ಪ್ರಧಾನಿ ನರೇಂದ್ರ ಮೋದಿಯವರ ತಾಯಿ ಹೀರಾಬೇನ್ ನಿಧನಕ್ಕೆ ಮುಖ್ಯಮಂತ್ರಿಗಳು ಸಂತಾಪ ಸೂಚಿಸಿದ್ದಾರೆ. ಪ್ರಧಾನಿ ಮೋದಿಯವರು ಹಾಗೂ ಪೂಜ್ಯ ತಾಯಿ ಹೀರಾಬೇನ್ ಅವರದು ಆದರ್ಶಮಯವಾದ ತಾಯಿ ಮಗನ ಸಂಬಂಧ ಎಂದು ಸಿಎಂ ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನ ಹಿನ್ನೆಲೆಯಲ್ಲಿ ಬಿಜೆಪಿ ಮುಖಂಡರು ಶೋಕ ಗೀತೆ ಮೂಲಕ ಸಂತಾಪ ಸೂಚಿಸಿದರು. ಬೀದರ್ನಲ್ಲಿ ನಡೆದ ಶೋಕ ಸಂತಾಪ ಕಾರ್ಯಕ್ರಮದಲ್ಲಿ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್ ಸೇರಿದಂತೆ ಹಲವರು ಭಾಗಿಯಾಗಿದ್ದರು.
ಪ್ರಧಾನಿ ನರೇಂದ್ರ ಮೋದಿಗೆ ಮಾತೃ ವಿಯೋಗವಾಗಿದೆ. ಪ್ರಧಾನಿ ನರೇಂದ್ರ ಮೋದಿ ತಾಯಿ ಹೀರಾಬೆನ್ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಹೀರಾಬೆನ್ ಅಹಮದಾಬಾದ್ U.N.ಮೆಹ್ತಾ ಆಸ್ಪತ್ರೆಗೆ ದಾಖಲಾಗಿದ್ದರು.
PM Modi mother Heeraben Modi passed away: ಹೀರಾಬೆನ್ ಅವರು ಪ್ರಧಾನಿ ಮೋದಿಯವರ ಕಿರಿಯ ಸಹೋದರ ಪಂಕಜ್ ಮೋದಿ ಅವರೊಂದಿಗೆ ಗಾಂಧಿನಗರ ನಗರದ ರೈಸನ್ ಗ್ರಾಮದಲ್ಲಿ ವಾಸಿಸುತ್ತಿದ್ದರು. ಪ್ರಧಾನಿಯವರು ಸಮಯ ಮಾಡಿಕೊಂಡು ಆಗಾಗ್ಗೆ ತಾಯಿಯನ್ನು ಭೇಟಿಯಾಗುತ್ತಿದ್ದರು. ಹೀರಾಬೆನ್ ಮೋದಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಗುರುವಾರ ಹೇಳಿಕೆ ನೀಡಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.