ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗೆ ಸಹಾಯ ವಾಣಿ ಓಪನ್ ಮಾಡ್ತಿದ್ದೀವಿ.. ದೂರು ಕೊಟ್ಟರೆ ಕೂಡಲೇ ಕ್ರಮಕ್ಕೆ ಸೂಚನೆ ನೀಡಿದ್ದೇನೆ ಅಂತಾ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.. ಇನ್ನು ಹಲವು ಮಂದಿ ಸಚಿವರು ಕೂಡಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.. ಯಾರು ಏನಂದ್ರು ಇಲ್ಲಿದೆ ನೋಡಿ..
Minister H.K. Patil: ಬೆಂಗಳೂರು ಅರಮನೆ ಮೈದಾನದ ಜಾಗವನ್ನು ಬಳಸಿಕೊಳ್ಳಲು ಮತ್ತು ನಿಯಂತ್ರಿಸಲು ಸುಗ್ರಿವಾಜ್ಞೆ ಹೊರಡಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ ರವರು ತಿಳಿಸಿದರು.
ಸ್ಥಿತಿವಂತ ಮನೆತನದಿಂದ ಬಂದು ಉತ್ತಮ ವಿಧ್ಯೆ ಪಡೆದಿದ್ದ ಗಾಂಧೀಜಿ ಅವರು ವಕೀಲಿವೃತ್ತಿ ವೇಳೆ ದಕ್ಷಿಣ ಆಫ್ರಿಕಾದಲ್ಲಿನ ಸಮಾನತೆ ವಿರುದ್ಧ ಹೋರಾಡಿ ಜಾಗೃತಿ ಮೂಡಿಸಿದ ಪರಿ ನಂತರ ಭಾರತದಲ್ಲಿನ ಸ್ವಾತಂತ್ರ್ಯ ಹೋರಾಟದ ಸಂದರ್ಭದ ಅವರ ನಿಲುವುಗಳು ಇಂದಿನ ಜಾಗತಿಕ ಜನಾಂಗೀಯ ವೈಷಮ್ಯ, ಯುದ್ಧಾತಂಕಗಳನ್ನು ನಿವಾರಿಸುವ ಸುಲಭ ಮಂತ್ರಗಳಾಗಿವೆ.
ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆ ಎನ್ನಲಾದ ಸಾವಿರಾರು ಕೋಟಿ ರೂಪಾಯಿ ಕೋವಿಡ್ ಹಗರಣದ ತನಿಖೆಗೆ ವಿಶೇಷ ತನಿಖಾ ತಂಡ ರಚನೆ ಮಾಡಲು ರಾಜ್ಯ ಸಚಿವ ಸಂಪುಟ ಗುರುವಾರ ಒಪ್ಪಿಗೆ ನೀಡಿದೆ. ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್ ಕೆ ಪಾಟೀಲ್ ಅವರು, ಕೋವಿಡ್ ಹಗರಣ ಸಂಬಂಧ ರಾಜ್ಯ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿ ನೀಡಿದ್ದು, ಈ ಕುರಿತು ತನಿಖೆಗೆ ಎಸ್ಐಟಿ ರಚನೆ ಮಾಡಲಾಗುವುದು.
ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಮತ್ತು ಸಚಿವ ಹೆಚ್.ಕೆ. ಪಾಟೀಲ್ ಅವರು ವಿಪಕ್ಷ ನಾಯಕ ಆರ್.ಅಶೋಕ್ ವಿರುದ್ಧ ಗಂಭೀರ ಆರೋಪ ಮಾಡುವ ಮೂಲಕ ದಾಖಲೆಯನ್ನು ಬಿಡುಗಡೆ ಮಾಡಿದ್ದಾರೆ.
MLA Oath Ceremony: ವಿಧಾನಸಭೆ, ಶಿಕ್ಷಕರ ಕ್ಷೇತ್ರ ಹಾಗೂ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್ತಿಗೆ ಆಯ್ಕೆಯಾಗಿರುವ ನೂತನ 17 ಸದಸ್ಯರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ, ಸಿಎಂ ಸಿದ್ದರಾಮಯ್ಯ, ಕಾನೂನು ಹಾಗೂ ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಸೇರಿದರಂತೆ ರಾಜಕೀಯ ಗಣ್ಯರು ಭಾಗಿಯಾಗಿದ್ದರು.
