ಸಕ್ಕರೆ ನಾಡಿನಲ್ಲಿ ಮಂಡ್ಯದಲ್ಲಿ ಮತ್ತೆ ಮಳೆರಾಯನ ಅಬ್ಬರ ಮುಂದುವರಿದಿದೆ. ರಾತ್ರಿ ಸುರಿದ ಧಾರಾಕಾರ ಮಳೆಗೆ ಮಂಡ್ಯದ ಮದ್ದೂರು ತಾಲೂಕಿನ ಮಾದ ನಾಯಕನಹಳ್ಳಿಯಲ್ಲಿ ರಸ್ತೆ ಕೊಚ್ಚಿ ಹೋಗಿದೆ. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಗ್ರಾಮಸ್ಥರು ಆಕ್ರೋಶ ಹೊರ ಹಾಕಿದ್ದಾರೆ.
ಕೊಪ್ಪಳದ ತುಂಗಭದ್ರಾ ನದಿ ಪಾತ್ರದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಜಲಾಶಯದಿಂದ 1 ಲಕ್ಷದ 50 ಸಾವಿರ ಕ್ಯೂಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಬೆನ್ನೂರು ಗ್ರಾಮದ ಹೊಳೆ ಬಸವೇಶ್ವರ ದೇವಸ್ಥಾನ ಬಾಗಶಃ ಮುಳುಗಡೆಯಾಗಿದೆ. ದೇವಸ್ಥಾನ ಸುತ್ತಮುತ್ತಲಿನ ಭತ್ತದ ಗದ್ದೆಗಳಿಗೂ ನೀರು ನುಗ್ಗಿದೆ.
ಮಹಾರಾಷ್ಟ್ರದಲ್ಲಿ ಎಡಬಿಡದೆ ಮಳೆ ಅಬ್ಬರಿಸುತ್ತಿದ್ದು, ಸತತ ಮಳೆಯಿಂದ ಜನ ಕಂಗೆಟ್ಟಿದ್ದಾರೆ.. ಪೇಠ ತಾಲೂಕಿನ ನಾಸಿಕ್ ಗ್ರಾಮದಲ್ಲಿ ಸೇತುವೆ ಇಲ್ಲದ ಕಾರಣ ಮಕ್ಕಳು ಪ್ರತಿದಿನ ನದಿ ದಾಟಿ ಶಾಲೆಗೆ ಹೋಗುತ್ತಿದ್ದಾರೆ.. ಪೋಷಕರು ಮಕ್ಕಳನ್ನು ಭುಜದ ಮೇಲೆ ಅಥವಾ ದೊಡ್ಡ ಪಾತ್ರೆಗಳಲ್ಲಿ ಕೂರಿಸಿ ನದಿ ದಾಟಿಸುತ್ತಿದ್ದಾರೆ.
ಗಾಳಿ ಮಿಂಚು ಗುಡುಗು ಸಹಿತ ಮಳೆ ಸಾಧ್ಯತೆ ಇದ್ದು, ವೇಗ 30-40 ವೇಗದಲ್ಲಿ ಗಾಳಿಯ ಬೀಸಲಿದೆ ಹೀಗಾಗಿ ಅಗತ್ಯ ಕ್ರಮ ಮತ್ತು ಎಚ್ಚರ ವಹಿಸುವಂತೆ ಇಲಾಖೆಯಿಂದ 20 ಜಿಲ್ಲೆಗಳ ಜಿಲ್ಲಾ ಅಧಿಕಾರಿಗಳಿಗೆ ಅಲರ್ಟ್ ಸಂದೇಶ ರವಾನಿಸಿದೆ.
ಬೆಂಗಳೂರಿನ ಮಹದೇವಪುರದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ರಾತ್ರಿಯಿಡೀ ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ಎರಡು ಅಡಿಗಿಂತ ಅಧಿಕ ನೀರು ನಿಂತಿತ್ತು, ಮಳೆಯಿಂದಾಗಿ ಸುತ್ತ-ಮುತ್ತಲಿನ ಭಾಗದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆಯೂ ತಲೆದೂರಿತ್ತು.
ನೆನ್ನೆರಾತ್ರಿ ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು ಜಣ ನ ಜೀವನ ಅಸ್ತವ್ಯಸ್ಥಗೊಂಡು ಜನರ ಪರದಾಡು ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯ ನಗರದಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ನಗರದ ರಸ್ತೆಗಳು ಕಾಲುವೆಯಂತಾಗಿ ಜನರು ಮತ್ತು ವಾಹನ ಸವಾರರು ಪರದಾಡುವಂತಾಗಿತ್ತು.
ನೆನ್ನೆರಾತ್ರಿ ಮಂಡ್ಯ ಜಿಲ್ಲೆಯಾದ್ಯಂತ ಧಾರಾಕಾರ ಮಳೆ ಸುರಿದಿದ್ದು ಜಣ ನ ಜೀವನ ಅಸ್ತವ್ಯಸ್ಥಗೊಂಡು ಜನರ ಪರದಾಡು ಪರಿಸ್ಥಿತಿ ನಿರ್ಮಾಣವಾಗಿದೆ. ಮಂಡ್ಯ ನಗರದಲ್ಲಿ ರಾತ್ರಿ ಸುರಿದ ಭಾರೀ ಮಳೆಗೆ ನಗರದ ರಸ್ತೆಗಳು ಕಾಲುವೆಯಂತಾಗಿ ಜನರು ಮತ್ತು ವಾಹನ ಸವಾರರು ಪರದಾಡುವಂತಾಗಿತ್ತು.
