ಇಂತಹ ಸಂದರ್ಭದಲ್ಲಿ ಮತ್ತೆ ಹಿಜಾಬ್ ತರುತ್ತೇವೆ ಎನ್ನುತ್ತಿದ್ದಾರೆ ಸರ್ವರನ್ನ ಒಳಗೊಳ್ಳುವ ಆಲೋಚನೆ ರಾಜ್ಯ ಸರ್ಕಾರಕ್ಕೆ ಇಲ್ಲ ಸಿಎಂ ವಿರುದ್ಧ ಉಡುಪಿಯಲ್ಲಿ ಕೋಟ ಶ್ರೀನಿವಾಸ್ ಪೂಜಾರಿ ಕಿಡಿ
Anantkumar Hegde: ಸಿದ್ದರಾಮಯ್ಯನವರಿಗೆ ದಮ್ ಇದ್ರೆ ಹಿಂದೂ ರಾಷ್ಟ್ರ ಆಗುವುದನ್ನ ತಡೆಯಲಿ. ಹಿಜಾಬಿನ ಹಿಂದೆ ತಿರುಗುವ ಈ ಸರ್ಕಾರಕ್ಕೆ ಹೆಚ್ಚು ದಿನ ಉಳಿಗಾಲವಿಲ್ಲ ಎಂದು ಸಂಸದ ಅನಂತಕುಮಾರ್ ಹೆಗಡೆ ಹೇಳಿದರು.
Karnataka hijab row 2023: ಪಿಎಫ್ಐ ಗೂಂಡಾಗಳು, ಅಲ್ಪಸಂಖ್ಯಾತರನ್ನು ಓಲೈಕೆ ಮಾಡಲು ವೋಟ್ ಬ್ಯಾಂಕ್ಗಾಗಿ ಸಿದ್ದರಾಮಯ್ಯನವರು ಸಂವಿಧಾನವನ್ನೇ ತಿದ್ದುಪಡಿ ಮಾಡಲು ಹೊರಟಿದ್ದಾರೆ. ಮುಂದಿನ ದಿನಗಳಲ್ಲಿ ಇದಕ್ಕೆ ಜನರೇ ತಕ್ಕ ಪಾಠ ಕಲಿಸುತ್ತಾರೆ ಎಂದು ಬಿಜೆಪಿ ಟೀಕಿಸಿದೆ.
Karnataka hijab row 2023: ಹಿಜಾಬ್ ಅನ್ನೋದು ನಮ್ಮ ಧರ್ಮ, ಇದನ್ನು ನಾವು ಪಾಲನೆ ಮಾಡಬೇಕಾಗಿದೆ. ಹಿಜಾಬ್ ವಿವಾದದಿಂದ ಅನೇಕ ಹುಡುಗಿಯರು ಶಿಕ್ಷಣದಿಂದ ವಂಚಿತ ಆಗಿದ್ದರು. ಶಿಕ್ಷಣದ ವಿಚಾರದಲ್ಲಿ ರಾಜಕೀಯ ಬೇಡ. ನಾವು ಅಣ್ಣ-ತಮ್ಮಂದಿರ ರೀತಿ ಇದ್ದೇವೆ. ಮುಂದೆಯೂ ಹೀಗೆಯೇ ಇರೋಣವೆಂದು ಮಂಡ್ಯದ ವಿದ್ಯಾರ್ಥಿನಿ ಮುಸ್ಕಾನ್ ಹೇಳಿದ್ದಾರೆ.
ಬಳ್ಳಾರಿ; ಹಿಜಾಬ್ ಪ್ರಕರಣ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನ ಅಂತಿಮ ತೀರ್ಪು ಬಹಳ ಮುಖ್ಯವಾಗಿದೆ. ಇದು ಕರ್ನಾಟಕಕ್ಕೆ ಸೀಮಿತವಾಗಿಲ್ಲ.ಇಡೀ ದೇಶದಲ್ಲಿರುವ ವಿಚಾರ. ಹೀಗಾಗಿ ಅಂತಿಮ ತೀರ್ಪು ಬರುವವರೆಗೂ ನಾವು ಕಾದು ನೋಡಬೇಕಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಇಂದು ಬಳ್ಳಾರಿ ಜಿಲ್ಲೆಯ ಹೂವಿನ ಹಡಗಲಿಯಲ್ಲಿ ಮಾಧ್ಯಮದವರೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾತನಾಡಿದರು.
ಕರ್ನಾಟಕದ ಶಾಲೆ ಕಾಲೇಜುಗಳಲ್ಲಿ ಹಿಜಾಬ್ ನಿಷೇಧಿಸಿ ಕರ್ನಾಟಕ ರಾಜ್ಯ ಸರ್ಕಾರ ಹೊರಡಿಸಿದ್ದ ಆದೇಶದ ಕುರಿತಾಗಿ ಇಂದು ಸುಪ್ರೀಂ ಕೋರ್ಟ್ನಲ್ಲಿ ವಿಚಾರಣೆ ನಡೆಯಲಿದೆ. ಕರ್ನಾಟಕ ಸರ್ಕಾರದ ಆದೇಶವನ್ನು ಕರ್ನಾಟಕ ಹೈಕೋರ್ಟ್ ಎತ್ತಿ ಹಿಡಿದಿತ್ತು. ಬಳಿಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು.
ಬೆಂಗಳೂರು: ಏಪ್ರಿಲ್ 22 ರಿಂದ ಮೇ 18 ರವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆಗೆ ಹಿಜಾಬ್ ಧರಿಸಿ ಬಂದರೆ ಪರೀಕ್ಷೆಗೆ ಅವಕಾಶ ನೀಡುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
10 ನೇ ತರಗತಿ ಮಾದರಿಯಲ್ಲೇ ದ್ವಿತೀಯ ಪಿಯು ಪರೀಕ್ಷೆಯನ್ನು ನಡೆಸಲು ಸರ್ಕಾರ ನಿರ್ಧರಿಸಿದೆ. ಹಾಗಾಗಿ ಪರೀಕ್ಷೆ ವೇಳೆ ಸಮವಸ್ತ್ರ ಇರುವ ಕಾಲೇಜುಗಳಲ್ಲಿ ಸಮವಸ್ತ್ರ ಪಾಲನೆ ಮಾಡುವುದು ಕಡ್ಡಾಯವಾಗಿದೆ.
Karnataka Hijab Controversy - ಶಿಕ್ಷಣ ಸಂಸ್ಥೆಗಳಲ್ಲಿ ಹಿಜಾಬ್ ನಿಷೇಧವನ್ನು ಪ್ರಶ್ನಿಸಿ ಸಲ್ಲಿಸಲಾದ ವಿವಿಧ ಅರ್ಜಿಗಳ ವಿಚಾರಣೆ ಸಂಬಂಧಿಸಿದಂತೆ ತನ್ನ ತೀರ್ಪನ್ನು ರಾಜ್ಯ ಹೈಕೋರ್ಟ್ (Karnataka High Court) ಶುಕ್ರವಾರ ಕಾಯ್ದಿರಿಸಿದೆ.
ಉತ್ತರ ಪ್ರದೇಶದ ಅಲಿಗಢದ ಡಿಎಸ್ ಕಾಲೇಜು ಸಮವಸ್ತ್ರ ಧರಿಸುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸುತ್ತೋಲೆ ಹೊರಡಿಸಿದೆ. ನಿಯಮಗಳನ್ನು ಉಲ್ಲಂಘಿಸಿದ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವ ಎಚ್ಚರಿಕೆ ನೀಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.