ದಕ್ಷಿಣ ಭಾರತದ ಏಳೂ ರಾಜ್ಯಗಳಲ್ಲಿ ಪ್ರವಾಸೋದ್ಯಮಕ್ಕೆ ವಿಫುಲವಾದ ಅವಕಾಶಗಳಿವೆ. ಇವುಗಳ ಅಭಿವೃದ್ದಿಗೆ ಬಂಡವಾಳ ಹೂಡಿಕೆಯನ್ನು ಆಕರ್ಷಿಸಲು ಹಾಗೂ ಪ್ರವಾಸೋದ್ಯಮಕ್ಕೆ ಇರುವಂತಹ ಅವಕಾಶಗಳ ಬಗ್ಗೆ ಪ್ರಚುರ ಪಡಿಸುವ ಉದ್ದೇಶದಿಂದ ಎಫ್ಕೆಸಿಸಿಐ ಅವರ ಜೊತೆಗೂಡಿ ಈ ಉತ್ಸವವನ್ನ ಆಯೋಜಿಸಲಾಗಿದೆ.
ತಲಾ 2 ಲಕ್ಷ ರೂಪಾಯಿ ಚೆಕ್ ನೀಡಿದ ಹೆಚ್.ಕೆ.ಪಾಟೀಲ್ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮಕ್ಕೆ ಭೇಟಿ ಬ್ಯಾನರ್ ಹಾಕುವ ವೇಳೆ ವಿದ್ಯುತ್ ಸ್ಪರ್ಶಿಸಿ ಮೂವರು ಮೃತಪಟ್ಟಿದ್ರು
ಲೋಕಸಭಾ ಚುನಾವಣೆ ನಂತರ ಕಾದು ನೋಡಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಸರ್ಕಾರವನ್ನು ಅಭದ್ರಗೊಳಿಸುವಂತ ಮಾತುಗಳು ಯಾವ ಪುರುಷಾರ್ಥಕ್ಕೆ, ಉದ್ದೇಶ ಏನು? ಎಂದು ಪ್ರಶ್ನಿಸಿದರು.
ಪ್ರತಿಭಟನಾ ನಿರತರ ಸಮಸ್ಯೆಗಳನ್ನು ಆಲಿಸುವ ಬದಲು ಕಾಂಗ್ರೆಸ್ ಸರ್ಕಾರ ಪ್ರತಿಭಟನಾ ನಿರತರನ್ನು ಹತ್ತಿಕ್ಕುತ್ತಿದೆ. ಬೆಳಗಾವಿಯ ಸುವರ್ಣ ಸೌಧದ ಬಳಿ ಪೋಲಿಸಪ್ಪ ದರ್ಪದಿಂದ ಪ್ರತಿಭಟನಾಕಾರರ ವಿರುದ್ದ ತೊಡೆ ತಟ್ಟಿದ್ದೆ ಇದಕ್ಕೆ ಸಾಕ್ಷಿ ಎಂದು ಬಿಜೆಪಿ ಟ್ವೀಟ್ ಮಾಡಿದೆ.
ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಎಚ್ಕೆ ಪಾಟೀಲ್, ಡಿ.ಕೆ.ಶಿವಕುಮಾರ್ ಪ್ರಕರಣ ಸಿಬಿಐಗೆ ವಹಿಸಿರುವುದನ್ನು ವಾಪಸ್ಸು ಪಡೆಯಲು ಸಂಪುಟ ನಿರ್ಣಯ ಮಾಡಿದೆ.
ತಮಿಳುನಾಡಿಗೆ ರಾಜ್ಯದಿಂದ ನಿತ್ಯ 10,000 ಕ್ಯೂಸೆಕ್ಸ್ನಂತೆ 15 ದಿನಗಳ ಕಾಲ ನೀರು ಹರಿಸುವಂತೆ ಕಳೆದ ವಾರ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ನೀಡಿರುವ ಆದೇಶದ ವಿರುದ್ಧ ಸುಪ್ರೀಂ ಕೋರ್ಟ್ಗೆ ಸೋಮವಾರ ಮೇಲ್ಮನವಿ ಸಲ್ಲಿಸಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.