VISL Bhadravati:ಭದ್ರಾವತಿಯ VISL ಕಾರ್ಖಾನೆ ಮುಚ್ಚುವ ಬಗ್ಗೆ ಕೇಂದ್ರ ಸರ್ಕಾರ ಹೇಳಿಕೆ ನೀಡಿದ ವಿಚಾರಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ,ಪ್ರೋಸೆಸ್ ಶುರುವಾಗಿದೆ ಅಂದ್ರೆ ಮುಚ್ಚೆ ಆಯ್ತು ಅಂತಲ್ಲ,ಕೆಲವು ಪ್ರೋಸೆಸ್ ಶುರುವಾಗಿದೆ ಅಷ್ಟೇ.
ತನ್ನ ಗುಜರಾತ್ ಪ್ರವಾಸಕ್ಕೂ, ಸ್ಯಾಂಟ್ರೋ ರವಿ ಬಂಧನಕ್ಕೂ ತಳುಕು ಹಾಕಿ ಮಾತನಾಡುತ್ತಿರುವ ಕೆಲವು ನಾಯಕರ ಬಗ್ಗೆ ಪ್ರಸ್ತಾಪಿಸಿದ ಸಚಿವರು, "ನನ್ನ ಗುಜರಾತ್ ಪ್ರವಾಸ ಬಹಳ ಹಿಂದೆಯೇ ನಿಗದಿಯಾಗಿತ್ತು. ಹಾಗೂ ಪೊಲೀಸ್ ಇಲಾಖೆಯ ಹಿರಿಯ ಅಧಿಕಾರಿಗಳ ನಿಯೋಗದ ನೇತೃತ್ವ ವಹಿಸಿದ್ದ ನನ್ನ ಗುಜರಾತ್ ಭೇಟಿ ಹಾಗೂ ಕಾರ್ಯಕ್ರಮಗಳು, ಪಾರದರ್ಶಕವಾಗಿವೆ" ಎಂದು ಹೇಳಿದರು.
ಜಿಲ್ಲೆಯ ಕೊರಟಗೇರಿ ತಾಲೂಕಿನ ಕೊಳಾಲದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ವಸತಿ ಶಾಲೆ ಉದ್ಘಾಟನೆಗೆ ಬಂದಿದ್ದ ಗೃಹ ಸಚಿವ ಆರಗ ಜ್ಙಾನೇಂದ್ರ ಅವರ ಸಮ್ಮುಖದಲ್ಲಿ ಬಿಜೆಪಿ -ಕಾಂಗ್ರೆಸ್ ಕಾರ್ಯಕರ್ತರ ನಡುವೆ ಕಿತ್ತಾಟ ನಡೆದಿದೆ.ಇದೆ ವೇಳೆ ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್ ಅವರು ಉಪಸ್ಥಿತರಿದ್ದರು ಎನ್ನಲಾಗಿದೆ.
Home Minister Araga Jnanendra : ಆಟೋ ರಿಕ್ಷಾ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ನಾಳೆ ಮಂಗಳೂರಿಗೆ ಭೇಟಿ ನೀಡಿ, ಹಿರಿಯ ಅಧಿಕಾರಿ ಗಳೊಂದಿಗೆ ಸಭೆ ನಡೆಸಲಿದ್ದಾರೆ. ಮಂಗಳೂರು ಭೇಟಿ ಸಂದರ್ಭದಲ್ಲಿ ಸಚಿವರು, ಸ್ಫೋಟ ಘಟನೆಯಿಂದ ಗಾಯಗೊಂಡ ಆಟೋ ರಿಕ್ಷಾ ಚಾಲಕನನ್ನೂ ಭೇಟಿಯಾಗಿ ಸಾಂತ್ವನ ಹೇಳಲಿದ್ದಾರೆ.
ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿಯವರು ಹಿಂದೂ ಧರ್ಮದ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ. "ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು, ಧ್ವನಿಸಿದ್ದಾರೆ". - ಗೃಹ ಸಚಿವ ಆರಗ ಜ್ಞಾನೇಂದ್ರ
ಮೊನ್ನೆ ಮೊನ್ನೆಯಷ್ಟೇ ತುಮಕೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರ ಕಾಲಿಗೆ ಪೊಲೀಸ್ ಅಕಾಂಕ್ಷಿಗಳು ಬಿದಿದ್ದರು. ನಿನ್ನೆ ಗೃಹ ಸಚಿವರ ಕಾಲಿಗೆ ಬಿದ್ದು ಕಣ್ಣೀರಿಟ್ಟು ಬೇಡಿಕೆ ಈಡೇರಿಕೆಯ ಮನವಿ ಸಲ್ಲಿಸಿದ ಘಟನೆ ನಡೆದಿದೆ.
