ಹಾಸನದಲ್ಲಿ ಹಿಜಾಬ್ v/s ಕೇಸರಿ ಶಾಲು ವಿವಾದ ಮತ್ತೆ ಶುರು ಖಾಸಗಿ ಕಾಲೇಜಿನಲ್ಲಿ ಹಿಜಾಬ್ ಧರಿಸಿದ ಸ್ಟೂಡೆಂಟ್ಸ್ ವಿರುದ್ಧ ಫೈಟ್ ಕೇಸರಿ ಶಾಲು ಹೊದಿಸಿ ಪ್ರತಿಭಟನೆ ನಡೆಸಿದ ಹಿಂದೂ ವಿದ್ಯಾರ್ಥಿಗಳು
ಕಾಂಗ್ರೆಸ್ ಪಕ್ಷ ತುಷ್ಟೀಕರಣದ ರಾಜಕೀಯದ ಮೊರೆ ಹೋಗಿದೆ. ಲೋಕಸಭೆ ಚುನಾವಣೆ ಹತ್ತಿರ ಬರುತ್ತಿದ್ದಂತೆ ತುಷ್ಟೀಕರಣ ರಾಜಕೀಯ. ಕನ್ನಡಿಗರು ಇದಕ್ಕೆ ತಕ್ಕ ಪಾಠ ಕಲಿಸಲಿದ್ದಾರೆ ಎಂದ ಆರ್.ಅಶೋಕ್ .
ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿಯರಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಶಿಕ್ಷಣ ಸಚಿವ ಸುಧಾಕರ್ ಈ ಮಾಹಿತಿ ನೀಡಿದ್ದಾರೆ.
Karnataka hijab Row : ಮಾರ್ಚ್ 9 ರ ಪರೀಕ್ಷೆಗೆ ಕುಳಿತುಕೊಳ್ಳಲು ಅವಕಾಶವಾಗುವಂತೆ ವಿದ್ಯಾರ್ಥಿಗಳು ಪರಿಹಾರವನ್ನು ಕೋರುತ್ತಿದ್ದಾರೆ ಎಂದು ವಿದ್ಯಾರ್ಥಿಗಳ ಪರ ವಕೀಲ ಶಾದನ್ ಫರಾಸತ್ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಆ ಬಿಜೆಪಿ ಪಕ್ಷದಲ್ಲಿ ಜನ ನೆಮ್ಮದಿಯಾಗಿರೋದನ್ನ ಬಯಸೋದಿಲ್ಲ,ದಿನಾ ಒಂದೊಂದು ಕಾಂಟ್ರವರ್ಸಿ ಸೃಷ್ಟಿಸಲಾಗುತ್ತಿದೆ. ಈ ಹಿಂದೆ ಹಿಜಾಬ್ ಆಯ್ತು, ಈಗ ಮತ್ತೊಂದು ಹಿಂದುತ್ವ ತಗೊಂಡು ಕೂತಿದ್ದಾರೆ ಎಂದು ಜೆಡಿಎಸ್ ಶಾಸಕ ರವೀಂದ್ರ ಶ್ರೀಕಂಠಯ್ಯ ಕಿಡಿ ಕಾರಿದ್ದಾರೆ.
ರಾಜ್ಯಾದ್ಯಂತ ಮೂರು ದಿನಗಳ ಕಾಲ ಸಿಇಟಿ ಪರೀಕ್ಷೆಗಳು ನಡೆಯಲಿವೆ. ಜೂನ್ 16, 17, 18 ರಂದು 3 ದಿನ ನಡೆಯಲಿದೆ ಸಿಇಟಿ ಪರೀಕ್ಷೆ ನಡೆಯಲಿದೆ. ಈ ಬಾರಿ ನೀಟ್ ಮಾದರಿಯಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ.
ಹಿಜಾಬ್ ಧರಿಸಿ ಸರ್ಕಾರಿ ನಿಯಮಾವಳಿಯನ್ನು ಉಲ್ಲಂಘಿಸಿ ತರಗತಿಗೆ ಪ್ರವೇಶಿಸುತ್ತಿದ್ದ 24 ವಿದ್ಯಾರ್ಥಿನಿಯರನ್ನು ಅಮಾನತು ಮಾಡಲಾಗಿತ್ತು. ಇದಕ್ಕೂ ಮೊದಲು 6 ಜನ ವಿದ್ಯಾರ್ಥಿನಿಯರು ಅಮಾನತು ಆಗಿದ್ದರು, ಅವರು ಇಂದು ಕಾಲೇಜಿಗೆ ಹಾಜರಾಗಿದ್ದಾರೆ.
