಲ್ಲೆಡೆ ಮತ್ತೆ ಮಳೆ ಅಬ್ಬರಿಸಿದೆ. ಹಾವೇರಿ ಗ್ರಾಮೀಣ ಭಾಗದ ಜನರು ಮಳೆಯಿಂದ ನಲುಗಿ ಹೋಗಿದ್ದಾರೆ. ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಿಂದ ಹೊರಬರದೇ ಜನ ಮನೆಯಲ್ಲೇ ಕುಳಿತುಕೊಳ್ಳುವಂತಾಗಿದೆ. ಅಧಿಕಾರಿಗಳ ವಿರುದ್ದ ಜನತೆಆಕ್ರೋಶ ವ್ಯಕ್ತಪಡಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.