ಬೆಂಗಳೂರಿನ ಜಯಮಹಲ್ ರಸ್ತೆ ಬಳಿ ಇರುವ ಗೃಹ ಸಚಿವ ಆರಗ ಜ್ಞಾನೇಂದ್ರ ಅವರ ನಿವಾಸದ ಮೇಲೆ ಮುತ್ತಿಗೆಗೆ ಯತ್ನಿಸಿ ಹೈಡ್ರಾಮಾ ಸೃಷ್ಟಿಸಿದ್ದ ಅಖಿಲ ಭಾರತ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಪ್ರತಿಭಟನಾ ನಿರತ 40 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮಾಧ್ಯಮದವರೊಂದಿಗೆ ಇಂದು ಮಾತನಾಡಿದ ಅವರು, "ದೇಶದಲ್ಲಿ ಕಾಂಗ್ರೆಸ್ ನಾಯಕರಿಗೊಂದು ಕಾನೂನು, ಜನ ಸಾಮಾನ್ಯರಿಗೆ ಇನ್ನೊಂದು ಕಾನೂನು ಅಂತಾ ಸಂವಿಧಾನದಲ್ಲಿ ಇದೆಯೇ ಎಂದು ಜನತೆ ಪ್ರಶ್ನಿಸುತ್ತಿದ್ದಾರೆ" ಎಂದು ವಾಗ್ದಾಳಿ ನಡೆಸಿದರು.
ಬೆಳಗಾವಿ ಅಧಿವೇಶನದಲ್ಲಿ ಮಂಡಿಸಲಾದ ಮತಾಂತರ ನಿಷೇಧ (ತಿದ್ದುಪಡಿ) ವಿಧೇಯಕಕ್ಕೆ ವಿಧಾನ ಸಭೆಯಿಂದ ಅಂಗೀಕಾರ ಪಡೆಯಲಾಗಿದೆ. ಮೇಲ್ಮನೆಯಲ್ಲಿ ಮಂಡಿತವಾಗಿರುವ ಮಸೂದೆಗೆ ಮುಂದಿನ ಅಧಿವೇಶನದಲ್ಲಿ ಒಪ್ಪಿಗೆ ಪಡೆಯಲಾಗುವುದು- ಗೃಹ ಸಚಿವ ಆರಗ ಜ್ಞಾನೇಂದ್ರ
ಪೂನಾದಲ್ಲಿ ದಿವ್ಯಾ ಹಾಗರಗಿ ಅವರಿಗೆ ಆಶ್ರಯ ಕೊಟ್ಟಿರೋದು ಕಾಂಗ್ರೆಸ್ ನವರೇ.ಇದರ ಹಿಂದೆ ಕಾಂಗ್ರೆಸ್ ನವರು ಇದ್ದಾರೆ. ನಾವು ಯಾವುದೇ ಪಕ್ಷ ಪಂಗಡ ನೋಡದೆಯೇ, ಮೂಗು ತೂರಿಸದೇನೆ ತನಿಖೆ ಮಾಡಲು ಫ್ರೀಯಾಗಿ ಬಿಟ್ಟಿದ್ದೇವೆ
ಅಬ್ಬಯ್ಯನವ್ರ ವೋಟ್ ಬ್ಯಾಂಕ್ ರಾಜಕಾರಣಕ್ಕಿಂತ ರಾಜ್ಯದ ನೆಮ್ಮದಿ ಮುಖ್ಯ. ಇದು ಕಣ್ಣು ಒರೆಸುವ ತಂತ್ರ ಅಲ್ಲ. ನಮಗೆ ದೇಶದ ನೆಮ್ಮದಿ ಮೊದಲು, ದೇಶದ ಏಕತೆ ಮೊದಲು. ಯಾವ ಸಂಘಟನೆಯನ್ನ ರದ್ದು ಮಾಡಬೇಕು ಎನ್ನುವುದು ಕೇಂದ್ರ ಸರ್ಕಾರಕ್ಕೆ ಬಿಟ್ಟ ವಿಚಾರ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.