ದಕ್ಷಿಣ ಕನ್ನಡದ ಉಪ್ಪಿನಂಗಡಿ ಪಿಯು ಕಾಲೇಜಿನಲ್ಲಿ ಹಿಜಾಬ್ ಧರಿಸಿಕೊಂಡೇ ತರಗತಿಗೆ ಬರುತ್ತಿದ್ದ 6 ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ. ಇಲ್ಲಿ 6 ಹುಡುಗಿಯರು ಹಿಜಾಬ್ ಇಲ್ಲದೆ ತರಗತಿಗೆ ಹಾಜರಾಗಲು ಸಿದ್ಧರಿರಲಿಲ್ಲ ಎಂದು ಹೇಳಲಾಗಿದೆ.
ರಾಜ್ಯವಲ್ಲದೆ ಇಡೀ ವಿಶ್ವದಲ್ಲೇ ವಿವಾದಕ್ಕೆ ಕಾರಣವಾಗಿದ್ದ ಹಿಜಾಬ್ ವಿವಾದ ಮುಗಿಯುವಂತೆ ಕಾಣುತ್ತಿಲ್ಲ. ಹೈಕೋರ್ಟ್ ತೀರ್ಪಿನ ಬಳಿಕ ತಣ್ಣಗಾಗಿದ್ದ ಹಿಜಾಬ್ ಇದೀಗ ಮತ್ತೆ ಶುರುವಾಗಿದೆ. ಮಂಗಳೂರಿನ ಯೂನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ಹಾಕಲು ಕೆಲ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿದ್ದಾರೆಂದು ಆರೋಪ ಕೇಳಿಬಂದಿದೆ. ಈ ಹಿನ್ನೆಲೆಯಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿನಿಯರು ಮಂಗಳೂರಿನ ಹಂಪನಕಟ್ಟೆಯ ಕ್ಯಾಂಪಸ್ನಲ್ಲಿ ಪ್ರತಿಭಟನೆ ನಡೆಸಿದ್ದಾರೆ. ನಮಗೂ ಕೂಡ ಕಾಲೇಜಿಗೆ ಬರುವಾಗ ಕೇಸರಿ ಶಾಲು ಧರಿಸಲು ಅವಕಾಶ ನೀಡಿಬೇಕೆಂದು ಆಗ್ರಹಿಸಿದ್ದಾರೆ.
ಕೊಂಚ ಕಾಲ ತಣ್ಣಗಿದ್ದ ಹಿಜಾಬ್ ವಿವಾದ ಮತ್ತೆ ಗರಿಗೆದರಿದೆ. ಇಂದು ಏಕಾಏಕಿ ಮಂಗಳೂರಿನ ಯುನಿವರ್ಸಿಟಿ ಕಾಲೇಜಿನಲ್ಲಿ ಹಿಜಾಬ್ ಧಾರಿಣಿ ವಿದ್ಯಾರ್ಥಿನಿಯರ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ. ಆದರೆ ಕಾಲೇಜಿನಿಂದ ಸಕಾರಾತ್ಮಕ ಸ್ಪಂದನೆ ದೊರಕದ ಹಿನ್ನೆಲೆಯಲ್ಲಿ, ಹಿಜಾಬ್ ಧರಿಸಲು ಅವಕಾಶ ಕೊಡಬೇಕೆಂದು ವಿದ್ಯಾರ್ಥಿಯರು ಇದೀಗ ಡಿಸಿ ಕಚೇರಿ ಮೆಟ್ಟಿಲೇರಿದ್ದಾರೆ.
Hijab Row: ಹಿಜಾಬ್ ವಿವಾದ ಸಂಬಂಧ ಈ ಹಿಂದೆ ಕರ್ನಾಟಕ ಹೈಕೋರ್ಟ್ ನೀಡಿದ್ದ ತೀರ್ಪಿನ ವಿರುದ್ಧ ಸಲ್ಲಿಸಲಾದ ಮೇಲ್ಮನವಿಯನ್ನು ಇಂದು ನ್ಯಾಯಮೂರ್ತಿ ಎನ್ವಿ ರಮಣ ಅವರ ಮುಂದೆ ಪ್ರಸ್ತಾಪಿಸಲಾಯಿತು.
ಹಿಜಾಬ್ ವಿವಾದದ ಹಿಂದೆ ದೊಡ್ಡ ಕೈವಾಡವಿದೆ ಎಂದು ರಘುಪತಿ ಭಟ್ ಹೇಳಿದ್ದಾರೆ. ಬೆಳಗ್ಗೆ ಹಿಜಾಬ್ ತೆಗೆದು ಹಾಲ್ ಟಿಕೆಟ್ ಪಡೆದಿದ್ದಾರೆ. ನಂತರ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿನಿಯರು ಹೈಡ್ರಾಮ ಮಾಡಿದ್ದಾರೆ ಎಂದು ಅವರು ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.