ಯಾದಗಿರಿ ಜಿಲ್ಲೆಯಲ್ಲಿ ಮಳೆಯ ಆವಾಂತರಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಅತಿಯಾದ ಮಳೆಗೆ ರೈತರು ಕಂಗಲಾಗಿದ್ದು, ಜಿಲ್ಲಾಡಳಿತ ಹಾಗೂ ಸರ್ಕಾರ ಮಳೆಹಾನಿ ಪ್ರದೇಶಗಳ ಸಮೀಕ್ಷೆ ಮಾಡಿ ಸೂಕ್ತ ಪರಿಹಾರ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೈವಾರದಲ್ಲಿ ಭಾರೀ ಮಳೆಯಾಗಿದೆ. ಕೈವಾರ ಗ್ರಾಮದಲ್ಲಿ ಮನೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಸಿದೆ. ತಗ್ಗು ಪ್ರದೇಶದ ಮನೆಗಳಿಗೆ ಮಳೆ ನೀರು ನುಗ್ಗಿದ್ದು, ಮನೆಗಳಲ್ಲಿದ್ದ ದವಸ ಧಾನ್ಯ ಹಾನಿಯಾಗಿವೆ. ಮಹಾಮಳೆಯಿಂದ ರಾತ್ರಿಯಿಡೀ ಗ್ರಾಮಸ್ಥರು ಜಾಗರಣೆ ಮಾಡುವಂತಾಗಿದೆ.
ಮಳೆಯ ಹೊಡೆತಕ್ಕೆ ಸಿಲುಕಿದ ಕರುನಾಡಿನ ಸೇತುವೆಗಳು ಜಲಾವೃತವಾಗಿದೆ.. ಸಂಚಾರ ಅಸ್ತವ್ಯಸ್ತವಾಗಿದೆ.. ನಿರಂತರ ಮಳೆಯಿಂದ ಜನರು ಹೈರಾಣರಾಗಿದ್ದಾರೆ.. ಈ ಕುರಿತದ ಒಂದು ಸಂಪೂರ್ಣ ವರದಿ ಇಲ್ಲಿದೆ ನೋಡಿ..
IMD ರಾಜ್ಯದ ಕೆಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಉಡುಪಿ ಜಿಲ್ಲೆಯ ಬಡಾಕೆರೆ ಗ್ರಾಮದಲ್ಲಿ ಮಳೆಯ ಆರ್ಭಟ ಮುಂದುವರಿದಿದ್ದು, ಅಪಾರ ಪ್ರಮಾಣದ ಜಮೀನು ಮಳೆ ನೀರಿನಿಂದ ಜಲಾವೃತಗೊಂಡಿದೆ.
ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ಕೆಲ ಜಿಲ್ಲೆಯಗಳಲ್ಲಿ ಮಳೆಯ ಅರ್ಭಟ ಹೆಚ್ಚಾಗಿದೆ. ಅರಬ್ಬಿಸಮುದ್ರದಲ್ಲಿ ಮಲ್ಮೈ ಸುಳಿಗಾಳಿಯಿಂದಾಗಿ ಮುಂದಿನ 3
ದಿನ ದಕ್ಷಿಣ ಕನ್ನಡ, ಉಡುಪಿಯಲ್ಲಿ ಭಾರೀ ಮಳೆಯಾಗಲಿದೆ ಎಂದು ತಿಳಿಸಲಾಗಿದೆ.
ದೆಹಲಿ ಸೇರಿದಂತೆ ದೇಶದ ಬಹುತೇಕ ರಾಜ್ಯಗಳಲ್ಲಿ ನೈಋತ್ಯ ಮುಂಗಾರು ಚುರುಕಾಗಿ ಮುಂದುವರೆದಿದೆ. ಇದಲ್ಲದೇ ಇನ್ನೂ ಮುಂಗಾರು ಆಗಮಿಸದ ಪ್ರದೇಶಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಪ್ರವೇಶವಾಗಲಿದೆ.
Monsoon Update 2022: ಭಾರತೀಯ ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಈ ಬಾರಿ ದೆಹಲಿ ಮತ್ತು ಎನ್ಸಿಆರ್ ನಲ್ಲಿ ಮಾನ್ಸೂನ್ ನಿಗದಿತ ಸಮಯಕ್ಕೆ ತಲುಪುವ ಸಾಧ್ಯತೆಯಿದೆ. ಯಾವ ರಾಜ್ಯಗಳಲ್ಲಿ ಇಂದು ಭಾರೀ ಮಳೆಯ ಎಚ್ಚರಿಕೆ ಇದೆ ಮತ್ತು ಯಾವ ದಿನಾಂಕದಂದು ಮುಂಗಾರು ಅಂತಿಮವಾಗಿ ದೆಹಲಿಗೆ ಅಪ್ಪಳಿಸಲಿದೆ ಎಂದು ತಿಳಿಯೋಣ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.